ಬುಧವಾರ, 24 ಏಪ್ರಿಲ್ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ಉತ್ತರ ಒಳನಾಡಿನಲ್ಲಿ ಭಾರಿ ಮಳೆ ಸಾಧ್ಯತೆ

Last Updated 17 ಆಗಸ್ಟ್ 2020, 2:46 IST
ಅಕ್ಷರ ಗಾತ್ರ

ಬೆಂಗಳೂರು: ರಾಜ್ಯದ ಉತ್ತರ ಒಳನಾ ಡು ಹಾಗೂ ಕರಾವಳಿಯಲ್ಲಿ ಮುಂಗಾರು ಬಿರುಸುಗೊಂಡಿರುವುದರಿಂದ ಆ.17ರಂದು ಭಾರಿ ಮಳೆ ಯಾಗುವ ಸಾಧ್ಯತೆ ಇದೆ ಎಂದು ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ.

14 ಜಿಲ್ಲೆಗಳಲ್ಲಿ ಯೆಲ್ಲೊ ಅಲರ್ಟ್: ಯಾದಗಿರಿ, ವಿಜಯಪುರ, ರಾಯಚೂರು, ಕೊಪ್ಪಳ, ಕಲಬುರ್ಗಿ, ಹಾವೇರಿ, ಗದಗ, ಧಾರವಾಡ, ಬೀದರ್, ಬೆಳಗಾವಿ, ಬಾಗಲಕೋಟೆ, ದಕ್ಷಿಣ ಕನ್ನಡ, ಉತ್ತರ ಕನ್ನಡ, ಉಡುಪಿ ಜಿಲ್ಲೆಗಳಲ್ಲಿ ಸೋಮವಾರದಂದು ಹೆಚ್ಚು ಮಳೆಯಾಗುವ ನಿರೀಕ್ಷೆ ಇರುವುದರಿಂದ 'ಯೆಲ್ಲೊ ಅಲರ್ಟ್' ಘೋಷಿಸಲಾಗಿದೆ.ಕರಾವಳಿ ಜಿಲ್ಲೆಗಳಲ್ಲಿ ಆ.19ರವರೆಗೆ ಹೆಚ್ಚು ಮಳೆಯಾಗಲಿದೆ. ಗಂಟೆಗೆ 50 ಕಿ.ಮೀ ವೇಗದಲ್ಲಿ ಗಾಳಿ ಬೀಸುತ್ತಿದ್ದು, 3.3 ಮೀಟರ್ ಗಳಷ್ಟು ಎತ್ತರದ ಅಲೆಗಳು ಏಳುವ ಸಾಧ್ಯತೆ ಇರು ವುದರಿಂದ ಮೀನುಗಾರರು ಕಡಲಿಗೆ ಇಳಿಯಬಾರದು ಎಂದು ಇಲಾಖೆ ಎಚ್ಚರಿಸಿದೆ.

ಮಳೆ-ಎಲ್ಲಿ, ಎಷ್ಟು?: ಬೆಳಗಾವಿಯಲ್ಲಿ 8 ಸೆಂ.ಮೀ ಗರಿಷ್ಠ ಮಳೆಯಾಗಿದೆ. ಕಂಪ್ಲಿ 7, ಆಗುಂಬೆ 6, ಹೊಸನಗರ 5, ಬೈಲಹೊಂಗಲ, ಧಾರವಾಡ 4, ಅಂಕೋಲಾ, ಹುನಗುಂದ, ಹುಕ್ಕೇರಿ, ನಿಪ್ಪಾಣಿ, ಚಿಂಚೋಳಿ, ಭಾಗಮಂಡಲ 3, ಉಡುಪಿ, ಕುಂದಾಪುರ, ಕಾರವಾರ, ಪುತ್ತೂರು, ರಾಮದುರ್ಗ, ನರಗುಂದ 2, ಮೂಡುಬಿದರೆ, ಸಾಗರ, ಸಕಲೇಶಪುರ, ಗಂಗಾವತಿಯಲ್ಲಿ ತಲಾ 1 ಸೆಂ.ಮೀ ಮಳೆಯಾಗಿದೆ.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT