ಬೆಂಗಳೂರು: ರಾಜ್ಯದಲ್ಲಿ ಮುಂಗಾರು ಚುರುಕುಗೊಂಡಿರುವುದರಿಂದ ಜೂ.20 ಮತ್ತು 21ರಂದು ಗುಡುಗು, ಸಿಡಿಲು ಸಹಿತ ಧಾರಾಕಾರ ಮಳೆಯಾಗುವ ಸಾಧ್ಯತೆ ಇದೆ ಎಂದು ಹವಾಮಾನ ಇಲಾಖೆ ತಿಳಿಸಿದೆ.

‘ಉತ್ತರ ಕನ್ನಡ, ದಕ್ಷಿಣ ಕನ್ನಡ, ಉಡುಪಿ, ಚಿಕ್ಕಮಗಳೂರು, ಹಾಸನ, ಕೊಡಗು, ಶಿವಮೊಗ್ಗ ಜಿಲ್ಲೆಗಳಲ್ಲಿ ಭಾನುವಾರ (ಜೂ.20) ಭಾರಿ ಮಳೆಯಾಗುವ ಮುನ್ಸೂಚನೆ ಇರುವುದರಿಂದ ‘ಆರೆಂಜ್ ಅಲರ್ಟ್’ ಮುಂದುವರಿಸಲಾಗಿದೆ’.

‘ಬೆಳಗಾವಿ, ಧಾರವಾಡ ಹಾಗೂ ಹಾವೇರಿಯಲ್ಲಿ ‘ಯೆಲ್ಲೊ ಅಲರ್ಟ್’ ನೀಡಲಾಗಿದೆ. ಕರಾವಳಿ ಜಿಲ್ಲೆಗಳಲ್ಲಿ ಸೋಮವಾರದವರೆಗೆ ಮಳೆ ಮುಂದುವರಿಯಲಿದೆ. ಕರಾವಳಿಯಲ್ಲಿ ಗಂಟೆಗೆ 50 ಕಿ.ಮೀ ವೇಗದಲ್ಲಿ ಗಾಳಿ ಬೀಸುತ್ತಿದ್ದು,3.9 ಮೀಟರ್ನಷ್ಟು ಎತ್ತರದ ಅಲೆಗಳು ಏಳುತ್ತಿರುವುದರಿಂದ ಮೀನುಗಾರರು ಕಡಲಿಗೆ ಇಳಿಯಬಾರದು’ ಎಂದು ಇಲಾಖೆ ಎಚ್ಚರಿಸಿದೆ.

ಮಳೆ–ಎಲ್ಲಿ, ಎಷ್ಟು?: ಉಡುಪಿ ಜಿಲ್ಲೆಯ ಕೊಲ್ಲೂರಿನಲ್ಲಿ 15 ಸೆಂ.ಮೀ ಗರಿಷ್ಠ ಮಳೆಯಾಗಿದೆ. ಭಾಗಮಂಡಲ 11, ಬೆಳ್ತಂಗಡಿ 6, ಕಾರವಾರ, ಮಂಗಳೂರು 5, ಸುಳ್ಯ, ಉಡುಪಿ, ಬೆಳಗಾವಿ, ಸಾಗರ, ತೀರ್ಥಹಳ್ಳಿ 4, ಪುತ್ತೂರು, ಭಟ್ಕಳ, ಧಾರವಾಡ, ಹಾವೇರಿ, ಮಡಿಕೇರಿ, ಸೊರಬ 3, ನಿಪ್ಪಾಣಿ, ಚಿಕ್ಕೋಡಿ, ಹಾಸನ 2, ಮಂಗಳೂರು, ಕುಂದಾಪುರ, ಚಿಂಚೋಳಿ, ಶಿಕಾರಿಪುರದಲ್ಲಿ ತಲಾ 1 ಸೆಂ.ಮೀ ಮಳೆಯಾಗಿದೆ. ರಾಯಚೂರಿನಲ್ಲಿ 32 ಡಿಗ್ರಿ ಸೆಲ್ಸಿಯಸ್ ಗರಿಷ್ಠ ತಾಪಮಾನ ದಾಖಲಾಗಿದೆ.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.