ಶುಕ್ರವಾರ, ಮಾರ್ಚ್ 31, 2023
26 °C

ವಿಜಯಪುರ, ಕರಾವಳಿಯಲ್ಲಿ ಉತ್ತಮ ಮಳೆ

ಪ್ರಜಾವಾಣಿ ವಾರ್ತೆ Updated:

ಅಕ್ಷರ ಗಾತ್ರ : | |

ಹುಬ್ಬಳ್ಳಿ: ಬಾಗಲಕೋಟೆ, ವಿಜಯಪುರ ಹಾಗೂ ಉತ್ತರ ಕನ್ನಡ ಜಿಲ್ಲೆಯಲ್ಲಿ ಶನಿವಾರ ಮಳೆಯಾಗಿದೆ.

ವಿಜಯಪುರ, ಮುದ್ದೇಬಿಹಾಳ ಪಟ್ಟಣ ವ್ಯಾಪ್ತಿಯಲ್ಲಿ ಧಾರಾಕಾರ ಮಳೆಯಾಗಿದೆ. ಬಾಗಲಕೋಟೆ ಜಿಲ್ಲೆ ಕಲಾದಗಿಯಲ್ಲಿ ಉತ್ತಮ ಮಳೆ ಸುರಿಯಿತು. ಉತ್ತರ ಕನ್ನಡ ಜಿಲ್ಲೆಯ ವಿವಿಧೆಡೆ ಶುಕ್ರವಾರ ರಾತ್ರಿಯಿಂದ ಶನಿವಾರ ಮಧ್ಯಾಹ್ನದವರೆಗೆ ಮಳೆಯಾಗಿದೆ.

ಮಂಗಳೂರು ವರದಿ: ಕರಾವಳಿ ಜಿಲ್ಲೆಗಳಲ್ಲಿ ಉತ್ತಮ, ಚಿಕ್ಕಮಗಳೂರು ಜಿಲ್ಲೆಯಲ್ಲಿ ಸಾಧಾರಣ ಮಳೆಯಾಗಿದೆ. ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ಮಳೆಯಿಂದಾಗಿ ಒಂದು ಮನೆ ಭಾಗಶಃ, ಇನ್ನೊಂದು ಮನೆ ಪೂರ್ಣ ಹಾನಿಯಾಗಿದೆ.

ಉಡುಪಿ ಜಿಲ್ಲೆಯಲ್ಲಿ ಮಳೆ ಬಿರುಸುಗೊಂಡಿದೆ. ಹೆಬ್ರಿಯಲ್ಲಿ 19.7 ಸೆಂ.ಮೀ ಮಳೆ ಬಿದ್ದಿದೆ. ಸೆ.9ರವರೆಗೆ ಭಾರಿ ಮಳೆಯಾಗುವ ಸಾದ್ಯತೆಗಳಿವೆ ಎಂದು ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ.

ಕೊಡಗು ಜಿಲ್ಲೆಯ ವಿವಿಧೆಡೆ ಶುಕ್ರವಾರ ರಾತ್ರಿ ಹಾಗೂ ಶನಿವಾರ ಬಿರುಸಿನ ಮಳೆಯಾಗಿದೆ. ನಾಪೋಕ್ಲು, ಮಡಿಕೇರಿ, ತಲಕಾವೇರಿ, ಭಾಗಮಂಡಲ ವ್ಯಾಪ್ತಿಯಲ್ಲಿ ಜೋರು ಮಳೆಯಾಗಿದೆ. ಬೀದರ್‌ ಜಿಲ್ಲೆಯ ಬೀದರ್, ಬಸವಕಲ್ಯಾಣ ಹಾಗೂ ಭಾಲ್ಕಿ ತಾಲ್ಲೂಕಿನಲ್ಲಿ ಸಾಧಾರಣ ಮಳೆಯಾಗಿದೆ.

 

ತಾಜಾ ಮಾಹಿತಿ ಪಡೆಯಲು ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ

ತಾಜಾ ಸುದ್ದಿಗಳಿಗಾಗಿ ಪ್ರಜಾವಾಣಿ ಆ್ಯಪ್ ಡೌನ್‌ಲೋಡ್ ಮಾಡಿಕೊಳ್ಳಿ: ಆಂಡ್ರಾಯ್ಡ್ ಆ್ಯಪ್ | ಐಒಎಸ್ ಆ್ಯಪ್

ಪ್ರಜಾವಾಣಿ ಫೇಸ್‌ಬುಕ್ ಪುಟವನ್ನುಫಾಲೋ ಮಾಡಿ.

ಈ ವಿಭಾಗದಿಂದ ಇನ್ನಷ್ಟು