ಗುರುವಾರ , ಅಕ್ಟೋಬರ್ 22, 2020
27 °C

ಭಾರಿ ಮಳೆ ಸಾಧ್ಯತೆ: ಕರಾವಳಿ ಜಿಲ್ಲೆಗಳಲ್ಲಿ 'ರೆಡ್ ಅಲರ್ಟ್' ಘೋಷಣೆ

ಪ್ರಜಾವಾಣಿ ವಾರ್ತೆ Updated:

ಅಕ್ಷರ ಗಾತ್ರ : | |

ಬೆಂಗಳೂರು: ರಾಜ್ಯದ ಕರಾವಳಿ ಭಾಗದಲ್ಲಿ ಅ.12, 13ರಂದು ಗುಡುಗು, ಸಿಡಿಲು ಸಹಿತ ಧಾರಾಕಾರ ಮಳೆಯಾಗುವ ಮುನ್ಸೂಚನೆ ಇರುವುದರಿಂದ ಉತ್ತರ ಕನ್ನಡ, ದಕ್ಷಿಣ ಕನ್ನಡ, ಉಡುಪಿ ಜಿಲ್ಲೆಗಳಲ್ಲಿ ‘ರೆಡ್ ಅಲರ್ಟ್’ ಘೋಷಿಸಲಾಗಿದೆ ಎಂದು ಹವಾಮಾನ ಇಲಾಖೆ ತಿಳಿಸಿದೆ.

ಬಂಗಾಳ ಕೊಲ್ಲಿಯಲ್ಲಿ ವಾಯುಭಾರ ಕುಸಿತ ಕಂಡಿರುವುದರಿಂದ ರಾಜ್ಯದ ಕರಾವಳಿ ಹಾಗೂ ಒಳನಾಡಿನಲ್ಲಿ ಇದೇ 15ರವರೆಗೆ ಭಾರಿ ಮಳೆಯಾಗುವ ಸಾಧ್ಯತೆ ಇದೆ. ಬೆಳಗಾವಿ, ಬೀದರ್, ಕಲಬುರ್ಗಿ, ರಾಯ
ಚೂರು, ಯಾದಗಿರಿ, ಶಿವಮೊಗ್ಗ, ಕೊಡಗು, ಹಾಸನ, ಚಿಕ್ಕಮಗಳೂರು ಜಿಲ್ಲೆಗಳಲ್ಲಿ ಮುಂದಿನ 48 ಗಂಟೆಗಳಲ್ಲಿ ಹೆಚ್ಚು ಮಳೆಯಾಗುವ ನಿರೀಕ್ಷೆ ಇರುವುದರಿಂದ ‘ಆರೆಂಜ್ ಅಲರ್ಟ್’ ಘೋಷಿಸಲಾಗಿದೆ.

ಚಿತ್ರದುರ್ಗ, ದಾವಣಗೆರೆ, ಕೋಲಾರ, ತುಮಕೂರು, ಚಿಕ್ಕಬಳ್ಳಾಪುರ, ಬೆಂಗಳೂರು ನಗರ, ಬೆಂಗಳೂರು ಗ್ರಾಮಾಂತರ, ವಿಜಯಪುರ, ಕೊಪ್ಪಳ, ಹಾವೇರಿ, ಗದಗ, ಧಾರವಾಡ ಹಾಗೂ ಬಾಗಲಕೋಟೆ ಜಿಲ್ಲೆಗಳಲ್ಲೂ ಗುಡುಗು, ಸಿಡಿಲಿನೊಂದಿಗೆ ಹೆಚ್ಚು ಮಳೆಯಾಗುವ ಮುನ್ಸೂಚನೆ ಇದೆ ಎಂದು ತಿಳಿಸಿದೆ.

ಮಳೆ-ಎಲ್ಲಿ, ಎಷ್ಟು?: ಬೆಳಗಾವಿ ಜಿಲ್ಲೆಯ ಹುಕ್ಕೇರಿ, ಬಾಗಲಕೋಟೆ ಜಿಲ್ಲೆಯ ರಬಕವಿಯಲ್ಲಿ ಗರಿಷ್ಠ 10 ಸೆಂ.ಮೀ ಮಳೆಯಾಗಿದೆ. ನರಗುಂದ, ಹಾಸನ 9, ಸುಳ್ಯ, ಅಂಕೋಲಾ, ನಿಪ್ಪಾಣಿ 7, ಮೂಡುಬಿದರೆ, ಕಾರ್ಕಳದಲ್ಲಿ ತಲಾ 6 ಸೆಂ.ಮೀ ಮಳೆಯಾಗಿದೆ.

ಪ್ರಜಾವಾಣಿ ಫೇಸ್‌ಬುಕ್ ಪುಟವನ್ನು ಲೈಕ್ ಮಾಡಿ, ಪ್ರಮುಖ ಸುದ್ದಿಗಳ ಅಪ್‌ಡೇಟ್ಸ್ ಪಡೆಯಿರಿ.

ಪ್ರಜಾವಾಣಿಯನ್ನು ಟ್ವಿಟರ್‌ನಲ್ಲಿ ಇಲ್ಲಿ ಫಾಲೋ ಮಾಡಿ.

ಟೆಲಿಗ್ರಾಂ ಮೂಲಕ ನಮ್ಮ ಸುದ್ದಿಗಳ ಅಪ್‌ಡೇಟ್ಸ್ ಪಡೆಯಲು ಇಲ್ಲಿ ಕ್ಲಿಕ್ ಮಾಡಿ.

ಈ ವಿಭಾಗದಿಂದ ಇನ್ನಷ್ಟು