ಗುರುವಾರ, 28 ಮಾರ್ಚ್ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ರಾಜ್ಯದ ಹಲವೆಡೆ ಅ.16ರವರೆಗೆ ಭಾರಿ ಮಳೆ; 23 ಜಿಲ್ಲೆಗಳಲ್ಲಿ ‘ಯೆಲ್ಲೊ ಅಲರ್ಟ್‌’

Last Updated 11 ಅಕ್ಟೋಬರ್ 2021, 20:02 IST
ಅಕ್ಷರ ಗಾತ್ರ

ಬೆಂಗಳೂರು: ‘ಅರಬ್ಬಿ ಸಮುದ್ರದ ಪೂರ್ವ ಮಧ್ಯಭಾಗ ಹಾಗೂ ಉತ್ತರ ಅಂಡಮಾನ್‌ ಭಾಗಗಳಲ್ಲಿ ಮೇಲ್ಮೈ ಸುಳಿಗಾಳಿ ಉಂಟಾಗಿರುವುದರಿಂದದಕ್ಷಿಣ ಒಳನಾಡಿನ ಎಲ್ಲ ಜಿಲ್ಲೆಗಳು ಸೇರಿದಂತೆ ರಾಜ್ಯದ 23 ಜಿಲ್ಲೆಗಳಲ್ಲಿ ಅ.12 ಮತ್ತು 13ರಂದು ಧಾರಾಕಾರ ಮಳೆಯಾಗುವ ಮುನ್ಸೂಚನೆ ಇದೆ’ ಎಂದು ಹವಾಮಾನ ಇಲಾಖೆ ತಿಳಿಸಿದೆ.

‘ರಾಜ್ಯದ ಬಹುತೇಕ ಜಿಲ್ಲೆಗಳಲ್ಲಿ ಸೋಮವಾರ ಧಾರಾಕಾರ ಮಳೆಯಾಗಿದೆ. ಬೆಂಗಳೂರು ಸೇರಿದಂತೆ ದಕ್ಷಿಣ ಒಳನಾಡು ಹಾಗೂ ಕರಾವಳಿ ಜಿಲ್ಲೆಗಳಲ್ಲಿ ಅ.16ರವರೆಗೆ ಭಾರಿ ಮಳೆಯಾಗಲಿದೆ’ ಎಂದುಹವಾಮಾನ ತಜ್ಞ ಸದಾನಂದ ಅಡಿಗ ತಿಳಿಸಿದರು.

‘ಬೆಂಗಳೂರು ನಗರ, ಬೆಂಗಳೂರು ಗ್ರಾಮಾಂತರ, ಬಳ್ಳಾರಿ, ಚಾಮರಾಜನಗರ, ಚಿಕ್ಕಬಳ್ಳಾಪುರ, ಚಿಕ್ಕಮಗಳೂರು, ಚಿತ್ರದುರ್ಗ, ದಾವಣಗೆರೆ, ಹಾಸನ, ಕೊಡಗು, ಕೋಲಾರ, ಮಂಡ್ಯ, ಮೈಸೂರು, ರಾಮನಗರ, ಶಿವಮೊಗ್ಗ, ತುಮಕೂರು, ಹಾವೇರಿ, ಗದಗ, ಧಾರವಾಡ, ಬೆಳಗಾವಿ, ಉತ್ತರ ಕನ್ನಡ, ದಕ್ಷಿಣ ಕನ್ನಡ ಹಾಗೂ ಉಡುಪಿ ಜಿಲ್ಲೆಗಳಲ್ಲಿ ಮಂಗಳವಾರ ಮತ್ತು ಬುಧವಾರದವರೆಗೆ ‘ಯೆಲ್ಲೊ ಅಲರ್ಟ್‌’ ಘೋಷಿಸಲಾಗಿದೆ’ ಎಂದು ಮಾಹಿತಿ ನೀಡಿದರು.

ಮಳೆ–ಎಲ್ಲಿ, ಎಷ್ಟು?: ಸುಬ್ರಹ್ಮಣ್ಯ, ಹೊಸದುರ್ಗ ಹಾಗೂ ಮಡಿಕೇರಿಯಲ್ಲಿ ಸೋಮವಾರ 5 ಸೆಂ.ಮೀ ಗರಿಷ್ಠ ಮಳೆ
ಯಾಗಿದೆ. ಮಂಗಳೂರು 4, ರಾಯಚೂರು, ಮಂಡ್ಯ, ಮಳವಳ್ಳಿ 3, ಪುತ್ತೂರು, ಕಲಬುರಗಿ, ಕೊಪ್ಪಳ, ಚಾಮರಾಜನಗರ, ಕೊಳ್ಳೇಗಾಲ, ರಾಮನಗರ, ಮಾಗಡಿ 2, ಅಥಣಿ, ಗಂಗಾವತಿ, ಕಮಲಾಪುರ, ಹಿರಿಯೂ
ರು, ಟಿ.ನರಸೀಪುರ, , ಬೆಂಗಳೂರು ನಗರ, ಕುಣಿಗಲ್, ಹೊಸಪೇಟೆ, ಶ್ರೀರಂಗಪಟ್ಟಣ ಮತ್ತು ನೆಲಮಂಗಲದಲ್ಲಿ ತಲಾ 1 ಸೆಂ.ಮೀ ಮಳೆಯಾಗಿದೆ.

ಶಿರಾಲಿಯಲ್ಲಿ 33.5 ಡಿಗ್ರಿ ಸೆಲ್ಸಿಯಸ್ ಗರಿಷ್ಠ ತಾಪಮಾನ ಹಾಗೂ ಬೀದರ್‌ನಲ್ಲಿ 18 ಡಿಗ್ರಿ ಸೆಲ್ಸಿಯಸ್ ಕನಿಷ್ಠ ತಾಪಮಾನ ದಾಖಲಾಗಿದೆ.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT