ಶುಕ್ರವಾರ, 26 ಏಪ್ರಿಲ್ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ಗುಡುಗು, ಸಿಡಿಲು ಸಹಿತ ಭಾರಿ ಮಳೆ ಸಾಧ್ಯತೆ: 16 ಜಿಲ್ಲೆಗಳಲ್ಲಿ ಯೆಲ್ಲೊ ಅಲರ್ಟ್‌

Last Updated 15 ಅಕ್ಟೋಬರ್ 2021, 20:20 IST
ಅಕ್ಷರ ಗಾತ್ರ

ಬೆಂಗಳೂರು: ರಾಜ್ಯದಲ್ಲಿ ಮುಂಗಾರು ಚುರುಕುಗೊಂಡಿರುವುದರಿಂದ ದಕ್ಷಿಣ ಒಳನಾಡಿನ ಬಹುತೇಕ ಜಿಲ್ಲೆಗಳು ಹಾಗೂ ಕರಾವಳಿ ಜಿಲ್ಲೆಗಳಲ್ಲಿ ಅ.16ಮತ್ತು 17ರಂದು ಗುಡುಗು, ಸಿಡಿಲು ಸಹಿತ ಧಾರಾಕಾರ ಮಳೆಯಾಗುವ ಮುನ್ಸೂಚನೆ ಇದೆ ಎಂದು ಹವಾಮಾನ ಇಲಾಖೆ ತಿಳಿಸಿದೆ.

ಉತ್ತರ ಕನ್ನಡ, ದಕ್ಷಿಣ ಕನ್ನಡ, ಉಡುಪಿ, ಬೆಂಗಳೂರು ನಗರ, ಬೆಂಗಳೂರು ಗ್ರಾಮಾಂತರ, ಚಾಮರಾಜನಗರ, ಚಿಕ್ಕಬಳ್ಳಾಪುರ, ಚಿಕ್ಕಮಗಳೂರು, ಹಾಸನ, ಕೊಡಗು, ಕೋಲಾರ, ಮಂಡ್ಯ, ಮೈಸೂರು, ರಾಮನಗರ, ಶಿವಮೊಗ್ಗ ಹಾಗೂ ತುಮಕೂರು ಜಿಲ್ಲೆಗಳಲ್ಲಿ ಭಾರಿ ಮಳೆ ಸಾಧ್ಯತೆ ಇದೆ. ಎರಡೂ ದಿನ ‘ಯೆಲ್ಲೊ ಅಲರ್ಟ್‌’ ಘೋಷಿಸಲಾಗಿದೆ.

ಉಳಿದ ಜಿಲ್ಲೆಗಳಲ್ಲಿ ಗುಡುಗು, ಸಿಡಿಲು ಹೆಚ್ಚಾಗಿ ಇರಲಿದ್ದು, ಕೆಲವೆಡೆ ಸಾಧಾರಣ ಮಳೆಯಾಗಬಹುದು. ಉತ್ತರ ಒಳನಾಡಿನಲ್ಲಿ ಮಳೆ ಪ್ರಮಾಣ ತಗ್ಗಿದ್ದು, ಮುಂದಿನ ಐದು ದಿನಗಳವರೆಗೆ ಮಳೆಯಾಗುವ ಯಾವುದೇ ಸೂಚನೆಗಳಿಲ್ಲ ಎಂದು ಇಲಾಖೆ ಮಾಹಿತಿ ನೀಡಿದೆ.

ಮಳೆ ಎಲ್ಲಿ, ಎಷ್ಟು?: ದಾವಣಗೆರೆ ಜಿಲ್ಲೆಯ ಚನ್ನಗಿರಿಯಲ್ಲಿ ಶುಕ್ರವಾರ 5 ಸೆಂ.ಮೀ ಗರಿಷ್ಠ ಮಳೆಯಾಗಿದೆ. ಸಿದ್ದಾಪುರ, ಬೆಂಗಳೂರು ನಗರ 4, ಮೈಸೂರು 3, ಹರಪನಹಳ್ಳಿ, ಭದ್ರಾವತಿ 2, ಪುತ್ತೂರು, ಚಿಕ್ಕಮಗಳೂರು, ಮದ್ದೂರು, ಭಾಗಮಂಡಲದಲ್ಲಿ ತಲಾ 1 ಸೆಂ.ಮೀ ಮಳೆಯಾಗಿದೆ.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT