ಶನಿವಾರ, 20 ಏಪ್ರಿಲ್ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ವರುಣ್‌ ಸಿಂಗ್‌ಗೆ ಚಿಕಿತ್ಸೆ: ಚರ್ಮ ಪಡೆದ ಕಮಾಂಡೊ ಆಸ್ಪತ್ರೆ

ಹೆಲಿಕಾಪ್ಟರ್‌ ದುರಂತ
Last Updated 13 ಡಿಸೆಂಬರ್ 2021, 22:09 IST
ಅಕ್ಷರ ಗಾತ್ರ

ಬೆಂಗಳೂರು: ಹೆಲಿಕಾಪ್ಟರ್‌ ದುರಂತದಲ್ಲಿ ತೀವ್ರವಾಗಿ ಗಾಯಗೊಂಡು ಚಿಕಿತ್ಸೆ ಪಡೆಯುತ್ತಿರುವ ಗ್ರೂ‍ಪ್ ಕ್ಯಾಪ್ಟನ್‌ ವರುಣ್‌ ಸಿಂಗ್‌ ಅವರ ಚಿಕಿತ್ಸೆಗಾಗಿ ವಿಕ್ಟೋರಿಯಾ ಆಸ್ಪತ್ರೆಯ ಚರ್ಮ ಬ್ಯಾಂಕ್‌ನಿಂದನಗರದ ಕಮಾಂಡೊ ಆಸ್ಪತ್ರೆಗೆ ಚರ್ಮ ರವಾನಿಸಲಾಗಿದೆ.

ಕಮಾಂಡೊ ಆಸ್ಪತ್ರೆಯು ವಿಕ್ಟೋರಿಯಾ ಆಸ್ಪತ್ರೆಯ ಚರ್ಮ ಬ್ಯಾಂಕ್‌ನಿಂದ ಚರ್ಮ ಪಡೆದಿರುವುದು ಇದೇ ಮೊದಲು.

‘ವರುಣ್‌ ಸಿಂಗ್‌ ಅವರ ದೇಹದಲ್ಲಿ ಅಪಾರ ಪ್ರಮಾಣದ ಸುಟ್ಟ ಗಾಯಗಳಾಗಿವೆ. ಅವರಿಗೆ ಸಾಕಷ್ಟು ಚರ್ಮದ ಅಗತ್ಯವಿದೆ. ಕಮಾಂಡೊ ಆಸ್ಪತ್ರೆಯವರ ಮನವಿ ಮೇರೆಗೆ 1 ಸಾವಿರ ಚದರ ಸೆಂ.ಮೀ. ಚರ್ಮವನ್ನು ನೀಡಲಾಗಿದೆ. ಇನ್ನಷ್ಟು ಚರ್ಮ ಬೇಕಾದರೆ ಮುಂಬೈ ಮತ್ತು ಚೆನ್ನೈನಲ್ಲಿರುವ ಚರ್ಮ ಬ್ಯಾಂಕ್‌ಗಳಿಂದ ತರಿಸಿ ಕೊಡಲಾಗುತ್ತದೆ’ ಎಂದು ವಿಕ್ಟೋರಿಯಾ ಆಸ್ಪತ್ರೆಯ ಮೂಲಗಳು ತಿಳಿಸಿವೆ.

‘ನಟ ಪುನೀತ್‌ ರಾಜ್‌ಕುಮಾರ್‌ ಅವರ ನಿಧನದ ನಂತರ ಅಂಗಾಂಗ ದಾನ ಮಾಡುವವರ ಸಂಖ್ಯೆ ಹೆಚ್ಚಳವಾಗಿದೆ. ಚರ್ಮ ದಾನಿಗಳ ಸಂಖ್ಯೆಯೂ ಏರಿದೆ. ಈಗ ತಿಂಗಳಲ್ಲಿ ಸರಾಸರಿ ಇಬ್ಬರು ಚರ್ಮ ದಾನ ಮಾಡುತ್ತಿದ್ದಾರೆ’ ಎಂದೂ ಮೂಲಗಳು ಹೇಳಿವೆ.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT