ಬುಧವಾರ, ಅಕ್ಟೋಬರ್ 28, 2020
18 °C

ಉಡುಪಿಯಲ್ಲಿ ವಾತಾವರಣ ತಿಳಿಯಾದ ಕೂಡಲೇ ಹೆಲಿಕಾಪ್ಟರ್‌ನಿಂದ ರಕ್ಷಣಾ ಕಾರ್ಯ: ಸಂಸದೆ

ಪ್ರಜಾವಾಣಿ ವಾರ್ತೆ Updated:

ಅಕ್ಷರ ಗಾತ್ರ : | |

ಉಡುಪಿ: ಧಾರಾಕಾರ ಮಳೆಗೆ ಜಿಲ್ಲೆಯ ತಗ್ಗು ಪ್ರದೇಶಗಳಲ್ಲಿರುವ ಮನೆಗಳು ಮುಳುಗಡೆಯಾಗಿದ್ದು ತುರ್ತು ಪರಿಹಾರ ಕಾರ್ಯಕ್ಕೆ ಜಿಲ್ಲಾಧಿಕಾರಿಗೆ ಸೂಚಿಸಲಾಗಿದೆ ಎಂದು ಸಂಸದೆ ಶೋಭಾ ಕರಂದ್ಲಾಜೆ ತಿಳಿಸಿದ್ದಾರೆ.

ಪ್ರವಾಹದಲ್ಲಿ ಸಿಲುಕಿರುವವರ ರಕ್ಷಣಾ ಕಾರ್ಯಾಚರಣೆಗೆ ಎನ್‌ಡಿಆರ್‌ಎಫ್ ತಂಡವನ್ನು ಕಳಿಸಿಕೊಡುವಂತೆ ರಾಜ್ಯದ ಮುಖ್ಯ ಕಾರ್ಯದರ್ಶಿಗೆ ತಿಳಿಸಿದ್ದು ಮಂಗಳೂರಿನಿಂದ ಎನ್‌ಡಿಆರ್‌ಎಫ್‌ ತಂಡ ಕಳುಹಿಸಿದ್ದಾರೆ.

20 ಸಿಬ್ಬಂದಿಯನ್ನೊಳಗೊಂಡ ಮತ್ತೊಂದು ಎನ್‌ಡಿಆರ್‌ಎಫ್‌ ತಂಡ ಮೈಸೂರಿನಿಂದ ಉಡುಪಿಯತ್ತ ತೆರಳಿದೆ. ರಕ್ಷಣಾ ಕಾರ್ಯಕ್ಕೆ ಹೆಲಿಕಾಪ್ಟರ್ ಕಳಿಸಿಕೊಡುವಂತೆ ಮಾಡಿದ ಮನವಿಗೂ ಸ್ಪಂದಿಸಿದ್ದು, ಬೆಂಗಳೂರಿನಿಂದ ಎರಡು ಹಾಗೂ ಕಾರವಾರ ನೌಕಾನೆಲೆಯಿಂದ ಎರಡು ಹೆಲಿಕಾಪ್ಟರ್‌ಗಳು ನಡುಗಡ್ಡೆಯಲ್ಲಿ ಸಿಲುಕಿರುವವರ ರಕ್ಷಣಾ ಕಾರ್ಯಾಚರಣೆಗೆ ತೆರಳಲಿವೆ. ಸದ್ಯ ಮೋಡದ ವಾತಾವರಣ ಇರುವ ಕಾರಣ ಹೆಲಿಕಾಪ್ಟರ್‌ಗಳು ಇಳಿಯಲು ಸಾಧ್ಯವಾಗುತ್ತಿಲ್ಲ. ವಾತಾವರಣ ತಿಳಿಯಾದ ಕೂಡಲೇ ಹೆಲಿಕಾಪ್ಟರ್‌ಗಳು ಕಾರ್ಯಾಚರಣೆಗೆ ತೆರಳಲಿವೆ ಎಂದು ಸಂಸದೆ ಶೋಭಾ ಕರಂದ್ಲಾಜೆ ತಿಳಿಸಿದ್ದಾರೆ.

ಪ್ರಜಾವಾಣಿ ಫೇಸ್‌ಬುಕ್ ಪುಟವನ್ನು ಲೈಕ್ ಮಾಡಿ, ಪ್ರಮುಖ ಸುದ್ದಿಗಳ ಅಪ್‌ಡೇಟ್ಸ್ ಪಡೆಯಿರಿ.

ಪ್ರಜಾವಾಣಿಯನ್ನು ಟ್ವಿಟರ್‌ನಲ್ಲಿ ಇಲ್ಲಿ ಫಾಲೋ ಮಾಡಿ.

ಟೆಲಿಗ್ರಾಂ ಮೂಲಕ ನಮ್ಮ ಸುದ್ದಿಗಳ ಅಪ್‌ಡೇಟ್ಸ್ ಪಡೆಯಲು ಇಲ್ಲಿ ಕ್ಲಿಕ್ ಮಾಡಿ.

ಈ ವಿಭಾಗದಿಂದ ಇನ್ನಷ್ಟು