ಶನಿವಾರ, 20 ಏಪ್ರಿಲ್ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ಆರು ಪ್ರವಾಸಿ ಕೇಂದ್ರಗಳಲ್ಲಿ ಹೆಲಿಪೋರ್ಟ್‌: ಸಚಿವ ಸಿ.ಪಿ.ಯೋಗೇಶ್ವರ್

Last Updated 20 ಮಾರ್ಚ್ 2021, 8:40 IST
ಅಕ್ಷರ ಗಾತ್ರ

ಮಂಗಳೂರು: ‘ಹೆಲಿ ಟೂರಿಸಂ ಅನ್ನು ಪ್ರೋತ್ಸಾಹಿಸುವ ನಿಟ್ಟಿನಲ್ಲಿ ಪ್ರವಾಸೋದ್ಯಮ ಇಲಾಖೆಯಿಂದ ರಾಜ್ಯದ ಆರು ಕೇಂದ್ರಗಳಲ್ಲಿ ಹೆಲಿಪೋರ್ಟ್‌ ಸ್ಥಾಪಿಸಲು ನಿರ್ಧರಿಸಲಾಗಿದೆ’ ಪ್ರವಾಸೋದ್ಯಮ ಸಚಿವ ಸಿ.ಪಿ.ಯೋಗೇಶ್ವರ್‌ ತಿಳಿಸಿದರು.

ಮಂಗಳೂರಿನಲ್ಲಿ ಸಂವಾದದಲ್ಲಿ ಮಾತನಾಡಿದ ಅವರು, ‘ಬೆಂಗಳೂರು, ಮೈಸೂರು, ಮಂಗಳೂರು, ಹುಬ್ಬಳ್ಳಿ, ಕಲಬುರ್ಗಿ, ಹಂಪಿಯಲ್ಲಿ ಹೆಲಿಪೋರ್ಟ್‌ ಸ್ಥಾಪಿಸಲಾಗುವುದು. ಅಲ್ಲಿ ಹೆಲಿಪ್ಯಾಡ್‌ನ ವ್ಯವಸ್ಥೆಯೂ ಇರುತ್ತದೆ. ಈ ಕೇಂದ್ರಗಳಿಗೆ ಹತ್ತಿರವಾಗುವಂತೆ ಇನ್ನೂ ಹಲವು ಹೆಲಿಪ್ಯಾಡ್‌ ನಿರ್ಮಿಸುವ ಚಿಂತನೆಯಿದೆ. ಈ ಕುರಿತು ಸರ್ವೆ ಕಾರ್ಯ ಆರಂಭಿಸಲಾಗಿದೆ’ ಎಂದು ಹೇಳಿದರು.

‘ಕರಾವಳಿ ಭಾಗದಲ್ಲಿ ‘ಸೀ ಪ್ಲೇನ್’ಗೆ ಅವಕಾಶ ಕೋರಿ ಕೇಂದ್ರ ಸರ್ಕಾರಕ್ಕೆ ಸಲ್ಲಿಸಿದ್ದ ಪ್ರಸ್ತಾವಕ್ಕೆ ಒಪ್ಪಿಗೆ ದೊರಕಿದೆ. ಉಡಾನ್‌ ಯೋಜನೆಯಲ್ಲಿ ಸೀ ಪ್ಲೇನ್‌ ಆರಂಭಿಸುವುದಕ್ಕೆ ಅವಕಾಶ ಕಲ್ಪಿಸಲಾಗಿದೆ. ಈ ನಿಟ್ಟಿನಲ್ಲಿ ಸರ್ವೆ ಮಾಡಲು ಸರ್ಕಾರದ ಮುಖ್ಯ ಕಾರ್ಯದರ್ಶಿಗೆ ಮನವಿ ಮಾಡಲಾಗಿದೆ’ ಎಂದರು.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT