ಬೆಂಗಳೂರು: ‘ಮೊದಲು ಪಕ್ಷ ಅಧಿಕಾರಕ್ಕೆ ಬರಬೇಕು. ಆ ಮೇಲೆ, ಮುಖ್ಯಮಂತ್ರಿ ಯಾರಾಗಬೇಕೆಂದು ಹೈಕಮಾಂಡ್ ಮತ್ತು ಶಾಸಕರು ತೀರ್ಮಾನಿಸುತ್ತಾರೆ’ ಎಂದು ಕೆಪಿಸಿಸಿ ಅಧ್ಯಕ್ಷ ಡಿ.ಕೆ. ಶಿವಕುಮಾರ್ ಹೇಳಿದರು.

ಕಾಂಗ್ರೆಸ್‌ನಲ್ಲಿ ‘ಮುಂದಿನ ಮುಖ್ಯಮಂತ್ರಿ ಯಾರಾಗಬೇಕು’ ಎಂಬ ಚರ್ಚೆ ನಡೆಯುತ್ತಿರುವ ಮಧ್ಯೆ ಈ ಬಗ್ಗೆ ಪ್ರತಿಕ್ರಿಯಿಸಿದವರು ಅವರು, ‘ಕೆಲವು ನಾಯಕರು ನಮ್ಮ ಮೇಲಿನ ಪ್ರೀತಿಗೆ ಮುಖ್ಯಮಂತ್ರಿ ಆಗುತ್ತಾರೆ ಎಂದು ಹೇಳುತ್ತಾರೆ. ಸಾಕಷ್ಟು ಜನ ಅನೇಕ ಆಸೆಗಳನ್ನು ವ್ಯಕ್ತಪಡಿಸುತ್ತಾರೆ. ಅದಕ್ಕೆ ನಾನು ಜವಾಬ್ದಾರನಲ್ಲ’ ಎಂದರು.

ಕಾಂಗ್ರೆಸ್ ಶಾಸಕ ಜಮೀರ್ ಅಹ್ಮದ್ ಅವರು ಇತ್ತೀಚೆಗೆ, ಮುಂದಿನ ಮುಖ್ಯಮಂತ್ರಿ ಸಿದ್ದರಾಮಯ್ಯ ಆಗಬೇಕು ಎಂದಿದ್ದರು.

‘ಜನರು ಪಕ್ಷವನ್ನು ಗೆಲ್ಲಿಸಿದ ನಂತರ ನಮ್ಮ ನಾಯಕರು, ಶಾಸಕರು ಹಾಗೂ ಪಕ್ಷ ಯಾವ ತೀರ್ಮಾನಕ್ಕೆ ಬರುತ್ತಾರೋ ಅದಕ್ಕೆ ನಾನು ಬದ್ಧ. ನಾನು ಸಾಮೂಹಿಕ ನಾಯಕತ್ವವನ್ನು ನಂಬುತ್ತೇನೆ, ಈ ಮಾತು ಹಿಂದೆಯೂ ಹೇಳಿದ್ದೇನೆ, ಈಗಲೂ ಹೇಳುತ್ತಿದ್ದೇನೆ. ಜಮೀರ್ ಅಹ್ಮದ್ ಖಾನ್ ನನಗೂ ಸ್ನೇಹಿತರೆ. ಭಾವುಕರಾಗಿ ಆ ರೀತಿ ಮಾತನಾಡುತ್ತಾರೆ. ಅದರಲ್ಲಿ ಬೇರೆ ಅರ್ಥ ಕಲ್ಪಿಸುವುದು ಬೇಡ’ ಎಂದರು.

ಚಾಲಕರ ಹಿತ ಕಾಪಾಡಲು ಬದ್ಧ: ‘ರಾಜ್ಯದಲ್ಲಿರುವ ಎಲ್ಲ ಚಾಲಕರ ಹಿತ ಕಾಯಲು ಕಾಂಗ್ರೆಸ್ ಪಕ್ಷ ಹೋರಾಟ ನಡೆಸಲಿದೆ' ಎಂದು ಶಿವಕುಮಾರ್ ಹೇಳಿದರು.

ಕ್ವೀನ್ಸ್ ರಸ್ತೆಯ ಕೆಪಿಸಿಸಿ ಕಚೇರಿಯಲ್ಲಿ ಓಲಾ, ಉಬರ್ ಟ್ಯಾಕ್ಸಿ ಚಾಲಕರ ಮತ್ತು ಮಾಲೀಕರ ಸಂಘದ ಅಧ್ಯಕ್ಷ ತನ್ವೀರ್ ಪಾಷಾ ಹಾಗೂ ಜೈ ಭಾರತ್ ಆಟೊ ಚಾಲಕರ ಸಂಘದ ಅಧ್ಯಕ್ಷ ಚಂದ್ರು ಅವರು ತಮ್ಮ ಬೆಂಬಲಿಗರನ್ನು ಪಕ್ಷಕ್ಕೆ ಸೇರಿಸಿಕೊಂಡ ಬಳಿಕ ಮಾತನಾಡಿದ ಅವರು, ‘ಆಸ್ಕರ್ ಫರ್ನಾಂಡಿಸ್ ಅವರ ಸೂಚನೆ ಮೇರೆಗೆ ಕಾಂಗ್ರೆಸ್ ಪಕ್ಷದಲ್ಲಿ ಚಾಲಕರ ಘಟಕ ಸ್ಥಾಪಿಸುತ್ತಿದ್ದು, ಇಂದಿನಿಂದ ಅದನ್ನು ಆರಂಭಿಸಲಾಗುತ್ತಿದೆ’ ಎಂದರು.

‘ಕೊರೊನಾ ಸಮಯದಲ್ಲಿ ಸಂಕಷ್ಟಕ್ಕೆ ಒಳಗಾದ ಆಟೊ, ಕ್ಯಾಬ್ ಚಾಲಕರಿಗೆ ಸರ್ಕಾರದಿಂದ ಸಹಾಯ ಸಿಗಬೇಕು ಎಂದು ರಾಜ್ಯ ಹಾಗೂ ಕೇಂದ್ರ ಸರ್ಕಾರದ ಮೇಲೆ ನಾವು ಒತ್ತಡ ಹಾಕಿದೆವು. ತಿಂಗಳಿಗೆ ಕನಿಷ್ಠ ₹ 10 ಸಾವಿರ ಕೊಡಿ ಎಂದು ಕೇಳಿದೆವು. ರಾಜ್ಯ ಸರ್ಕಾರ 7.75 ಲಕ್ಷ ಚಾಲಕರಿಗೆ ಒಂದು ಬಾರಿ ₹ 5 ಸಾವಿರ ನೀಡುವುದಾಗಿ ಘೋಷಣೆ ಮಾಡಿದೆ. ಆದರೆ, ನಮಗಿರುವ ಮಾಹಿತಿ ಪ್ರಕಾರ ರಾಜ್ಯದಲ್ಲಿ 32 ಲಕ್ಷ ಜನ ಪರವಾನಗಿ ಪಡೆದು ಚಾಲಕರಾಗಿ ದುಡಿಯುತ್ತಿದ್ದಾರೆ’ ಎಂದರು.

‘ಸರ್ಕಾರ ಲಾಕ್ ಡೌನ್ ಹೇರಿದಾಗ ಚಾಲಕರು ತಮ್ಮ ವಾಹನ ಚಾಲನೆ ಮಾಡದೆ ಸರ್ಕಾರಕ್ಕೆ ಬೆಂಬಲ ನೀಡಿದರು. ಇದರಿಂದ ಅವರ ಕುಟುಂಬಗಳಿಗೆ ಎಷ್ಟು ತೊಂದರೆಯಾಗಿದೆ ಎಂದು ಈ ಸರ್ಕಾರದ ಕಣ್ಣಿಗೆ ಕಾಣಲಿಲ್ಲ, ಕಿವಿಗೆ ಕೇಳಲಿಲ್ಲ, ಹೃದಯಕ್ಕೆ ಮುಟ್ಟಲಿಲ್ಲ. ನಮ್ಮ ಒತ್ತಾಯದ ಮೇರೆಗೆ ಚಾಲಕರಿಗೆ ಪರಿಹಾರ ಘೋಷಿಸಿದದರು. ಸರ್ಕಾರ ಘೋಷಿಸಿರುವ ಪರಿಹಾರ ಹೆಚ್ಚೆಂದರೆ ಶೇ 10ರಷ್ಟು ಮಂದಿಗೆ ತಲುಪಿರಬಹುದು. ಉಳಿದವರಿಗೆ ಒಂದು ರೂಪಾಯಿಯೂ ತಲುಪಿಲ್ಲ. ಸರ್ಕಾರ ಚಾಲಕರ ಮಾಹಿತಿಯನ್ನು ತಂತ್ರಜ್ಞಾನ ಮೂಲಕ ಅಪ್ಲೋಡ್ ಮಾಡಲು ಹೇಳಿ ಚಾಲಕರು ಪರದಾಡಿದ್ದನ್ನು ನೋಡಿದ್ದೇವೆ’ ಎಂದರು.

‘ಈ ಬಗ್ಗೆ ಅಧಿವೇಶನದಲ್ಲೂ ಚರ್ಚೆ ಮಾಡಿದ್ದೇವೆ. ಅವರಿಗೆ ಈ ತಂತ್ರಜ್ಞಾನದ ಮೂಲಕ ಮಾಹಿತಿ ನೀಡುವುದು ಗೊತ್ತಿದ್ದರೆ ಅವರು ಚಾಲಕರಾಗಿ ಯಾಕೆ ಕೆಲಸ ಮಾಡುತ್ತಿದ್ದರು. ಅವರು ಕಂಪ್ಯೂಟರ್ ಕೆಲಸ ಮಾಡುತ್ತಿದ್ದರು. ಪರವಾನಗಿ ಇರುವವರಿಗೆ ಅರ್ಧ ಗಂಟೆಯಲ್ಲಿ ಚೆಕ್ ಬರೆದು ಕೊಡಲು ಈ ಸರ್ಕಾರಕ್ಕೆ ಯಾಕೆ ಸಾಧ್ಯವಾಗಲಿಲ್ಲ. ಘೋಷಣೆ ಮಾಡಿ ಎರಡು ತಿಂಗಳಾದರೂ ಸರ್ಕಾರ ಹಣ ಬಿಡುಗಡೆ ಮಾಡಲಿಲ್ಲ. ಇದನ್ನು ನೋಡಿ ಓಲಾ, ಉಬರ್ ಚಾಲಕರ ಸಂಘದ ಅಧ್ಯಕ್ಷರಾದ ತನ್ವೀರ್ ಪಾಷಾ ಹಾಗೂ ಇತರ ಸಂಘ ಸಂಸ್ಥೆಗಳನ್ನು ಕರೆಸಿ ಅವರ ಸ್ಥಿತಿ ಬಗ್ಗೆ ಮಾತನಾಡಿದೆ. ನಾನು ಬೆಳಗಾವಿ, ಧಾರವಾಡ, ಶಿರಾದಲ್ಲಿ ವಿಚಾರಿಸಿದೆ. ಕೆಲವು ಕಡೆ ಪರಿಹಾರವೇ ತಲುಪಿಲ್ಲ. ಇದರ ವಿರುದ್ಧ ಕಾಂಗ್ರೆಸ್ ಹೋರಾಡಲು ತೀರ್ಮಾನಿಸಿದೆ ಎಂದರು.

‘ಚಾಲಕರ ಸಂಘದ ಅಧ್ಯಕ್ಷರಾಗಿರುವ ಹಾಗೂ ಜೆಡಿಎಸ್ ಸಾರಿಗೆ ವಿಭಾಗದ ಅಧ್ಯಕ್ಷರಾಗಿದ್ದ ತನ್ವೀರ್ ಅವರನ್ನು ಪಕ್ಷಕ್ಕೆ ಸೇರಿಸಿಕೊಳ್ಳಲಾಗಿದೆ. ಬೆಂಗಳೂರಿನ ಆರ್. ಆರ್. ನಗರ ಚುನಾವಣೆ ಸಂದರ್ಭದಲ್ಲಿ ಈ ಕ್ಷೇತ್ರದಲ್ಲೇ ಏಳು ಸಾವಿರ ಚಾಲಕರನ್ನು ಗುರುತಿಸಿದ್ದೇವೆ. ಅವರಿಗೆ ಆಗಿರುವ ಅನ್ಯಾಯಕ್ಕೆ ಉತ್ತರ ನೀಡಲು, ಅವರ ಕುಟುಂಬ ಸದಸ್ಯರು, ಸ್ನೇಹಿತರು ತೀರ್ಮಾನಿಸಿದ್ದಾರೆ’ ಎಂದರು.

‘ರಾಜ್ಯದಲ್ಲಿರುವ ಎಲ್ಲ ಚಾಲಕರನ್ನು ನಾನು ಇಂದು ಪಕ್ಷಕ್ಕೆ ಬರಮಾಡಿಕೊಳ್ಳುತ್ತೇನೆ. ಅವರ ನೋವು, ನಲಿವಿನಲ್ಲಿ ನಾವು ಸದಾ ಇರುತ್ತೇವೆ’ ಎಂದರು.

ನಿಯಂತ್ರಣ ಮಾಡಲು ಆಗುತ್ತಿಲ್ಲ: ‘ರಾಜರಾಜೇಶ್ವರಿ ನಗರ ಕ್ಷೇತ್ರದ ಉಪ ಚುನಾವಣೆ ಹಿನ್ನೆಲೆಯಲ್ಲಿ ಭದ್ರತೆ ನೀಡಲು ಸಿಆರ್‌ಪಿಎಫ್ ಪಡೆ ಶುಕ್ರವಾರ ಬಂದಿದೆ ಎಂದು ಮಾಧ್ಯಮಗಳಲ್ಲಿ ನೋಡಿದೆ. ಇದರಲ್ಲೇ ಅರ್ಥವಾಗುತ್ತಿದೆ. ಸರ್ಕಾರಕ್ಕೆ ತನ್ನದೇ ಪಕ್ಷದ ಕಾರ್ಯಕರ್ತರ ದುರ್ವತನೆ ತಡೆಯಲು ಸಾಧ್ಯವಾಗುತ್ತಿಲ್ಲ. ಹೀಗಾಗಿ ವಿಶೇಷ ಪಡೆ ಕರೆಸಿದ್ದಾರೆ’ ಎಂದರು.

‘ನಕಲಿ ಮತದಾರ ಗುರುತಿನ ಚೀಟಿ ಕುರಿತು ನಾವು ದೂರು ನೀಡಿದ್ದೇವೆ. ಪ್ರಕರಣ ದಾಖಲಿಸಲು ನ್ಯಾಯಾಲಯ ಸೂಚನೆ ನೀಡಿದೆ. ಈ ವಿಚಾರದಲ್ಲಿ ನಮ್ಮ ಹೋರಾಟ ಮುಂದುವರಿಯಲಿದೆ’ ಎಂದರು.

‘ಪೊಲೀಸ್ ಅಧಿಕಾರಿಗಳು, ಬಿಬಿಎಂಪಿ ಅಧಿಕಾರಿಗಳು ಜತೆ ಶಾಮೀಲಾಗಿ ನಮ್ಮ ಕಾರ್ಯಕರ್ತರನ್ನು ಬೆದರಿಸುವ ಪ್ರಯತ್ನ ನಡೆಯುತ್ತಿದೆ. ಇದರ ವಿಚಾರವಾಗಿ ನಾವು ದೂರು ನೀಡಲಿದ್ದೇವೆ. ನಮ್ಮ ಕಾರ್ಯಕರ್ತರು ಕಾನೂನಿಗೆ ಬೆಲೆ ಕೊಟ್ಟು ಶಾಂತಿಯುತವಾಗಿ ಚುನಾವಣೆ ಮಾಡುತ್ತಾರೆ. ಬೇರೆಯವರು ನೀಡುವ ಹೇಳಿಕೆಗೆ ನಾವು ಜವಾಬ್ದಾರರಲ್ಲ. ಇಲ್ಲಿ ಮುಕ್ತವಾಗಿ ಚುನಾವಣೆ ನಡೆಸಬೇಕು’ ಎಂದು ಆಗ್ರಹಿಸಿದರು.

ಕೆಪಿಸಿಸಿ ಕಾರ್ಯಾಧ್ಯಕ್ಷ ಸಲೀಂ ಅಹಮದ್, ಮಾಜಿ ಶಾಸಕ ಎಚ್.ಸಿ. ಬಾಲಕೃಷ್ಣ ಇದ್ದರು.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.