ಶನಿವಾರ, 11 ಮೇ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ಸಿಎಂ ಆಯ್ಕೆ ಮಾಡುವುದು ಹೈಕಮಾಂಡ್‌: ಬಿ.ಕೆ. ಹರಿಪ್ರಸಾದ್‌

Last Updated 11 ಮೇ 2022, 16:27 IST
ಅಕ್ಷರ ಗಾತ್ರ

ಬೆಂಗಳೂರು: ಕಾಂಗ್ರೆಸ್‌ ಸರ್ಕಾರ ಅಧಿಕಾರಕ್ಕೆ ಬಂದರೆ ಯಾರು ಮುಖ್ಯಮಂತ್ರಿ ಆಗಬೇಕು ಎಂಬುದನ್ನು ಪಕ್ಷದ ಹೈಕಮಾಂಡ್‌ ನಿರ್ಧರಿಸುತ್ತದೆ. ಶಾಸಕ ಜಮೀರ್‌ ಅಹಮ್ಮದ್ ಒಬ್ಬರೇ ನಿರ್ಧರಿಸುವುದಿಲ್ಲ ಎಂದು ವಿಧಾನ ಪರಿಷತ್‌ ವಿರೋಧ ಪಕ್ಷದ ನಾಯಕ ಬಿ.ಕೆ. ಹರಿಪ್ರಸಾದ್‌ ಹೇಳಿದರು.

ಕೆಪಿಸಿಸಿ ಕಚೇರಿಯಲ್ಲಿ ಬುಧವಾರ ನಡೆದ ಪತ್ರಿಕಾಗೋಷ್ಠಿಯಲ್ಲಿ ಸಿದ್ದರಾಮಯ್ಯ ಮತ್ತೊಮ್ಮೆ ಮುಖ್ಯಮಂತ್ರಿ ಆಗಬೇಕೆಂದು ಬಯಸಿ ಜಮೀರ್‌ ಅಹಮ್ಮದ್‌ ಪೂಜೆ ಸಲ್ಲಿಸಿರುವ ಕುರಿತು ಪತ್ರಕರ್ತರು ಪ್ರಶ್ನಿಸಿದರು. ಆಗ ಉತ್ತರ ನೀಡಿದ ಹರಿಪ್ರಸಾದ್‌, ‘ನಮ್ಮ ಪಕ್ಷದಲ್ಲಿ ವೈಯಕ್ತಿಕ ಹೇಳಿಕೆಗಳಿಗೆ ಅವಕಾಶವಿದೆ. ಅದು ಜಮೀರ್‌ ಅವರ ವೈಯಕ್ತಿಕ ಹೇಳಿಕೆ. ಆದರೆ, ಮುಖ್ಯಮಂತ್ರಿ ಯಾರು ಎನ್ನುವುದನ್ನು ಅವರೇ ನಿರ್ಧರಿಸುವುದಿಲ್ಲ’ ಎಂದರು.

‘ಚುನಾವಣೆಗೆ ಇನ್ನೂ ಒಂದು ವರ್ಷ ಇದೆ. ಕಾಂಗ್ರೆಸ್‌ನಲ್ಲಿ ಮುಖ್ಯಮಂತ್ರಿ ಆಯ್ಕೆ ಹೇಗೆ ನಡೆಯುತ್ತದೆ ಎಂಬುದು ಪಕ್ಷದ ಎಲ್ಲ ನಾಯಕರಿಗೂ ಗೊತ್ತಿದೆ. ಶಾಸಕರ ಅಭಿಪ್ರಾಯ ಆಧರಿಸಿ ಪಕ್ಷದ ವರಿಷ್ಠರು ನಿರ್ಧಾರಕ್ಕೆ ಬರುತ್ತಾರೆ. ಒಬ್ಬರು ಇಂತಹ ಹೇಳಿಕೆ ಕೊಟ್ಟರೆ ಎಲ್ಲ 80 ಮಂದಿ ಶಾಸಕರೂ ಹೀಗೆಯೇ ಹೇಳಿಕೆ ನೀಡಬೇಕು ಎಂದೇನೂ ಇಲ್ಲ. ಸಿದ್ದರಾಮಯ್ಯ ಮುಖ್ಯಮಂತ್ರಿ ಆಗಬೇಕು ಎಂದಷ್ಟೇ ಅವರು ಹೇಳಿದ್ದಾರೆ’ ಎಂದು ಹೇಳಿದರು.

‘ಅವರು ಪ್ರಾರ್ಥನೆ ಮಾಡಿ ಎಂದಿದ್ದಾರೆ. ನೀವೂ ಪ್ರಾರ್ಥನೆ ಮಾಡಿ’ ಎಂದು ಕೆಪಿಸಿಸಿ ಅಧ್ಯಕ್ಷ ಡಿ.ಕೆ. ಶಿವಕುಮಾರ್‌ ಚುಟುಕಾಗಿ ಪ್ರತಿಕ್ರಿಯಿಸಿದರು.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT