ಮಂಗಳವಾರ, ಜೂನ್ 22, 2021
28 °C

ಕೈಗಾರಿಕೆ ಉದ್ಯೋಗ ನಿಯಮ ತಿದ್ದುಪಡಿ: ಸರ್ಕಾರಕ್ಕೆ ನೋಟಿಸ್

ಪ್ರಜಾವಾಣಿ ವಾರ್ತೆ Updated:

ಅಕ್ಷರ ಗಾತ್ರ : | |

Prajavani

ಬೆಂಗಳೂರು: ಕಾರ್ಮಿಕರ ಪ್ರತಿನಿಧಿಗಳ ಅಭಿಪ್ರಾಯ ಪಡೆಯದೆ ಸರ್ಕಾರ ಹೊರಡಿಸಿರುವ ಕೈಗಾರಿಕಾ ಉದ್ಯೋಗ ನಿಯಮಗಳ ತಿದ್ದುಪಡಿ ಕಾಯ್ದೆಯ ಮಾನ್ಯತೆ ಪ್ರಶ್ನಿಸಿರುವ ಸಾರ್ವಜನಿಕ ಹಿತಾಸಕ್ತಿ ಅರ್ಜಿ ಆಧರಿಸಿ ರಾಜ್ಯ ಸರ್ಕಾರಕ್ಕೆ ನೋಟಿಸ್ ನೀಡಲು ಹೈಕೋರ್ಟ್ ಆದೇಶಿಸಿದೆ.

‘ನಿಯಮಗಳಿಗೆ ತಿದ್ದುಪಡಿ ತಂದು ಸರ್ಕಾರ 2020ರ ಜೂನ್ 30ರಂದು ಅಧಿಸೂಚನೆ ಹೊರಡಿಸಿದೆ. ಕೋವಿಡ್ ಸಂದರ್ಭದಲ್ಲಿ ಉದ್ಯಮಿಗಳು ಇದನ್ನು ಬಳಸಿಕೊಂಡು ಕಾರ್ಮಿಕರನ್ನು ಸಂಕಷ್ಟಕ್ಕೆ ದೂಡುತ್ತಿದ್ದಾರೆ’ ಎಂದು ಕರ್ನಾಟಕ ಕೈಗಾರಿಕೆ ಮತ್ತು ಇತರ ಉದ್ಯಮಗಳ ನೌಕರರ ಒಕ್ಕೂಟ ದೂರಿದೆ.

‘ಕೈಗಾರಿಕಾ ಉದ್ಯೋಗ ಕಾಯ್ದೆ ಪ್ರಕಾರ ಯಾವುದೇ ನಿಯಮ ರೂಪಿಸುವಾಗ ಅಥವಾ ತಿದ್ದುಪಡಿ ತರುವಾಗ ಕೆಲಸಗಾರರ ಪ್ರತಿನಿಧಿಗಳ ಜತೆ ಸಮಾಲೋಚನೆ ನಡೆಸಬೇಕು. ನಿಯಮಗಳಿಗೆ ತಿದ್ದುಪಡಿ ತರುವ ಮುನ್ನ ಈ ಪದ್ಧತಿ ಜಾರಿಯಲ್ಲಿ ಇತ್ತು’ ಎಂದಿದ್ದಾರೆ.

ಫಲಿತಾಂಶ 2021 ಪೂರ್ಣ ಮಾಹಿತಿ ಇಲ್ಲಿದೆ

ತಾಜಾ ಸುದ್ದಿಗಳಿಗಾಗಿ ಪ್ರಜಾವಾಣಿ ಆ್ಯಪ್ ಡೌನ್‌ಲೋಡ್ ಮಾಡಿಕೊಳ್ಳಿ: ಆಂಡ್ರಾಯ್ಡ್ ಆ್ಯಪ್ | ಐಒಎಸ್ ಆ್ಯಪ್

ಪ್ರಜಾವಾಣಿ ಫೇಸ್‌ಬುಕ್ ಪುಟವನ್ನುಫಾಲೋ ಮಾಡಿ.

ಈ ವಿಭಾಗದಿಂದ ಇನ್ನಷ್ಟು