ಶುಕ್ರವಾರ, 19 ಏಪ್ರಿಲ್ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ಶಶಿಕಲಾ ಲಂಚ ಪ್ರಕರಣ: ವರದಿ ಕೇಳಿದ ಹೈಕೋರ್ಟ್

Last Updated 13 ಆಗಸ್ಟ್ 2021, 18:11 IST
ಅಕ್ಷರ ಗಾತ್ರ

ಬೆಂಗಳೂರು:ತಮಿಳುನಾಡಿನ ಎಐಎಡಿಎಂಕೆ ನಾಯಕಿ ವಿ.ಕೆ. ಶಶಿಕಲಾ ಅವರು ಪರಪ್ಪನ ಅಗ್ರಹಾರ ಜೈಲಿನಲ್ಲಿ ಲಂಚ ನೀಡಿ ವಿಶೇಷ ಸವಲತ್ತು ಪಡೆಯುತ್ತಿದ್ದರು ಎಂಬ ಆರೋಪ ಪ್ರಕರಣದ ತನಿಖೆಯ ಸ್ಥಿತಿಗತಿ ಬಗ್ಗೆ ಮುಚ್ಚಿದ ಲಕೋಟೆಯಲ್ಲಿ ವರದಿ ಸಲ್ಲಿಸುವಂತೆ ಭ್ರಷ್ಟಾಚಾರ ನಿಗ್ರಹ ದಳಕ್ಕೆ(ಎಸಿಬಿ) ಹೈಕೋರ್ಟ್ ನಿರ್ದೇಶನ ನೀಡಿದೆ.

ಈ ಪ್ರಕರಣದಲ್ಲಿ ಎಸಿಬಿ ಯಾವುದೇ ತನಿಖೆ ನಡೆಸಿಲ್ಲ ಎಂದು ಅರ್ಜಿದಾರರ ಪರ ವಕೀಲರು ನ್ಯಾಯಾಲಯದ ಗಮನ ಸೆಳೆದ ಬಳಿಕ ಮುಖ್ಯ ನ್ಯಾಯಮೂರ್ತಿ ಎ.ಎಸ್. ಓಕಾ ನೇತೃತ್ವದ ವಿಭಾಗೀಯ ಪೀಠ, ಈ ಆದೇಶ ನೀಡಿತು.

‘ಎರಡು ತಿಂಗಳಲ್ಲಿ ತನಿಖೆ ಪೂರ್ಣಗೊಳಿಸಬೇಕು’ ಎಂದು ತಿಳಿಸಿದ ಪೀಠ, ಈ ಸಂಬಂಧ ಚೆನ್ನೈನ ಕೆ.ಎಸ್.ಗೀತಾ ಸಲ್ಲಿಸಿದ್ದ ಅರ್ಜಿ ವಿಲೇವಾರಿ ಮಾಡಿತು. ವಿಚಾರಣೆಯನ್ನು ಆ.25ಕ್ಕೆ ಮುಂದೂಡಿತು.

ಅಕ್ರಮ ಆಸ್ತಿ ಸಂಪಾದನೆ ಪ್ರಕರಣದಲ್ಲಿ ಶಶಿಕಲಾ ಅವರು ಪರಪ್ಪನ ಅಗ್ರಹಾರ ಜೈಲಿನಲ್ಲಿ ನಾಲ್ಕು ವರ್ಷಗಳ ಶಿಕ್ಷೆ ಅನುಭವಿಸಿದ್ದು, ಈ ಸಂದರ್ಭದಲ್ಲಿ ₹2 ಕೋಟಿ ಲಂಚ ನೀಡಿ ವಿಶೇಷ ಸವಲತ್ತು ಪಡೆದಿದ್ದರು ಎಂಬ ಆರೋಪದಲ್ಲಿ ಎಸಿಬಿ ತನಿಖೆ ನಡೆಸುತ್ತಿದೆ.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT