ಮಂಗಳವಾರ, ಸೆಪ್ಟೆಂಬರ್ 29, 2020
23 °C

ಮಾಸ್ಕ್ ಬೆಲೆ ನಿಯಂತ್ರಣ: ಸರ್ಕಾರದ ಪ್ರತಿಕ್ರಿಯೆ ಕೇಳಿದ ಹೈಕೋರ್ಟ್

ಪ್ರಜಾವಾಣಿ ವಾರ್ತೆ Updated:

ಅಕ್ಷರ ಗಾತ್ರ : | |

ಬೆಂಗಳೂರು: ಎನ್ -95 ಮಾಸ್ಕ್ ಮತ್ತು ಹ್ಯಾಂಡ್ ಸ್ಯಾನಿಟೈಸರ್‌ಗಳ ಬೆಲೆ ನಿಯಂತ್ರಣಾ ಕ್ರಮಗಳನ್ನು ಪರಿಚಯಿಸುವ ಬಗ್ಗೆ ಪ್ರತಿಕ್ರಿಯಿಸುವಂತೆ ರಾಜ್ಯ ಮತ್ತು ಕೇಂದ್ರ ಸರ್ಕಾರಗಳಿಗೆ ಹೈಕೋರ್ಟ್ ನಿರ್ದೇಶನ ನೀಡಿದೆ.

ಕೇಂದ್ರ ಮತ್ತು ರಾಜ್ಯ ಸರ್ಕಾರ ಸಲ್ಲಿಸಿದ್ದ ಅಫಿಡವಿಟ್‌ ಪರಿಶೀಲಿಸಿದ ಮುಖ್ಯ ನ್ಯಾಯಮೂರ್ತಿ ಎ.ಎಸ್. ಓಕಾ ನೇತೃತ್ವದ ವಿಭಾಗೀಯ ಪೀಠ, ‘ಕೋವಿಡ್ ಎದುರಿಸಲು ಎನ್‌–95 ಮಾಸ್ಕ್ ಅತ್ಯುತ್ತಮ ಆಯುಧವಾಗಿದೆ. ಅದರ ಬೆಲೆ ನಿಯಂತ್ರಿಸದೇ ಇದ್ದರೆ ನಾಗರಿಕರು ಬಲಿಪಶುಗಳಾಗುತ್ತಾರೆ’ ಎಂದು ಅಭಿಪ್ರಾಯಪಟ್ಟಿತು.

‘8.36 ಲಕ್ಷ ಸಂಖ್ಯೆಯ ಎನ್ -95 ಮಾಸ್ಕ್‌ಗಳನ್ನು ಖರೀದಿಸಿದ ಬೆಲೆಯನ್ನು ರಾಜ್ಯ ಸರ್ಕಾರ ಬಹಿರಂಗಪಡಿಸಿಲ್ಲ. ಎಚ್ಎಲ್‌ಎಲ್ ಲೈಫ್‌ ಕೇರ್‌ಗೆ ಪಿಎಂ ಕೇರ್ಸ್ ನಿಧಿಯಿಂದ ಹಣ ಪಾವತಿಸಲಾಗಿದೆ. ಹೀಗಾಗಿ ಮಾಸ್ಕ್ ಬೆಲೆ ಬಗ್ಗೆ ರಾಜ್ಯ ಸರ್ಕಾರಕ್ಕೆ ಗೊತ್ತಿಲ್ಲ ಎಂಬ ಉತ್ತರವನ್ನು ಒಪ್ಪಲು ಸಾಧ್ಯವಿಲ್ಲ‍’ ಎಂದು ಪೀಠ ಹೇಳಿತು.

‘ಎನ್-95 ಮಾಸ್ಕ್‌ಗಳ ಬೆಲೆ ಮತ್ತು ಅದರ ಲಭ್ಯತೆಯನ್ನು ನಿಯಂತ್ರಿಸುವ ವಿಷಯದಲ್ಲಿ ಕೇಂದ್ರ ಮತ್ತು ರಾಜ್ಯ ಸರ್ಕಾರಗಳೆರಡೂ ಅಸಹಾಯಕರಾಗಿಲ್ಲ. ಮಾಸ್ಕ್‌ ಸಮಂಜಸವಾದ ಬೆಲೆಗೆ ಲಭ್ಯವಾಗುವಂತೆ ನೋಡಿಕೊಳ್ಳುವುದು ಸರ್ಕಾರಗಳ ಜವಾಬ್ದಾರಿ ಕೂಡ’ ಎಂದು ತಿಳಿಸಿತು.

ಪ್ರಜಾವಾಣಿ ಫೇಸ್‌ಬುಕ್ ಪುಟವನ್ನು ಲೈಕ್ ಮಾಡಿ, ಪ್ರಮುಖ ಸುದ್ದಿಗಳ ಅಪ್‌ಡೇಟ್ಸ್ ಪಡೆಯಿರಿ.

ಪ್ರಜಾವಾಣಿಯನ್ನು ಟ್ವಿಟರ್‌ನಲ್ಲಿ ಇಲ್ಲಿ ಫಾಲೋ ಮಾಡಿ.

ಟೆಲಿಗ್ರಾಂ ಮೂಲಕ ನಮ್ಮ ಸುದ್ದಿಗಳ ಅಪ್‌ಡೇಟ್ಸ್ ಪಡೆಯಲು ಇಲ್ಲಿ ಕ್ಲಿಕ್ ಮಾಡಿ.

ಈ ವಿಭಾಗದಿಂದ ಇನ್ನಷ್ಟು