ಮಂಗಳವಾರ, ಏಪ್ರಿಲ್ 20, 2021
30 °C

ರೈತರ ಆತ್ಮಹತ್ಯೆ: ವರದಿ ಕೇಳಿದ ಹೈಕೋರ್ಟ್

ಪ್ರಜಾವಾಣಿ ವಾರ್ತೆ Updated:

ಅಕ್ಷರ ಗಾತ್ರ : | |

Prajavani

ಬೆಂಗಳೂರು: ರಾಜ್ಯದಲ್ಲಿ ರೈತರ ಆತ್ಮಹತ್ಯೆ ಪ್ರಕರಣಗಳ ಬಗ್ಗೆ ವಿವರವಾದ ವರದಿ ಸಲ್ಲಿಸುವಂತೆ ರಾಜ್ಯ ಸರ್ಕಾರಕ್ಕೆ ಹೈಕೋರ್ಟ್ ನಿರ್ದೇಶನ ನೀಡಿದೆ.

ರೈತ ಸಂಘ ಸಲ್ಲಿಸಿದ್ದ ಸಾರ್ವಜನಿಕ ಹಿತಾಸಕ್ತಿ ಅರ್ಜಿ ವಿಚಾರಣೆ ನಡೆಸಿದ ಮುಖ್ಯ ನ್ಯಾಯಮೂರ್ತಿ ಎ.ಎಸ್. ಓಕಾ ನೇತೃತ್ವದ ವಿಭಾಗೀ ಪೀಠ, ‘ರೈತರ ಆತ್ಮಹತ್ಯೆಗೆ ಕಾರಣಗಳು, ಬೆಳೆ ವಿಮಾ ಯೋಜನೆಯ ಸ್ಥಿತಿ ಮತ್ತು ಯೋಜನೆಗಳ ಬಗ್ಗೆ ವರದಿ ಸಲ್ಲಿಸಬೇಕು’ ಎಂದು ತಿಳಿಸಿತು.

ಮಹಾರಾಷ್ಟ್ರ, ಗುಜರಾತ್‌ ಬಿಟ್ಟರೆ ರಾಜ್ಯದಲ್ಲಿಯೇ ರೈತರ ಆತ್ಮಹತ್ಯೆ ಪ್ರಕರಣಗಳು ಹೆಚ್ಚಿವೆ. ಕಳೆದ 20 ವರ್ಷಗಳಲ್ಲಿ 40,346 ರೈತರು ಜೀವ ಕಳೆದುಕೊಂಡಿದ್ದಾರೆ. ಪ್ರಧಾನ್ ಮಂತ್ರಿ ಫಾಸಲ್ ಬೀಮಾ ಯೋಜನೆ (ಪಿಎಂಎಫ್‌ಬಿವೈ) ಸುಗಮಗೊಳಿಸಬೇಕು ಎಂದು ಅರ್ಜಿದಾರರ ಪರ ವಕೀಲರು ಮನವಿ ಮಾಡಿದರು.  ವಿಮಾ ಯೋಜನೆ, ರೈತರಿಗೆ ಬೆಳೆ ವಿಮೆ ನಷ್ಟ ವಿತರಿಸುವಲ್ಲಿ ರಾಜ್ಯ ಸರ್ಕಾರ ವಿಫಲವಾಗಿದೆ ಎಂದು ವಾದಿಸಿದರು.

ಯಾದಗಿರಿ ಜಿಲ್ಲೆ ಶಹಪುರ ತಾಲ್ಲೂಕಿನಲ್ಲಿ ಈವರೆಗೆ ನಡೆದಿರುವ ರೈತರ ಆತ್ಮಹತ್ಯೆ ಪ್ರಕರಣಗಳ ಬಗ್ಗೆ ತನಿಖೆ ನಡೆಸಲು ಸೂಕ್ತ ಕಂದಾಯ ಅಧಿಕಾರಿಯನ್ನು ನೇಮಿಸುವಂತೆ ಸರ್ಕಾರಕ್ಕೆ ನಿರ್ದೇಶನ ನೀಡಿತು.

ಕೇಂದ್ರ ಬಜೆಟ್ 2021 ಪೂರ್ಣ ಮಾಹಿತಿ ಇಲ್ಲಿದೆ

ತಾಜಾ ಸುದ್ದಿಗಳಿಗಾಗಿ ಪ್ರಜಾವಾಣಿ ಆ್ಯಪ್ ಡೌನ್‌ಲೋಡ್ ಮಾಡಿಕೊಳ್ಳಿ: ಆಂಡ್ರಾಯ್ಡ್ ಆ್ಯಪ್ | ಐಒಎಸ್ ಆ್ಯಪ್

ಪ್ರಜಾವಾಣಿ ಫೇಸ್‌ಬುಕ್ ಪುಟವನ್ನುಫಾಲೋ ಮಾಡಿ.

ಈ ವಿಭಾಗದಿಂದ ಇನ್ನಷ್ಟು