ಗುರುವಾರ , ಅಕ್ಟೋಬರ್ 22, 2020
22 °C

ಕೋವಿಡ್ ಆಸ್ಪತ್ರೆಗಳ ಸ್ಥಿತಿ ವರದಿ ಕೇಳಿದ ಹೈಕೋರ್ಟ್

ಪ್ರಜಾವಾಣಿ ವಾರ್ತೆ Updated:

ಅಕ್ಷರ ಗಾತ್ರ : | |

Prajavani

ಬೆಂಗಳೂರು: ರಾಜ್ಯದಲ್ಲಿ ಕೋವಿಡ್‌ ಸೋಂಕಿತರಿಗೆ ಚಿಕಿತ್ಸೆ ನೀಡುತ್ತಿರುವ ಆಸ್ಪತ್ರೆಗಳಲ್ಲಿ ಲಭ್ಯ ಇರುವ ಹಾಸಿಗೆಗಳು, ತೀವ್ರ ನಿಗಾ ಘಟಕಗಳು(ಐಸಿಯು) ಮತ್ತು ವೆಂಟಿಲೇಟರ್‌ ಸೌಲಭ್ಯದ ಬಗ್ಗೆ ವರದಿ ಸಲ್ಲಿಸುವಂತೆ ರಾಜ್ಯ ಸರ್ಕಾರಕ್ಕೆ ಹೈಕೋರ್ಟ್ ನಿರ್ದೇಶನ ನೀಡಿದೆ.

ಕೋವಿಡ್‌ಗೆ ಸಂಬಂಧಿಸಿದ ಸಾರ್ವಜನಿಕ ಹಿತಾಸಕ್ತಿ ಅರ್ಜಿಗಳ ವಿಚಾರಣೆ ನಡೆಸಿದ ಮುಖ್ಯ ನ್ಯಾಯಮೂರ್ತಿ ಎ.ಎಸ್. ಓಕಾ ನೇತೃತ್ವದ ವಿಭಾಗೀಯ ಪೀಠ, ‘ಆಮ್ಲಜನಕ ತಯಾರಿಕೆಗೆ ತಗಲುತ್ತಿರುವ ವೆಚ್ಚ ಎಷ್ಟು, ಅದರ ಮಾರುಕಟ್ಟೆಯದರ ಎಷ್ಟು ಎಂಬುದನ್ನು ಪರಿಶೀಲಿಸಿರುವ ವಿಧಾನಗಳ ಬಗ್ಗೆಯೂ ವಿವರಣೆ ನೀಡಬೇಕು’ ಎಂದು ತಿಳಿಸಿತು.

‘ಕೋವಿಡ್ ಆಸ್ಪತ್ರೆಗಳ ಮೇಲ್ವಿಚಾರಣೆಗೆ ನೇಮಿಸಿರುವ ತಜ್ಞರ ಸಮಿತಿಯು ಉಪಸಮಿತಿಗಳನ್ನು ರಚಿಸಿದ್ದು, ಸಮಿತಿ ಸದಸ್ಯರು 22 ಆಸ್ಪತ್ರೆಗಳಿಗೆ ಭೇಟಿ ನೀಡಿ ಶೇ 50ರಷ್ಟು ಹಾಸಿಗೆ ಮೀಸಲಿಡದ ಆಸ್ಪತ್ರೆಗಳಿಗೆ ನೋಟಿಸ್ ನೀಡಿದ್ದಾರೆ’ ಎಂದು ಬಿಬಿಎಂಪಿ ಪರ ವಕೀಲರು ವಿವರಿಸಿದರು.

‘ಹಾಗಿದ್ದರೆ 380 ಆಸ್ಪತ್ರೆಗಳ ಪರಿಶೀಲನೆಗೆ ಒಂದು ವರ್ಷದ ಅವಧಿ ಬೇಕಾಗಲಿದೆ’ ಎಂದು ಅಭಿಪ್ರಾಯಪಟ್ಟ ಪೀಠ, ಆಸ್ಪತ್ರೆಗಳ ಪರಿಶೀಲನೆಗೆ ಸಂಬಂಧಿಸದಂತೆ ಹೊರಡಿಸಿರುವ ಸುತ್ತೋಲೆ ಮಾರ್ಪಡಿಸುವಂತೆ ರಾಜ್ಯ ಸರ್ಕಾರಕ್ಕೆ ನಿರ್ದೇಶನ ನೀಡಿತು.

ಮಾಸ್ಕ್ ಕಡ್ಡಾಯ ಸಂಬಂಧದ ಮತ್ತೊಂದು ಅರ್ಜಿ ವಿಚಾರಣೆ ನಡೆಸಿದ ಪೀಠ, ‘ಸಾರ್ವಜನಿಕ ಪ್ರದೇಶದಲ್ಲಿ ಮಾಸ್ಕ್ ಧರಿಸದವರ ವಿರುದ್ಧ ಏನು ಕ್ರಮ ಕೈಗೊಳ್ಳಲಾಗಿದೆ ಎಂಬುದರ ಕುರಿತು ಎರಡು ದಿನಗಳಲ್ಲಿ ವರದಿ ಸಲ್ಲಿಸಬೇಕು’ ಎಂದು ಬಿಬಿಎಂಪಿಗೆ ತಿಳಿಸಿತು.

ಪ್ರಜಾವಾಣಿ ಫೇಸ್‌ಬುಕ್ ಪುಟವನ್ನು ಲೈಕ್ ಮಾಡಿ, ಪ್ರಮುಖ ಸುದ್ದಿಗಳ ಅಪ್‌ಡೇಟ್ಸ್ ಪಡೆಯಿರಿ.

ಪ್ರಜಾವಾಣಿಯನ್ನು ಟ್ವಿಟರ್‌ನಲ್ಲಿ ಇಲ್ಲಿ ಫಾಲೋ ಮಾಡಿ.

ಟೆಲಿಗ್ರಾಂ ಮೂಲಕ ನಮ್ಮ ಸುದ್ದಿಗಳ ಅಪ್‌ಡೇಟ್ಸ್ ಪಡೆಯಲು ಇಲ್ಲಿ ಕ್ಲಿಕ್ ಮಾಡಿ.

ಈ ವಿಭಾಗದಿಂದ ಇನ್ನಷ್ಟು