ಬೆಂಗಳೂರು: ಸಾರ್ವಜನಿಕ ಸ್ಥಳಗಳಲ್ಲಿರುವ ಅನಧಿಕೃತ ಧಾರ್ಮಿಕ ಕಟ್ಟಡಗಳ ತೆರವು ಸಂಬಂಧ ಸುಪ್ರೀಂಕೋರ್ಟ್ ನೀಡಿರುವ ಆದೇಶದಂತೆ ಕೈಗೊಂಡಿರುವ ಕ್ರಮಗಳ ಕುರಿತು ಡಿ.11ರೊಳಗೆ ವಿಸ್ತೃತ ವರದಿ ಸಲ್ಲಿಸುವಂತೆ ರಾಜ್ಯ ಸರ್ಕಾರ ಮತ್ತು ಬೃಹತ್ ಬೆಂಗಳೂರು ಮಹಾನಗರ ಪಾಲಿಕೆಗೆ ಹೈಕೋರ್ಟ್ ಮಂಗಳವಾರ ನಿರ್ದೇಶನ ನೀಡಿದೆ.

ಸಾರ್ವಜನಿಕ ಸ್ಥಳಗಳಲ್ಲಿ ಅಕ್ರಮವಾಗಿ ತಲೆ ಎತ್ತಿರುವ ಧಾರ್ಮಿಕ ಕಟ್ಟಡಗಳಿಗೆ ಸಂಬಂಧಿಸಿದಂತೆ ಸ್ವಯಂಪ್ರೇರಿತವಾಗಿ ದಾಖಲಿಸಿಕೊಂಡಿರುವ ಸಾರ್ವಜನಿಕ ಹಿತಾಸಕ್ತಿ ಅರ್ಜಿ ಮತ್ತು ಇದೇ ವಿಷಯಕ್ಕೆ ಸಂಬಂಧಿಸಿದ ಇತರ ಪ್ರಕರಣಗಳ ವಿಚಾರಣೆ ನಡೆಸಿದ ಮುಖ್ಯ ನ್ಯಾಯಮೂರ್ತಿ ಅಭಯ್ ಶ್ರೀನಿವಾಸ್ ಓಕಾ ನೇತೃತ್ವದ ವಿಭಾಗೀಯ ಪೀಠ, ಈ ಆದೇಶ ನೀಡಿತು.

2009ರ ಸೆ.29ರಂದು ಹೊರಡಿಸಿದ್ದ ಆದೇಶದ ಅನುಷ್ಠಾನ ಕುರಿತು ಹೈಕೋರ್ಟ್‌ಗಳ ಮೂಲಕ ಮೇಲುಸ್ತುವಾರಿ ನಡೆಸುವ ಬಗ್ಗೆ 2018ರ ಜನವರಿಯಲ್ಲಿ ಸುಪ್ರೀಂಕೋರ್ಟ್ ಮತ್ತೊಂದು ಆದೇಶ ಹೊರಡಿಸಿತ್ತು. ಅದರ ಆಧಾರದಲ್ಲಿ ಹೈಕೋರ್ಟ್ ಸ್ವಯಂಪ್ರೇರಿತ ಸಾರ್ವಜನಿಕ ಹಿತಾಸಕ್ತಿ ಅರ್ಜಿಯನ್ನು ದಾಖಲಿಸಿಕೊಂಡು ವಿಚಾರಣೆ ಆರಂಭಿಸಿದೆ.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.