ಮಂಗಳವಾರ, ಮಾರ್ಚ್ 28, 2023
33 °C

ರಾಜ್ಯದ ಎಲ್ಲಾ ಆಂಬುಲೆನ್ಸ್‌ಗಳಿಗೆ ಜಿಪಿಎಸ್ ಅಳವಡಿಸಬೇಕು: ಹೈಕೋರ್ಟ್‌ ನಿರ್ದೇಶನ

ಪ್ರಜಾವಾಣಿ ವಾರ್ತೆ Updated:

ಅಕ್ಷರ ಗಾತ್ರ : | |

ಬೆಂಗಳೂರು: ‘ರಾಜ್ಯದಲ್ಲಿನ ಎಲ್ಲಾ ಸರ್ಕಾರಿ ಮತ್ತು ಖಾಸಗಿ ಆಂಬುಲೆನ್ಸ್‌ಗಳಿಗೆ ಜಿಪಿಎಸ್ ವ್ಯವಸ್ಥೆ ಅಳವಡಿಸಬೇಕು’ ಎಂದು ಹೈಕೋರ್ಟ್ ನಿರ್ದೇಶಿಸಿದೆ.

ಈ ಸಂಬಂಧ, ‘ಭಾರತ್ ಪುನರುತ್ಥಾನ ಟ್ರಸ್ಟ್’ ಸಲ್ಲಿಸಿದ್ದ ಅರ್ಜಿಯನ್ನು ಮಂಗಳವಾರ ವಿಚಾರಣೆ ನಡೆಸಿದ ಮುಖ್ಯ ನ್ಯಾಯಮೂರ್ತಿ ಪಿ.ಬಿ. ವರಾಳೆ ನೇತೃತ್ವದ ವಿಭಾಗೀಯ ನ್ಯಾಯಪೀಠ ಈ ಕುರಿತಂತೆ ಆದೇಶಿಸಿದೆ.

ವಿಚಾರಣೆ ವೇಳೆ ಸರ್ಕಾರಿ ವಕೀಲರು, ‘ಜಿಪಿಎಸ್ ಅಳವಡಿಸಲಾಗಿದೆಯೇ ಅಥವಾ ಇಲ್ಲವೇ ಎಂಬುದರ ಬಗ್ಗೆ ಪರಿಶೀಲಿಸಿ ವರದಿ ಸಲ್ಲಿಸುವಂತೆ 2020ರ ಮಾರ್ಚ್‌ 4ರಂದು ಸಾರಿಗೆ ಮತ್ತು ಪ್ರಾದೇಶಿಕ ರಸ್ತೆ ಸುರಕ್ಷತಾ ಅಧಿಕಾರಿಗಳಿಗೆ ಸುತ್ತೋಲೆ ಹೊರಡಿಸಲಾಗಿದೆ’ ಎಂದು ನ್ಯಾಯಪೀಠಕ್ಕೆ ತಿಳಿಸಿದರು.

ಇದನ್ನು ಪರಿಗಣಿಸಿದ ನ್ಯಾಯ ಪೀಠ, ‘ಆಂಬುಲೆನ್ಸ್‌ಗಳ ತಡೆ ರಹಿತ ಸಂಚಾರಕ್ಕೆ ಅಗತ್ಯ ವ್ಯವಸ್ಥೆ ಒದಗಿಸುವ ನಿಟ್ಟಿನಲ್ಲಿ ಜಿಪಿಎಸ್ ಅಳವಡಿಸುವಂತೆ ರಾಜ್ಯದಲ್ಲಿನ ಆಂಬುಲೆನ್ಸ್‌ ತಯಾರಿಕರಿಗೆ ನಿರ್ದೇಶನ ನೀಡಬೇಕು’ ಎಂದು ರಾಜ್ಯ ಸರ್ಕಾರಕ್ಕೆ ಸಲಹೆ ನೀಡಿ,‘ಸುತ್ತೋಲೆ ಅನುಸಾರ ಇದುವರೆಗೆ ಎಷ್ಟು ವರದಿಗಳನ್ನು ಸಲ್ಲಿಸಲಾಗಿದೆ ಎಂಬ ಮಾಹಿತಿಯನ್ನು ಒದಗಿಸಿ’ ಎಂದು ನಿರ್ದೇಶಿಸಿ ವಿಚಾರಣೆಯನ್ನು ಡಿಸೆಂಬರ್ 2ಕ್ಕೆ ಮುಂದೂಡಿದೆ.

ತಾಜಾ ಮಾಹಿತಿ ಪಡೆಯಲು ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ

ತಾಜಾ ಸುದ್ದಿಗಳಿಗಾಗಿ ಪ್ರಜಾವಾಣಿ ಆ್ಯಪ್ ಡೌನ್‌ಲೋಡ್ ಮಾಡಿಕೊಳ್ಳಿ: ಆಂಡ್ರಾಯ್ಡ್ ಆ್ಯಪ್ | ಐಒಎಸ್ ಆ್ಯಪ್

ಪ್ರಜಾವಾಣಿ ಫೇಸ್‌ಬುಕ್ ಪುಟವನ್ನುಫಾಲೋ ಮಾಡಿ.

ಈ ವಿಭಾಗದಿಂದ ಇನ್ನಷ್ಟು