ಭಾನುವಾರ, ಜೂನ್ 13, 2021
22 °C

ಕೋವಿಡ್ ಲಾಕ್‌ಡೌನ್‌: ಬಡವರಿಗೆ ಪಡಿತರ ವಿತರಿಸಲು ಹೈಕೋರ್ಟ್ ಸೂಚನೆ

ಪ್ರಜಾವಾಣಿ ವಾರ್ತೆ Updated:

ಅಕ್ಷರ ಗಾತ್ರ : | |

Prajavani

ಬೆಂಗಳೂರು: ಲಾಕ್ ಡೌನ್ ಅವಧಿಯಲ್ಲಿ ಆದಾಯ ಇಲ್ಲದೇ ಇರುವ ಸಮುದಾಯದವರಿಗೆ ಆಹಾರ ವಿತರಿಸುವ ಬಗ್ಗೆ ನಿರ್ಧಾರ ಕೈಗೊಂಡು ಗುರುವಾರ ( ಮೇ 13) ದೊಳಗೆ ವರದಿ ಸಲ್ಲಿಸುವಂತೆ ಸರ್ಕಾರಕ್ಕೆ ಹೈಕೋರ್ಟ್ ಸೂಚಿಸಿದೆ.

ಈ ಬಗ್ಗೆ ವಿಚಾರಣೆ ನಡೆಸಿದ ಮುಖ್ಯ ನ್ಯಾಯಮೂರ್ತಿ ಎ.ಎಸ್. ಓಕಾ ನೇತೃತ್ವದ ವಿಭಾಗೀಯ ಪೀಠ ‘ಲಾಕ್‌ಡೌನ್ ಕಾರಣದಿಂದ ಕೆಲ ವರ್ಗದ ಜನರಿಗೆ ಆದಾಯ ಇಲ್ಲವಾಗಿದೆ. ಲಾಕ್‌ಡೌನ್ ಅವಧಿಯಲ್ಲಿ ಅಂತಹ ನಾಗರಿಕರಿಗೆ ಆಹಾರ ಪೂರೈಕೆ ಮಾಡಬೇಕಾಗುತ್ತದೆ. ಹೀಗಾಗಿ ವಿಚಾರಣೆ ನಡೆಸಲಾಗುತ್ತಿದೆ’ ಎಂದು ಹೇಳಿತು.

‘ಆಹಾರ ಭದ್ರತಾ ಕಾರ್ಯವಿಧಾನದ ಭಾಗವಾಗಿ ಪಡಿತರ ಚೀಟಿಗಾಗಿ ಅರ್ಜಿ ಸಲ್ಲಿಸಿದವರಿಗೂ ಆಹಾರ ಧಾನ್ಯ ವಿತರಿಸುವ ಯೋಜನೆ ರೂಪಿಸಲಾಗಿದೆ. ಈ ಸಂಬಂಧ ಸರ್ಕಾರಕ್ಕೆ ಪ್ರಸ್ತಾವನೆ ಸಲ್ಲಿಸಲಾಗಿದ್ದು, ಅನುಮೋದನೆಗಾಗಿ ಕಾಯಲಾಗುತ್ತಿದೆ’ ಎಂದು ಸರ್ಕಾರದ ಪರ ವಕೀಲರು ತಿಳಿಸಿದರು.

ಕೂಡಲೇ ನಿರ್ಧಾರ ಕೈಗೊಂಡು ಗುರುವಾರ ವರದಿ ಸಲ್ಲಿಸಬೇಕು ಎಂದು ಪೀಠ ತಿಳಿಸಿತು.

ಬಿಬಿಎಂಪಿ ವ್ಯಾಪ್ತಿ ಹೊರತುಪಡಿಸಿ ರಾಜ್ಯದ ಎಲ್ಲಾ ಇಂದಿರಾ ಕ್ಯಾಂಟಿನ್‌ಗಳಲ್ಲಿ ಮೇ 24ರ ತನಕ ಊಟ–ಉಪಾಹಾರವನ್ನು ಉಚಿತವಾಗಿ ನೀಡಲಾಗುವುದು ಎಂದು ಹೈಕೋರ್ಟ್‌ಗೆ ರಾಜ್ಯ ಸರ್ಕಾರ ಮಾಹಿತಿ ನೀಡಿತು.‌.

ಫಲಿತಾಂಶ 2021 ಪೂರ್ಣ ಮಾಹಿತಿ ಇಲ್ಲಿದೆ

ತಾಜಾ ಸುದ್ದಿಗಳಿಗಾಗಿ ಪ್ರಜಾವಾಣಿ ಆ್ಯಪ್ ಡೌನ್‌ಲೋಡ್ ಮಾಡಿಕೊಳ್ಳಿ: ಆಂಡ್ರಾಯ್ಡ್ ಆ್ಯಪ್ | ಐಒಎಸ್ ಆ್ಯಪ್

ಪ್ರಜಾವಾಣಿ ಫೇಸ್‌ಬುಕ್ ಪುಟವನ್ನುಫಾಲೋ ಮಾಡಿ.

ಈ ವಿಭಾಗದಿಂದ ಇನ್ನಷ್ಟು