ಅಂಗವಿಕಲರಿಗೆ ವಿನಾಯಿತಿ ನೀಡಲು ಹೈಕೋರ್ಟ್ ನಿರ್ದೇಶನ

ಬೆಂಗಳೂರು: ಕಚೇರಿಗೆ ಎಲ್ಲಾ ನೌಕರರು ಹಾಜರಾಗುವುದು ಕಡ್ಡಾಯ ಎಂಬ ಸರ್ಕಾರದ ಸುತ್ತೋಲೆಯನ್ನು ಮರುಪರಿಶೀಲಿಸುವಂತೆ ರಾಜ್ಯ ಸರ್ಕಾರಕ್ಕೆ ಹೈಕೋರ್ಟ್ ನಿರ್ದೇಶನ ನೀಡಿದೆ.
‘ಅಂಗವಿಕಲರು ಮತ್ತು ಅಂಧರು ಮನೆಯಿಂದಲೇ ಕೆಲಸ ಮಾಡಲು ಕೇಂದ್ರ ಸರ್ಕಾರ ಅನುಮತಿಸಿದ್ದರೂ ರಾಜ್ಯ ಸರ್ಕಾರ ಅದನ್ನು ಪರಿಗಣಿಸಿಲ್ಲ’ ಎಂದು ಆರೋಪಿಸಿ ಅಂಧರ ಒಕ್ಕೂಟ ಸಾರ್ವಜನಿಕ ಹಿತಾಸಕ್ತಿ ಅರ್ಜಿ ಸಲ್ಲಿಸಿದೆ. ವಿಚಾರಣೆ ನಡೆಸಿದ ಮುಖ್ಯ ನ್ಯಾಯಮೂರ್ತಿ ಎ.ಎಸ್.ಓಕಾ ನೇತೃತ್ವದ ವಿಭಾಗೀಯ ಪೀಠ, ಈ ಆದೇಶ ನೀಡಿದೆ.
‘ಅಂಗವಿಕಲರು ವಿಶೇಷವಾಗಿ ಅಂಧರು ಕಚೇರಿಗೆ ಹಾಜರಾಗಿ ಕೆಲಸ ಮಾಡಲು ಕೋವಿಡ್ ಸಂದರ್ಭದಲ್ಲಿ ಸಾಧ್ಯವಿಲ್ಲ. ಕೆಲಸದ ವೇಳೆ ಸಹೊದ್ಯೋಗಿಗಳು ಮತ್ತು ಇತರರಿಂದ ಅಂತರ ಕಾಪಾಡಿಕೊಳ್ಳವುದು ಕಷ್ಟವಾಗಲಿದೆ. ಹೀಗಾಗಿ, ಮೇ 18ರಂದು ಹೊರಡಿಸಿರುವ ಸುತ್ತೋಲೆ ಮರುಪರಿಶೀಲಿಸಬೇಕು’ ಎಂದು ತಿಳಿಸಿತು.
ಈ ಸಂಬಂಧ ಎರಡು ವಾರಗಳಲ್ಲಿ ನಿರ್ಧಾರ ತೆಗೆದುಕೊಳ್ಳಬೇಕು ಎಂದು ತಿಳಿಸಿದ ಪೀಠ, ಡಿ.11ರೊಳಗೆ ಅನುಸರಣಾ ವರದಿ ಸಲ್ಲಿಸಬೇಕು ಎಂದು ಹೇಳಿತು.
ಪ್ರಜಾವಾಣಿ ಫೇಸ್ಬುಕ್ ಪುಟವನ್ನು ಲೈಕ್ ಮಾಡಿ, ಪ್ರಮುಖ ಸುದ್ದಿಗಳ ಅಪ್ಡೇಟ್ಸ್ ಪಡೆಯಿರಿ.
ಪ್ರಜಾವಾಣಿಯನ್ನು ಟ್ವಿಟರ್ನಲ್ಲಿ ಇಲ್ಲಿ ಫಾಲೋ ಮಾಡಿ.
ಟೆಲಿಗ್ರಾಂ ಮೂಲಕ ನಮ್ಮ ಸುದ್ದಿಗಳ ಅಪ್ಡೇಟ್ಸ್ ಪಡೆಯಲು ಇಲ್ಲಿ ಕ್ಲಿಕ್ ಮಾಡಿ.