ಶನಿವಾರ, ಸೆಪ್ಟೆಂಬರ್ 19, 2020
27 °C

ಸಿಬ್ಬಂದಿಗೆ ಕಾಲಕಾಲಕ್ಕೆ ತರಬೇತಿ: ಹೈಕೋರ್ಟ್ ನಿರ್ದೇಶನ

ಪ್ರಜಾವಾಣಿ ವಾರ್ತೆ Updated:

ಅಕ್ಷರ ಗಾತ್ರ : | |

ಬೆಂಗಳೂರು: ಗರ್ಭಧಾರಣೆ ಪೂರ್ವ ಮತ್ತು ಪ್ರಸವಪೂರ್ವ ರೋಗಗಳ ನಿಯಂತ್ರಣ ಕಾಯ್ದೆಯಡಿ ರೂಪಿಸಿರುವ ನಿಬಂಧನೆಗಳನ್ನು ಕಾರ್ಯಗತಗೊಳಿಸಲು ನೇಮಕಗೊಂಡಿರುವ ಸಿಬ್ಬಂದಿಗೆ ಕಾಲಕಾಲಕ್ಕೆ ತರಬೇತಿ ನೀಡುವಂತೆ ರಾಜ್ಯ ಸರ್ಕಾರಕ್ಕೆ ಹೈಕೋರ್ಟ್ ನಿರ್ದೇಶನ ನೀಡಿದೆ.

ಮಾಜಿ ಶಾಸಕ ಡಾ. ಸಾರ್ವಭೌಮ ಎಸ್. ಬಗಲಿ ಸಲ್ಲಿಸಿದ್ದ ಸಾರ್ವಜನಿಕ ಹಿತಾಸಕ್ತಿ ಅರ್ಜಿಯನ್ನು ಮುಖ್ಯ ನ್ಯಾಯಮೂರ್ತಿ ಎ.ಎಸ್. ಓಕಾ ನೇತೃತ್ವದ ವಿಭಾಗೀಯ ಪೀಠ ವಿಚಾರಣೆ ನಡೆಸಿತು. ಸರ್ಕಾರ ಸಲ್ಲಿಸಿದ್ದ ಅಫಿಡವಿಟ್ ಆಧರಿಸಿ ಅರ್ಜಿಯನ್ನು ಪೀಠ ವಿಲೇವಾರಿ ಮಾಡಿತು.

‘ವಿಜಯಪುರ, ಕಲಬುರ್ಗಿ, ಬೀದರ್ ಮತ್ತು ಬೆಳಗಾವಿ ಜಿಲ್ಲೆಯಲ್ಲಿ ಈ ರೀತಿಯ ರೋಗಗಳಿಗೆ ಚಿಕಿತ್ಸೆ ನೀಡುವ ಕೇಂದ್ರಗಳು ಹೆಚ್ಚಾಗಿ ತಲೆ ಎತ್ತುತ್ತಿವೆ. ಪಕ್ಕದ ಮಹಾರಾಷ್ಟ್ರ ರಾಜ್ಯದ ಜನರು ಇಲ್ಲಿಗೆ ಹೆಚ್ಚಾಗಿ ಭೇಟಿ ನೀಡುತ್ತಿದ್ದಾರೆ. ಯಾವುದೇ ಕಾನೂನುಗಳೂ ಇಲ್ಲಿ ಪಾಲನೆಯಾಗುತ್ತಿಲ್ಲ’ ಎಂದು ಅರ್ಜಿದಾರರು ದೂರಿದ್ದರು.

ಪ್ರಜಾವಾಣಿ ಫೇಸ್‌ಬುಕ್ ಪುಟವನ್ನು ಲೈಕ್ ಮಾಡಿ, ಪ್ರಮುಖ ಸುದ್ದಿಗಳ ಅಪ್‌ಡೇಟ್ಸ್ ಪಡೆಯಿರಿ.

ಪ್ರಜಾವಾಣಿಯನ್ನು ಟ್ವಿಟರ್‌ನಲ್ಲಿ ಇಲ್ಲಿ ಫಾಲೋ ಮಾಡಿ.

ಟೆಲಿಗ್ರಾಂ ಮೂಲಕ ನಮ್ಮ ಸುದ್ದಿಗಳ ಅಪ್‌ಡೇಟ್ಸ್ ಪಡೆಯಲು ಇಲ್ಲಿ ಕ್ಲಿಕ್ ಮಾಡಿ.

ಈ ವಿಭಾಗದಿಂದ ಇನ್ನಷ್ಟು