ಗುರುವಾರ, 25 ಏಪ್ರಿಲ್ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ಬಿಷಪ್‌ ವಿರುದ್ಧದ ಪ್ರಕರಣ ವಜಾ

Last Updated 15 ಜೂನ್ 2022, 20:27 IST
ಅಕ್ಷರ ಗಾತ್ರ

ಬೆಂಗಳೂರು: ದಕ್ಷಿಣ ಭಾರತ ಚರ್ಚ್‌ಗಳ ಬಿಷಪ್‌ ರೆವರೆಂಡ್‌ ಪ್ರಸನ್ನಕುಮಾರ್ ಸ್ಯಾಮ್ಯುಯೆಲ್‌ ವಿರುದ್ಧ ಪೊಕ್ಸೊ (ಲೈಂಗಿಕ ಅಪರಾಧಗಳಿಂದ ಮಕ್ಕಳ ರಕ್ಷಣೆ ಕಾಯ್ದೆ)ಅಡಿಯಲ್ಲಿ ದಾಖಲಾಗಿದ್ದ ಕ್ರಿಮಿನಲ್ ಪ್ರಕರಣವನ್ನು ಹೈಕೋರ್ಟ್‌ ರದ್ದುಪಡಿಸಿದೆ.

ಈ ಕುರಿತಂತೆರೆವರೆಂಡ್‌ ಪ್ರಸನ್ನಕುಮಾರ್ ಸ್ಯಾಮ್ಯುಯೆಲ್‌ ಸಲ್ಲಿಸಿದ್ದ ರಿಟ್‌ ಅರ್ಜಿಯನ್ನು ನ್ಯಾಯಮೂರ್ತಿ ಹೇಮಂತ ಚಂದಗೌಡರ ಅವರಿದ್ದ ಏಕಸದಸ್ಯ ನ್ಯಾಯಪೀಠ ಮಾನ್ಯ ಮಾಡಿದೆ.

‘ಪ್ರಕರಣದಲ್ಲಿ ಪ್ರಸನ್ನಕುಮಾರ್ ಭಾಗಿಯಾಗಿಲ್ಲ ಎಂಬುದು ಕಂಡು ಬರುತ್ತದೆ ಮತ್ತು ಸಂತ್ರಸ್ತ ಬಾಲಕಿಯ ಹೇಳಿಕೆಯ ಆಧಾರದಲ್ಲಿಅರ್ಜಿದಾರರ ವಿರುದ್ಧ ದೋಷಾರೋಪ ನಿಗದಿಪಡಿಸಲು ಸೆಷನ್ಸ್‌ ನ್ಯಾಯಾಲಯ ಮುಂದಾಗಿರುವುದಕ್ಕೆ ಸಾಕ್ಷ್ಯಗಳ ಕೊರತೆಯಿದೆ’ ಎಂಬ ಅಭಿಪ್ರಾಯದೊಂದಿಗೆ ನ್ಯಾಯಪೀಠ ಅರ್ಜಿದಾರರ ವಿರುದ್ಧದ ಪ್ರಕರಣ ಕೈಬಿಡುವಂತೆ ಆದೇಶಿಸಿದೆ.

ಅರ್ಜಿದಾರರ ವಿರುದ್ಧ ವಿಚಾರಣೆ ನಡೆಸಲು 50ನೇ ಸಿಟಿ ಸಿವಿಲ್‌ ಕೋರ್ಟ್‌2017ರ ಡಿಸೆಂಬರ್ 12ರಂದು ಆದೇಶಿಸಿ ಸಮನ್ಸ್‌ ಜಾರಿಗೊಳಿಸಿತ್ತು. ಇದನ್ನು ಹೈಕೋರ್ಟ್‌ನಲ್ಲಿ ಪ್ರಶ್ನಿಸಲಾಗಿತ್ತು.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT