ಗುರುವಾರ, 28 ಮಾರ್ಚ್ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ಗಲಭೆ ಪ್ರಕರಣ: ಕ್ಲೇಮ್ ಕಮಿಷನರ್ ನೇಮಕಕ್ಕೆ ಹೈಕೋರ್ಟ್‌ಗೆ ಅರ್ಜಿ

Last Updated 19 ಆಗಸ್ಟ್ 2020, 19:59 IST
ಅಕ್ಷರ ಗಾತ್ರ

ಬೆಂಗಳೂರು: ಡಿ.ಜೆ. ಹಳ್ಳಿ ಗಲಭೆಯಿಂದ ಆಗಿರುವ ಹಾನಿಯನ್ನು ಗಲಭೆಕೋರರಿಂದ ವಸೂಲಿ ಮಾಡುವ ನಿಟ್ಟಿನಲ್ಲಿ ಕ್ಲೇಮ್ ಕಮಿಷನರ್ ನೇಮಿಸುವಂತೆಹೈಕೋರ್ಟ್‌ಗೆ ರಾಜ್ಯ ಸರ್ಕಾರ ರಿಟ್ ಅರ್ಜಿ ಸಲ್ಲಿಸಿದೆ.

‘ಅರ್ಜಿ ವಿಚಾರಣೆಯನ್ನು ಗುರುವಾರ ನಡೆಸಲಾಗುವುದು’ ಎಂದುಮುಖ್ಯ ನ್ಯಾಯಮೂರ್ತಿ ಎ.ಎಸ್. ಓಕಾ ನೇತೃತ್ವದ ವಿಭಾಗೀಯ ಪೀಠ ಹೇಳಿದೆ.

‘ಪ್ರತಿಭಟನೆ, ಗಲಭೆಗಳನ್ನು ನಡೆಸಿ ನಾಗರಿಕರ ಮೇಲೆ ಹಲ್ಲೆ ಮತ್ತು ಸಾರ್ವಜನಿಕ, ಖಾಸಗಿ ಆಸ್ತಿ ನಾಶಪಡಿಸಿದ ಪ್ರಕರಣಗಳಲ್ಲಿ ಹೈಕೋರ್ಟ್‌ ಸ್ವಯಂಪ್ರೇರಿತವಾಗಿ ಕ್ರಮ ಜಾರಿಗೊಳಿಸಬಹುದು. ಹಾನಿಯ ಬಗ್ಗೆ ತನಿಖೆ ನಡೆಸಿ ಹೊಣೆಗಾರಿಕೆಯನ್ನು ಗಲಭೆಕೋರರಿಗೆ ನಿಗದಿ ಮಾಡಲುಕ್ಲೇಮ್ ಆಯುಕ್ತರನ್ನು ನೇಮಿಸಬಹುದು’ ಎಂದು ಸುಪ್ರೀಂ ಕೋರ್ಟ್‌ 2009ರಲ್ಲಿ ಹೊರಡಿಸಿರುವ ಆದೇಶವನ್ನು ಅರ್ಜಿಯಲ್ಲಿ ಉಲ್ಲೇಖಿಸಲಾಗಿದೆ.

ಇಂತಹ ಸಂದರ್ಭದಲ್ಲಿಪೊಲೀಸ್ ವರದಿ ಮತ್ತು ಲಭ್ಯವಿರುವ ಇತರ ಮಾಹಿತಿಯ ಆಧಾರದ ಮೇಲೆ ರಾಜ್ಯ ಸರ್ಕಾರ ವರದಿ ಸಿದ್ಧಪಡಿಸಬೇಕು. ಸ್ವಯಂಪ್ರೇರಿತವಾಗಿ ಕ್ರಮ ಕೈಗೊಳ್ಳುವಂತೆ ಹೈಕೋರ್ಟ್‌ನಲ್ಲಿ ಅರ್ಜಿ ಸಲ್ಲಿಸಬೇಕು. ಹೈಕೋರ್ಟ್ ನ್ಯಾಯಮೂರ್ತಿ ಅಥವಾ ಜಿಲ್ಲಾ ನ್ಯಾಯಾಧೀಶರನ್ನು ಕ್ಲೇಮ್ ಆಯುಕ್ತರನ್ನಾಗಿ ಹೈಕೋರ್ಟ್‌ ನೇಮಿಸಬಹುದು ಎಂದು ಸುಪ್ರೀಂ ಕೋರ್ಟ್‌ ನಿರ್ದೇಶನ ನೀಡಿತ್ತು.ನಗರ ಪೊಲೀಸ್ ಆಯುಕ್ತ ಕಮಲ್ ಪಂತ್ ಅವರ ವರದಿ ಒಳಗೊಂಡ ಅರ್ಜಿಯನ್ನು ಹೈಕೋರ್ಟ್‌ಗೆ ಸರ್ಕಾರ ಸಲ್ಲಿಸಿದೆ.

‘ಗಲಭೆ ಸಂಬಂಧ 64 ಕ್ರಿಮಿನಲ್ ಪ್ರಕರಣಗಳು ದಾಖಲಾಗಿವೆ. 33 ಸರ್ಕಾರಿ ವಾಹನಗಳು ಮತ್ತು 109 ಖಾಸಗಿ ವಾಹನಗಳು ಸಂಪೂರ್ಣ ಸುಟ್ಟು ನಾಶವಾಗಿವೆ. ಡಿ.ಜೆ.ಹಳ್ಳಿ ಠಾಣೆ ಕಟ್ಟಡ ಮತ್ತು ಪುಲಕೇಶಿನಗರ ಶಾಸಕ ಅಖಂಡ ಶ್ರೀನಿವಾಸಮೂರ್ತಿ ನಿವಾಸ, ಎಂಟು ಕಟ್ಟಡಗಳಿಗೆ ಹಾನಿಯಾಗಿದೆ. 80 ಪೊಲೀಸರು ಗಾಯಗೊಂಡಿದ್ದಾರೆ’ ಎಂದು ಕಮಲ್ ಪಂತ್ ವರದಿಯಲ್ಲಿ ಉಲ್ಲೇಖಿಸಿದ್ದಾರೆ.

‘ಕೇವಲ ಒಂದು ಗುಂಪಿನಿಂದ ಮಾತ್ರನಷ್ಟ ವಸೂಲಿ ಏಕೆ’
ಬೆಂಗಳೂರು: ‘ಡಿ.ಜೆ. ಹಳ್ಳಿ ಮತ್ತು ಕೆ.ಜಿ.ಹಳ್ಳಿಯಲ್ಲಿ ನಡೆದ ಗಲಭೆಯಲ್ಲಿ ಆದ ನಷ್ಟವನ್ನು ಗಲಭೆಕೋರರಿಂದ ವಸೂಲಿ ಮಾಡುವುದು ಕೇವಲ ಒಂದು ಗುಂಪು ಅಥವಾ ಘಟನೆಗೆ ಮಾತ್ರ ಅನ್ವಯಿಸಬಾರದು’ ಎಂದು ವಿರೋಧ ಪಕ್ಷದ ನಾಯಕ ಸಿದ್ದರಾಮಯ್ಯ ಪ್ರತಿಪಾದಿಸಿದ್ದಾರೆ.

ಮುಖ್ಯಮಂತ್ರಿ ಬಿ.ಎಸ್‌.ಯಡಿಯೂರಪ್ಪ ಅವರಿಗೆ ಪತ್ರ ಬರೆದಿರುವ ಅವರು, ‘ಈ ಘಟನೆಗೆ ಸಂಬಂಧಿಸಿದಂತೆ ನಷ್ಟ ವಸೂಲಿ ಮಾಡುವುದಾದರೆ, 30 ವರ್ಷಗಳಿಂದ ಈಚೆಗೆ ನಡೆದಿರುವ ಎಲ್ಲ ಗಲಭೆಗಳಿಗೂ ಅನ್ವಯಿಸಿ. ಹಾನಿ ಮಾಡಿದವರಿಂದ ನಷ್ಟ ವಸೂಲಿ ಮಾಡಬೇಕು’ ಎಂದು ಆಗ್ರಹಿಸಿದ್ದಾರೆ.

‘ಪ್ರವಾದಿಯವರ ಬಗ್ಗೆ ಅವಹೇಳನ ಮಾಡಿದ ಚಿತ್ರವನ್ನು ಫೇಸ್‌ಬುಕ್‌ನಲ್ಲಿ ಹರಿಬಿಟ್ಟ ನವೀನ್‌ಗೆ ಆ ಮಾಹಿತಿ ಕೊಟ್ಟವರಾರು? ಆ ಚಿತ್ರಗಳು ಸಾಮಾಜಿಕ ಮಾಧ್ಯಮಗಳಲ್ಲಿ ಬಿತ್ತರಿಸಲು ಕಾರಣರಾದವರು ಯಾರು? ಇದರ ಹಿಂದೆ ದೊಡ್ಡ ಪಿತೂರಿ ಇದೆ. ಇದರ ಬಗ್ಗೆಯೂ ತನಿಖೆ ಆಗಬೇಕು’ ಎಂದು ಹೇಳಿದ್ದಾರೆ.

‘ಗೃಹ ಸಚಿವರನ್ನು ಭೇಟಿಯಾದ ಕರಾವಳಿಯ ಕೋಮುವಾದಿಯೊಬ್ಬನಿಗೆ, ಸಚಿವರು ನಿಮ್ಮ ಮೇಲಿನ ಎಲ್ಲಾ ಪ್ರಕರಣ ವಾಪಸ್ಸು ತೆಗೆದುಕೊಳ್ಳುತ್ತೇವೆಂದು ಹೇಳುವ ಮಾತುಕತೆ ಪತ್ರಿಕೆಗಳಲ್ಲಿ ವರದಿಯಾಗಿತ್ತು. ಅದು ನಿಜವೇ ಆಗಿದ್ದರೆ ಸಮಾಜದ ಸ್ವಾಸ್ಥ್ಯ ಕಾಪಾಡಲು ಸರ್ಕಾರದಿಂದ ಸಾಧ್ಯವೆ? ‘ಧರ್ಮದ ಆಧಾರದ ಮೇಲೆ ದೊಂಬಿಯೆಬ್ಬಿಸಲು ಪ್ರಯತ್ನಿಸಿದ ಶೃಂಗೇರಿಯ ಮಾಜಿ ಶಾಸಕ ಜೀವರಾಜ್ ಅವರ ಮೇಲೂ ಪ್ರಕರಣ ದಾಖಲಿಸಬೇಕು.

ಶೃಂಗೇರಿಯಲ್ಲಿ ಆರೋಪಿ ಪತ್ತೆಯಾಗುವ ಮೊದಲೇ ಅಪರಾಧಿ ಯಾರು ಎಂದು ಬಿಜೆಪಿ ತೀರ್ಮಾನಿಸಿತ್ತು. ಬಡ ತರಕಾರಿ ವ್ಯಾಪಾರಿಗಳೇ ಈ ಕೃತ್ಯ ಮಾಡಿರುವುದೆಂದು ಅವರ ತಲೆಗೆ ಅಪರಾಧ ಕಟ್ಟಲಾಗಿತ್ತು. ಮಸೀದಿಯಲ್ಲಿ ಸಿ.ಸಿ.ಟಿ.ವಿಇರದಿದ್ದರೆ ಬಜರಂಗದಳದ ಮಾಜಿ ಕಾರ್ಯಕರ್ತನ ಬದಲಿಗೆ ಇನ್ಯಾರೋ ಇರುತ್ತಿದ್ದರು’ ಎಂದು ಅವರು ಹೇಳಿದ್ದಾರೆ.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT