ಶುಕ್ರವಾರ, ಜನವರಿ 27, 2023
17 °C

ಪತ್ನಿ ಎರಡು ಕಾಯ್ದೆಗಳಡಿ ಜೀವನಾಂಶಕ್ಕೆ ಅರ್ಹಳು: ಹೈಕೋರ್ಟ್

ಪ್ರಜಾವಾಣಿ ವಾರ್ತೆ Updated:

ಅಕ್ಷರ ಗಾತ್ರ : | |

ಬೆಂಗಳೂರು: ‘ಕೌಟುಂಬಿಕ ಕಲಹ ಪ್ರಕರಣದಲ್ಲಿ, ಪತ್ನಿಯು ಪತಿಯಿಂದ ಕೌಟುಂಬಿಕ ದೌರ್ಜನ್ಯ ತಡೆ ಕಾಯ್ದೆ ಹಾಗೂ ಹಿಂದೂ ವಿವಾಹ ಕಾಯ್ದೆಯಡಿ ಎರಡರಿಂದಲೂ ಜೀವನಾಂಶ ಪಡೆ ಯಲು ಅವಕಾಶವಿದೆ’ ಎಂದು ಹೈಕೋರ್ಟ್ ಸ್ಪಷ್ಟಪಡಿಸಿದ್ದು, ‘ಜೀವನಾಂಶದ ಪ್ರಮಾಣವನ್ನು ನ್ಯಾಯಾಲಯವೇ ಹೊಂದಾಣಿಕೆ ಮಾಡ ಬಹುದು’ ಎಂದು ಅಭಿಪ್ರಾಯಪಟ್ಟಿದೆ.

ಈ ಸಂಬಂಧ 34 ವರ್ಷದ ಪತಿ ಸಲ್ಲಿಸಿದ್ದ ಅರ್ಜಿ ವಿಚಾರಣೆ ನಡೆಸಿದ ನ್ಯಾಯಮೂರ್ತಿ ಎಂ.ನಾಗಪ್ರಸನ್ನ ಅವರಿದ್ದ ಏಕಸದಸ್ಯ ನ್ಯಾಯಪೀಠ ಈ ಕುರಿತಂತೆ ಆದೇಶಿಸಿದ್ದು, ‘ಒಂದು ಕಾಯ್ದೆಯಡಿ ಜೀವನಾಂಶ ನೀಡಲಾಗಿದೆ ಎಂಬ ಕಾರಣಕ್ಕೆ ಮತ್ತೊಂದು ಕಾಯ್ದೆಯಡಿ ಜೀವನಾಂಶ ನೀಡಲಾಗದು ಎಂದು ಹೇಳಲು ಸಾಧ್ಯವಿಲ್ಲ. ಎರಡೂ ಕಾಯ್ದೆಯಡಿ ಜೀವನಾಂಶದ ಪ್ರಮಾಣವನ್ನು ನ್ಯಾಯಾಲಯವೇ ಹೊಂದಾಣಿಕೆ ಮಾಡಬೇಕು’ ಎಂದು ಪತಿ ಸಲ್ಲಿಸಿದ್ದ ರಿಟ್‌ ಅರ್ಜಿಯನ್ನು ವಜಾಗೊಳಿಸಿದೆ.

ಪ್ರಕರಣವೇನು?: ಅರ್ಜಿದಾರ ಪತಿ 2018ರಲ್ಲಿ 28 ವರ್ಷದ ತರುಣಿಯನ್ನು ವಿವಾಹವಾಗಿದ್ದರು. ದಂಪತಿಗೆ ಸಂತಾನ ಇರಲಿಲ್ಲ. ಏತನ್ಮಧ್ಯೆ, ‘ಪತಿ ಕಿರುಕುಳ ನೀಡುತ್ತಿದ್ದಾರೆ’ ಎಂದು ಆರೋಪಿಸಿದ್ದ ಪತ್ನಿ 2020ರ ಡಿಸೆಂಬರ್ 11ರಲ್ಲಿ ಪತಿ ಮತ್ತು ಅವರ ಕುಟುಂಬದ ಸದಸ್ಯರ ವಿರುದ್ಧ ಕೌಟುಂಬಿಕ ದೌರ್ಜನ್ಯ ತಡೆ ಕಾಯ್ದೆಯಡಿ ದೂರು ದಾಖಲಿಸಿದ್ದರು.

ಈ ಪ್ರಕರಣದಲ್ಲಿ ಸ್ಥಳೀಯ ಕೌಟುಂಬಿಕ ನ್ಯಾಯಾಲಯವು ಜೀವನ ನಿರ್ವಹಣಾ ವೆಚ್ಚವೆಂದು ಪ್ರತಿ ತಿಂಗಳೂ ₹ 20 ಸಾವಿರ ನೀಡುವಂತೆ ಮಾಡಿದ್ದ  ಪತ್ನಿಯ ಮಧ್ಯಂತರ ಮನವಿಯನ್ನು ಪುರಸ್ಕರಿಸಿತ್ತು. ಈ ಆದೇಶವನ್ನು ಪತಿ ಸೆಷನ್ಸ್‌ ನ್ಯಾಯಾಲಯದಲ್ಲಿ ಪ್ರಶ್ನಿಸಿ
ದ್ದರು. ಸೆಷನ್ಸ್‌ ನ್ಯಾಯಾಲಯ ಇದನ್ನು ತಿರಸ್ಕರಿಸಿತ್ತು.

ತಾಜಾ ಮಾಹಿತಿ ಪಡೆಯಲು ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ

ತಾಜಾ ಸುದ್ದಿಗಳಿಗಾಗಿ ಪ್ರಜಾವಾಣಿ ಆ್ಯಪ್ ಡೌನ್‌ಲೋಡ್ ಮಾಡಿಕೊಳ್ಳಿ: ಆಂಡ್ರಾಯ್ಡ್ ಆ್ಯಪ್ | ಐಒಎಸ್ ಆ್ಯಪ್

ಪ್ರಜಾವಾಣಿ ಫೇಸ್‌ಬುಕ್ ಪುಟವನ್ನುಫಾಲೋ ಮಾಡಿ.

ಈ ವಿಭಾಗದಿಂದ ಇನ್ನಷ್ಟು