ಶುಕ್ರವಾರ, 26 ಏಪ್ರಿಲ್ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

570 ಕ್ರಿಮಿನಲ್ ಪ್ರಕರಣ ವಾಪಸ್ ರಾಜ್ಯ ಸರ್ಕಾರಕ್ಕೆ ನೋಟಿಸ್‌

ರಾಜ್ಯ ಸರ್ಕಾರ, ಡಿಜಿಪಿಗೆ ನೋಟಿಸ್‌ ಜಾರಿಗೆ ಹೈಕೋರ್ಟ್‌ ಆದೇಶ
Last Updated 12 ನವೆಂಬರ್ 2020, 20:15 IST
ಅಕ್ಷರ ಗಾತ್ರ

ಬೆಂಗಳೂರು: ಸಚಿವರು, ಶಾಸಕರು ಸೇರಿದಂತೆ ರಾಜಕಾರಣಿಗಳು ಮತ್ತು ಅವರ ಬೆಂಬಲಿಗರ ವಿರುದ್ಧ ದಾಖಲಾಗಿದ್ದ 570 ಪ್ರಕರಣಗಳನ್ನು ವಿಚಾರಣೆಯಿಂದ ಹಿಂಪಡೆಯುವ ನಿರ್ಧಾರ ಪ್ರಶ್ನಿಸಿ ಸಲ್ಲಿಸಿರುವ ಸಾರ್ವಜನಿಕ ಹಿತಾಸಕ್ತಿ ಅರ್ಜಿಯನ್ನು ವಿಚಾರಣೆಗೆ ಸ್ವೀಕರಿಸಿರುವ ಹೈಕೋರ್ಟ್‌, ರಾಜ್ಯ ಸರ್ಕಾರ, ಪೊಲೀಸ್‌ ಮಹಾನಿರ್ದೇಶಕರು ಮತ್ತು ಅಭಿಯೋಜನಾ ಇಲಾಖೆಯ ನಿರ್ದೇಶಕರಿಗೆ ನೋಟಿಸ್‌ ಜಾರಿ ಮಾಡುವಂತೆ ಗುರುವಾರ ಆದೇಶಿಸಿದೆ.

2014ರ ಆಗಸ್ಟ್‌ 8ರಿಂದ 2020ರ ಮೇ 5ರವರೆಗಿನ ಅವಧಿಯಲ್ಲಿ 570 ಕ್ರಿಮಿನಲ್‌ ಪ್ರಕರಣಗಳನ್ನು ವಿಚಾರಣೆಯಿಂದ ಹಿಂಪಡೆಯಲು ಸಚಿವ ಸಂಪುಟ ಕೈಗೊಂಡಿರುವ ನಿರ್ಣಯಗಳನ್ನು ಪ್ರಶ್ನಿಸಿ ವಕೀಲೆ ಸುಧಾ ಕಟ್ವಾ ಸಾರ್ವಜನಿಕ ಹಿತಾಸಕ್ತಿ ಅರ್ಜಿ ಸಲ್ಲಿಸಿದ್ದಾರೆ. ಈ ಅರ್ಜಿಯ ವಿಚಾರಣೆ ಆರಂಭಿಸಿದ ಮುಖ್ಯ ನ್ಯಾಯಮೂರ್ತಿ ಎ.ಎಸ್‌. ಓಕಾ ನೇತೃತ್ವದ ವಿಭಾಗೀಯ ಪೀಠ ಪ್ರತಿವಾದಿಗಳಿಗೆ ನೋಟಿಸ್‌ ಜಾರಿಗೆ ಆದೇಶಿಸಿತು.

ರಾಜ್ಯ ಸರ್ಕಾರವು ಕ್ರಿಮಿನಲ್‌ ಪ್ರಕರಣಗಳನ್ನು ವಿಚಾರಣೆಯಿಂದ ಹಿಂಪಡೆಯುವ ಮೂಲಕ ಅಪರಾಧ ದಂಡ ಪ್ರಕ್ರಿಯಾ ಸಂಹಿತೆ (ಸಿಆರ್‌ಪಿಸಿ) ಸೆಕ್ಷನ್‌ 312ರ ಅಡಿ ದತ್ತವಾಗಿರುವ ಅಧಿಕಾರವನ್ನು ದುರ್ಬಳಕೆ ಮಾಡಿಕೊಳ್ಳುತ್ತಿದೆ. ವಿಚಾರಣೆಯಿಂದ ವಾಪಸ್‌ ಪಡೆದ ಪ್ರಕರಣಗಳ ಮಾಹಿತಿಯನ್ನೂ ಬಚ್ಚಿಡುತ್ತಿದೆ ಎಂದು ಅರ್ಜಿದಾರರು ದೂರಿದ್ದಾರೆ.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT