ಶುಕ್ರವಾರ, ಸೆಪ್ಟೆಂಬರ್ 17, 2021
24 °C

ಶಾಸಕರ ವಿರುದ್ಧದ ಪ್ರಕರಣ ವಾಪಸ್: ಆದೇಶ ಮಂಡನೆಗೆ ಸೂಚನೆ

ಪ್ರಜಾವಾಣಿ ವಾರ್ತೆ Updated:

ಅಕ್ಷರ ಗಾತ್ರ : | |

Prajavani

ಬೆಂಗಳೂರು: ಶಾಸಕ ಮತ್ತು ಸಂಸದರ ವಿರುದ್ಧದ ಕ್ರಿಮಿನಲ್ ಪ್ರಕರಣಗಳನ್ನು ಹಿಂಪಡೆಯಲು 2020ರ ಸೆಪ್ಟೆಂಬರ್ 16ರ ಬಳಿಕ ಹೊರಡಿಸಿರುವ ಆದೇಶಗಳನ್ನು ಮಂಡಿಸುವಂತೆ ರಾಜ್ಯ ಸರ್ಕಾರಕ್ಕೆ ಹೈಕೋರ್ಟ್ ನಿರ್ದೇಶನ ನೀಡಿದೆ.

ಹೈಕೋರ್ಟ್ ಆನುಮತಿ ಇಲ್ಲದೆ ಯಾವುದೇ ಶಾಸಕ ಅಥವಾ ಸಂಸದರ ವಿರುದ್ಧದ ಪ್ರಕರಣ ವಾಪಸ್ ಪಡೆಯಬಾರದು ಎಂಬ ಸುಪ್ರೀಂ ಕೋರ್ಟ್ ಆದೇಶ ಗಮನದಲ್ಲಿಟ್ಟುಕೊಂಡು ಮುಖ್ಯ ನ್ಯಾಯಮೂರ್ತಿ ಎ.ಎಸ್. ಓಕಾ ನೇತೃತ್ವದ ವಿಭಾಗೀಯ ಪೀಠ, ಈ ನಿರ್ದೇಶನ ನೀಡಿತು.

ಚುನಾಯಿತ ಪ್ರತಿನಿಧಿಗಳ ವಿರುದ್ಧದ ಪ್ರಕರಣ ಸೇರಿ 61 ಪ್ರಕರಣಗಳ ವಿಚಾರಣೆಯನ್ನು ಸರ್ಕಾರ 2020 ಆಗಸ್ಟ್ 31ರಂದು ಹಿಂದಕ್ಕೆ ಪಡೆದಿದ್ದ ಆದೇಶವನ್ನು ಪ್ರಶ್ನಿಸಿ ಪೀಪಲ್ ಯೂನಿಯನ್ ಫಾರ್ ಸಿವಿಲ್ ಲಿಬರ್ಟೀಸ್(ಪಿಯುಸಿಎಲ್) ಸಲ್ಲಿಸಿದ್ದ ಅರ್ಜಿ ಪರಿಶೀಲನೆ ನಡೆಸಿದ ಪೀಠ, ‘ಹಾಲಿ, ಮಾಜಿ ಶಾಸಕರ ಅಥವಾ ಸಂಸದರ ವಿರುದ್ಧದ ಪ್ರಕರಣ ವಾಪಸ್ ಪಡೆಯುವಾಗ ಸುಪ್ರೀಂ ಕೋರ್ಟ್‌ ಆದೇಶವನ್ನು ಸರ್ಕಾರ ಕಟ್ಟುನಿಟ್ಟಾಗಿ ಪಾಲಿಸಬೇಕು’ ಎಂದು ತಿಳಿಸಿತು.

ಜನಪ್ರತಿನಿಧಿಗಳ ವಿರುದ್ಧದ ಪ್ರಕರಣಗಳಲ್ಲಿ ಸುಪ್ರೀಂ ಕೋರ್ಟ್‌ ಆದೇಶ ಪಾಲನೆ ಬಗ್ಗೆ ಮೇಲ್ವಿಚಾರಣೆ ನಡೆಸಲು ದಾಖಲಿಸಿಕೊಂಡಿರುವ ಸ್ವಯಂ ಪ್ರೇರಿತ ಸಾರ್ವಜನಿಕ ಹಿತಾಸಕ್ತಿ ಅರ್ಜಿ ವಿಚಾರಣೆಯನ್ನೂ ಪೀಠ ನಡೆಸುತ್ತಿದೆ. ಬಾಕಿ ಪ್ರಕರಣಗಳ ವಿಚಾರಣೆಗೆ ವಿಶೇಷ ಪೀಠವನ್ನೂ ರಚಿಸಿದೆ.

ತಾಜಾ ಮಾಹಿತಿ ಪಡೆಯಲು ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ

ತಾಜಾ ಸುದ್ದಿಗಳಿಗಾಗಿ ಪ್ರಜಾವಾಣಿ ಆ್ಯಪ್ ಡೌನ್‌ಲೋಡ್ ಮಾಡಿಕೊಳ್ಳಿ: ಆಂಡ್ರಾಯ್ಡ್ ಆ್ಯಪ್ | ಐಒಎಸ್ ಆ್ಯಪ್

ಪ್ರಜಾವಾಣಿ ಫೇಸ್‌ಬುಕ್ ಪುಟವನ್ನುಫಾಲೋ ಮಾಡಿ.

ಈ ವಿಭಾಗದಿಂದ ಇನ್ನಷ್ಟು