ಶುಕ್ರವಾರ, ಸೆಪ್ಟೆಂಬರ್ 24, 2021
27 °C

ಕ್ರಿಮಿನಲ್ ಪ್ರಕರಣ ರದ್ದು ಕೋರಿದ್ದ ಜೀವರಾಜ್ ಅರ್ಜಿ ವಜಾ

ಪ್ರಜಾವಾಣಿ ವಾರ್ತೆ Updated:

ಅಕ್ಷರ ಗಾತ್ರ : | |

Prajavani

ಬೆಂಗಳೂರು: ತಮ್ಮ ವಿರುದ್ಧದ ಕ್ರಿಮಿನಲ್ ಪ್ರಕರಣ ರದ್ದು ಕೋರಿ ಮಾಜಿ ಸಚಿವ ಡಿ.ಎನ್‌. ಜೀವರಾಜ್ ಸಲ್ಲಿಸಿದ್ದ ಅರ್ಜಿಯನ್ನು ಹೈಕೋರ್ಟ್ ವಜಾಗೊಳಿಸಿದೆ.

ಭೂ ಮಂಜೂರಾತಿ ಸಮಿತಿ ಅಧ್ಯಕ್ಷರಾಗಿದ್ದಾಗ ನಿಯಮ ಉಲ್ಲಂಘಿಸಿ ಸಂಬಂಧಿಕರಿಗೆ ಭೂ ಮಂಜೂರಾತಿ ನೀಡಿದ್ದ ಆರೋಪದಲ್ಲಿ ಅವರ ವಿರುದ್ಧ ಎಫ್‌ಐಆರ್ ದಾಖಲಾಗಿತ್ತು.

ಚಿಕ್ಕಮಗಳೂರು ಜಿಲ್ಲೆಯ ನರಸಿಂಹರಾಜಪುರ ತಾಲ್ಲೂಕಿನ ವಾಸುದೇವ ಕೋಟ್ಯಾನ್ ಎಂಬುವರು ಸಲ್ಲಿಸಿದ್ದ ಖಾಸಗಿ ದೂರು ಆಧಾರಿಸಿ ಲೋಕಾಯುಕ್ತ ವಿಶೇಷ ನ್ಯಾಯಾಲಯ ತನಿಖೆಗೆ ಆದೇಶಿಸಿತ್ತು. ಲೋಕಾಯುಕ್ತ ಪೊಲೀಸರು ದೋಷಾರೋಪ ಪಟ್ಟಿ ಸಲ್ಲಿಸಿದ್ದರು. ಇಡೀ ಪ್ರಕ್ರಿಯೆಯನ್ನು ಜೀವರಾಜ್ ಪ್ರಶ್ನಿಸಿದ್ದರು.

‘ನಿಯಮ ಉಲ್ಲಂಘನೆ ಆಗಿದೆಯೋ ಇಲ್ಲವೋ ಎಂಬುದನ್ನು ನ್ಯಾಯಾಲಯ ವಿಚಾರಣೆ ಬಳಿಕ ತೀರ್ಮಾನಿಸಲಿದೆ’ ಎಂದು ತಿಳಿಸಿದ ನ್ಯಾಯಮೂರ್ತಿ ಸುನೀಲ್‌ ದತ್ತ ಯಾದವ್ ಅವರಿದ್ದ ಪೀಠ ಅರ್ಜಿ ವಜಾಗೊಳಿಸಿತು.‌

ತಾಜಾ ಮಾಹಿತಿ ಪಡೆಯಲು ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ

ತಾಜಾ ಸುದ್ದಿಗಳಿಗಾಗಿ ಪ್ರಜಾವಾಣಿ ಆ್ಯಪ್ ಡೌನ್‌ಲೋಡ್ ಮಾಡಿಕೊಳ್ಳಿ: ಆಂಡ್ರಾಯ್ಡ್ ಆ್ಯಪ್ | ಐಒಎಸ್ ಆ್ಯಪ್

ಪ್ರಜಾವಾಣಿ ಫೇಸ್‌ಬುಕ್ ಪುಟವನ್ನುಫಾಲೋ ಮಾಡಿ.

ಈ ವಿಭಾಗದಿಂದ ಇನ್ನಷ್ಟು