ಮಂಗಳವಾರ, ಸೆಪ್ಟೆಂಬರ್ 29, 2020
27 °C
ಮಡಿಕೇರಿಯಲ್ಲಿ ಅವೈಜ್ಞಾನಿಕವಾಗಿ ಕಸ ಸುರಿಯುತ್ತಿರುವ ಸ್ಥಳೀಯ ಸಂಸ್ಥೆ

ಕೆಎಸ್‌ಪಿಸಿಬಿ ಅಸಹಾಯಕತೆ: ಹೈಕೋರ್ಟ್ ಅಸಮಾಧಾನ

ಪ್ರಜಾವಾಣಿ ವಾರ್ತೆ Updated:

ಅಕ್ಷರ ಗಾತ್ರ : | |

Prajavani

ಬೆಂಗಳೂರು: ಮಡಿಕೇರಿಯಲ್ಲಿ ಅವೈಜ್ಞಾನಿಕವಾಗಿ ತ್ಯಾಜ್ಯ ಸುರಿಯುತ್ತಿರುವ ಬಗ್ಗೆ ಅಫಿಡವಿಟ್ ಸಲ್ಲಿಸುವಂತೆ ಕರ್ನಾಟಕ ರಾಜ್ಯ ಮಾಲಿನ್ಯ ನಿಯಂತ್ರಣ ಮಂಡಳಿಗೆ(ಕೆಎಸ್‌ಪಿಸಿಬಿ) ಹೈಕೋರ್ಟ್ ನಿರ್ದೇಶನ ನೀಡಿದೆ.

ಪರಿಸರ ಸಂರಕ್ಷಣಾ ಕಾಯ್ದೆ ಮತ್ತು ಘನತ್ಯಾಜ್ಯ ನಿರ್ವಹಣಾ ನಿಯಮಗಳನ್ನು ಸ್ಥಳೀಯ ಅಧಿಕಾರಿಗಳು ಉಲ್ಲಂಘಿಸಿದಾಗ ಕೆಎಸ್‌ಪಿಸಿಬಿ ಅಸಹಾಯಕತೆಯಿಂದ ವರ್ತಿಸಬಾರದು. ಅಧ್ಯಕ್ಷರ ಅಧಿಕಾರ ನಿರ್ವಹಿಸುತ್ತಿರುವವರೇ ಈ ಸಂಬಂಧ ಅಫಿಡವಿಟ್ ಸಲ್ಲಿಸಬೇಕು’ ಎಂದು ಮುಖ್ಯ‌ ನ್ಯಾಯಮೂರ್ತಿ ಎ.ಎಸ್. ಓಕಾ ನೇತೃತ್ವದ ವಿಭಾಗೀಯ ಪೀಠ ಹೇಳಿದೆ.

ಮಡಿಕೇರಿಯ ಸುಬ್ರಮಣ್ಯನಗರ, ವಿದ್ಯಾನಗರ, ಕನ್ನಿಕ ಲೇಔಟ್ ನಿವಾಸಿಗಳು ಮತ್ತು ಎಸ್ಆರ್‌ವಿಕೆ ವೆಲ್‌ಫೇರ್ ಅಸೋಸಿಯೇಷನ್ ಸಲ್ಲಿಸದ್ದ ಸಾರ್ವಜನಿಕ ಹಿತಾಸಕ್ತಿ ಅರ್ಜಿ ವಿಚಾರಣೆ ನಡೆಸಿದ ಪೀಠ, ಈ ಆದೇಶ ನೀಡಿದೆ.

‘ಮಡಿಕೇರಿಯ ಕರ್ಣಗೇರಿ ಸಮೀಪ ಅರಣ್ಯ ಇಲಾಖೆ ವಿರೋಧದ ನಡುವೆ ನಿಯಮ ಉಲ್ಲಂಘಿಸಿ ಕಸ ಸುರಿಯಲಾಗುತ್ತಿದೆ’ ಎಂದು ಅರ್ಜಿದಾರರು ದೂರಿದ್ದಾರೆ.

ಸ್ಥಳಕ್ಕೆ ಭೇಟಿ ನೀಡಿ ಸದ್ಯದ ಪರಿಸ್ಥಿತಿ ಪರಿಶೀಲಿಸಲು ಅಧಿಕಾರಿಯೊಬ್ಬರನ್ನು ನಿಯೋಜಿಸುವಂತೆ ಮತ್ತು ಕಾನೂನಿನ ಪ್ರಕಾರ ಏನು ಕ್ರಮ ಕೈಗೊಳ್ಳಲಾಗಿದೆ ಎಂಬುದರ ಕುರಿತು ವರದಿ ಸಲ್ಲಿಸುವಂತೆ ಕೆಎಸ್‌ಪಿಸಿಬಿಗೆ ಈ ಹಿಂದಿನ ವಿಚಾರಣೆ ವೇಳೆಯೇ ಪೀಠ ನಿರ್ದೇಶನ ನೀಡಿತ್ತು. 

‘ಮಾಲಿನ್ಯ ನಿಯಂತ್ರಣ ಮಂಡಳಿ ಅಸಹಾಯಕತೆಯಿಂದ ವರ್ತಿಸುತ್ತಿರುವುದು ವಿಷಾದದ ಸಂಗತಿ. ಇಂತಹ ಸಂದರ್ಭದಲ್ಲಿ ಸ್ಥಳೀಯ ಸಂಸ್ಥೆ ವಿರುದ್ಧ ರಾಜ್ಯ ಸರ್ಕಾರವೇ ಕ್ರಮ ಕೈಗೊಳ್ಳಬೇಕು’ ಎಂದು ತಿಳಿಸಿ ವಿಚಾರಣೆಯನ್ನು ಆ.14ಕ್ಕೆ ಮುಂದೂಡಿತು.

 

ಪ್ರಜಾವಾಣಿ ಫೇಸ್‌ಬುಕ್ ಪುಟವನ್ನು ಲೈಕ್ ಮಾಡಿ, ಪ್ರಮುಖ ಸುದ್ದಿಗಳ ಅಪ್‌ಡೇಟ್ಸ್ ಪಡೆಯಿರಿ.

ಪ್ರಜಾವಾಣಿಯನ್ನು ಟ್ವಿಟರ್‌ನಲ್ಲಿ ಇಲ್ಲಿ ಫಾಲೋ ಮಾಡಿ.

ಟೆಲಿಗ್ರಾಂ ಮೂಲಕ ನಮ್ಮ ಸುದ್ದಿಗಳ ಅಪ್‌ಡೇಟ್ಸ್ ಪಡೆಯಲು ಇಲ್ಲಿ ಕ್ಲಿಕ್ ಮಾಡಿ.

ಈ ವಿಭಾಗದಿಂದ ಇನ್ನಷ್ಟು