ಶುಕ್ರವಾರ, 26 ಏಪ್ರಿಲ್ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ವೈದ್ಯಕೀಯ ಶಿಕ್ಷಣ ಸಂಸ್ಥೆಗಳ ನೌಕರರಿಗೆ ನಗದು ರಹಿತ ಚಿಕಿತ್ಸೆ

ಹೈಕೋರ್ಟ್‌ಗೆ ರಾಜ್ಯ ಸರ್ಕಾರ ಮಾಹಿತಿ
Last Updated 16 ಸೆಪ್ಟೆಂಬರ್ 2020, 18:44 IST
ಅಕ್ಷರ ಗಾತ್ರ

ಬೆಂಗಳೂರು: ‘ವೈದ್ಯಕೀಯ ಶಿಕ್ಷಣ ಇಲಾಖೆ ವ್ಯಾಪ್ತಿಯಲ್ಲಿರುವ ಸ್ವಾಯತ್ತ ಸಂಸ್ಥೆಗಳ ನೌಕರರಿಗೆ ಮತ್ತು ಅವರ ಕುಟುಂಬ ಸದಸ್ಯರಿಗೆ ಜ್ಯೋತಿ ಸಂಜೀವಿನಿ ಯೋಜನೆಯಡಿ ನಗದು ರಹಿತ ಕೋವಿಡ್ ಚಿಕಿತ್ಸೆ ನೀಡಲಾಗುತ್ತಿದೆ’ ಎಂದು ಹೈಕೋರ್ಟ್‌ಗೆ ರಾಜ್ಯ ಸರ್ಕಾರ ಮಾಹಿತಿ ನೀಡಿದೆ.

ವೈದ್ಯಕೀಯ ಶಿಕ್ಷಣ ಸಂಸ್ಥೆಗಳ ನೌಕರರ ಸಂಘ ಸಲ್ಲಿಸಿದ್ದ ಸಾರ್ವಜನಿಕ ಹಿತಾಸಕ್ತಿ ಅರ್ಜಿ ವಿಚಾರಣೆ ನಡೆಸಿದ ಮುಖ್ಯ ನ್ಯಾಯಮೂರ್ತಿ ಎ.ಎಸ್. ಓಕಾ ನೇತೃತ್ವದ ವಿಭಾಗೀಯ ಪೀಠ, ‘ನೌಕರರೇ ಚಿಕಿತ್ಸಾ ವೆಚ್ಚ ಭರಿಸಿದ್ದರೆ ಅದನ್ನು ಮರುಪಾವತಿ ಮಾಡಬೇಕು ಎಂಬ ಮನವಿಯನ್ನು ಪರಿಗಣಿಸಿ’ ಎಂದು ತಿಳಿಸಿತು.

2014ರ ಆಗಸ್ಟ್‌ 18ರ ಅಧಿಸೂಚನೆಯಲ್ಲಿ ಉಲ್ಲೇಖಿಸಿರುವ ಏಳು ಕಾಯಿಲೆಗಳಿಗೆ ನಗದು ರಹಿತ ಚಿಕಿತ್ಸೆಯ ಪ್ರಯೋಜನ ವಿಸ್ತರಣೆ ಮಾಡುವ ಸಂಬಂಧ ಒಂದು ತಿಂಗಳಲ್ಲಿ ಕ್ರಮ ಕೈಗೊಳ್ಳುವಂತೆ ಪೀಠ ತಿಳಿಸಿತು.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT