ಗುರುವಾರ , ಆಗಸ್ಟ್ 18, 2022
24 °C

ನೀಟ್ ಮೂಂದೂಡಿಕೆ ಪ್ರಶ್ನಿಸಿದ್ದ ಅರ್ಜಿ ವಜಾ

ಪ್ರಜಾವಾಣಿ ವಾರ್ತೆ Updated:

ಅಕ್ಷರ ಗಾತ್ರ : | |

Prajavani

ಬೆಂಗಳೂರು: ನೀಟ್‌ ಪರೀಕ್ಷೆಯನ್ನು ಆಗಸ್ಟ್ 31ರ ನಂತರ ನಡೆಸಲು ಮುಂದೂಡಿರುವುದನ್ನು ಪ್ರಶ್ನಿಸಿ ಸಲ್ಲಿಕೆಯಾಗಿದ್ದ ಸಾರ್ವಜನಿಕ ಹಿತಾಸಕ್ತಿ ಅರ್ಜಿಯನ್ನು ಹೈಕೋರ್ಟ್ ವಜಾಗೊಳಿಸಿದೆ.

ಅರ್ಜಿ ವಿಚಾರಣೆ ನಡೆಸಿದ ನ್ಯಾಯಮೂರ್ತಿ ಬಿ.ವಿ. ನಾಗರತ್ನಾ ನೇತೃತ್ವದ ವಿಭಾಗೀಯ ಪೀಠ, ‘ತಜ್ಞರ ವರದಿ ಆಧರಿಸಿ ಕೇಂದ್ರ ಸರ್ಕಾರ ಈ ನಿರ್ಧಾರ ಕೈಗೊಂಡಿದೆ. ಕೋವಿಡ್‌ ಕಾರಣದಿಂದ ನೀಟ್ ಪರೀಕ್ಷೆ ಮುಂದೂಡಬೇಕಾದ ಸಂದರ್ಭ ಎದುರಾಗಿದೆ. ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಸಚಿವಾಲಯದ ವಿವೇಚನೆಯನ್ನು ತಪ್ಪು ಎಂದು ಹೇಳಲಾಗುವುದಿಲ್ಲ’ ಎಂದು ಅಭಿಪ್ರಾಯಪಟ್ಟಿತು.

ಜಿ.ಬಿ. ಕುಲಕರ್ಣಿ ಮೆಮೋರಿಯಲ್ ಲೀಗಲ್ ಟ್ರಸ್ಟ್‌ ಅಧ್ಯಕ್ಷ ಡಾ. ವಿನೋದ್ ಜಿ. ಕುಲಕರ್ಣಿ ಅವರು ಅರ್ಜಿ ಸಲ್ಲಿಸಿ, ನೀಟ್ ಪರೀಕ್ಷೆಯನ್ನು ಮುಂದೂಡಬಾರದು ಎಂದು ನಿರ್ದೇಶನ ನೀಡಲು ಕೋರಿದ್ದರು.

‘ಏಪ್ರಿಲ್ 18ಕ್ಕೆ ಪರೀಕ್ಷೆ ನಡೆಯಬೇಕಿತ್ತು. ಒಂದು ದಿನ ಮುಂಚಿತವಾಗಿ ಮುಂದೂಡಿಕೆ ನಿರ್ಧಾರ ಪ್ರಕಟಿಸಲಾಯಿತು. ಆ ಸಂದರ್ಭದಲ್ಲಿ ಪರೀಕ್ಷೆ ಮುಂದೂಡಲು ಸಕಾರಣಗಳು ಇರಲಿಲ್ಲ’ ಎಂದು ಅರ್ಜಿದಾರರು ದೂರಿದ್ದರು.

ತಾಜಾ ಮಾಹಿತಿ ಪಡೆಯಲು ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ

ತಾಜಾ ಸುದ್ದಿಗಳಿಗಾಗಿ ಪ್ರಜಾವಾಣಿ ಆ್ಯಪ್ ಡೌನ್‌ಲೋಡ್ ಮಾಡಿಕೊಳ್ಳಿ: ಆಂಡ್ರಾಯ್ಡ್ ಆ್ಯಪ್ | ಐಒಎಸ್ ಆ್ಯಪ್

ಪ್ರಜಾವಾಣಿ ಫೇಸ್‌ಬುಕ್ ಪುಟವನ್ನುಫಾಲೋ ಮಾಡಿ.

ಈ ವಿಭಾಗದಿಂದ ಇನ್ನಷ್ಟು