ಶನಿವಾರ, ಜನವರಿ 23, 2021
18 °C

ಅಭಿಯೋಜಕರ ನೇಮಕಕ್ಕೆ ಕಾರ್ಯವಿಧಾನ ರೂಪಿಸಿ: ಹೈಕೋರ್ಟ್

ಪ್ರಜಾವಾಣಿ ವಾರ್ತೆ Updated:

ಅಕ್ಷರ ಗಾತ್ರ : | |

Prajavani

ಬೆಂಗಳೂರು: ಜನಪ್ರತಿನಿಧಿಗಳ ವಿಶೇಷ ನ್ಯಾಯಾಲಯದಲ್ಲಿ ಬಾಕಿ ಇರುವ ಪ್ರಕರಣಗಳಿಗೆ ಸಂಬಂಧಿಸಿದಂತೆ ಸರ್ಕಾರಿ ಅಭಿಯೋಜಕರನ್ನು ಪರೀಕ್ಷೆ ನಡೆಸಿ ಆಯ್ಕೆ ಮಾಡಿಕೊಳ್ಳಲು ಕಾರ್ಯವಿಧಾನ ರೂಪಿಸುವಂತೆ ರಾಜ್ಯ ಮತ್ತು ಕೇಂದ್ರ ಸರ್ಕಾರಗಳ ಅಡಿಯಲ್ಲಿರುವ ಎಲ್ಲ ತನಿಖಾ ಸಂಸ್ಥೆಗಳಿಗೆ ಹೈಕೋರ್ಟ್ ನಿರ್ದೇಶನ ನೀಡಿದೆ.

ಸುಪ್ರೀಂ ಕೋರ್ಟ್ ನಿರ್ದೇಶನದಂತೆ ಸ್ವಯಂ ಪ್ರೇರಿತ ಅರ್ಜಿ ದಾಖಲಿಸಿಕೊಂಡಿರುವ ಮುಖ್ಯ ನ್ಯಾಯಮೂರ್ತಿ ಎ.ಎಸ್. ಓಕಾ ನೇತೃತ್ವದ ವಿಭಾಗೀಯ ಪೀಠ, ಈ ಆದೇಶ ನೀಡಿತು. ‘ವಿಶೇಷ ನ್ಯಾಯಾಲಯದ ಮುಂದಿರುವ ಪ್ರಕರಣಗಳಿಗೆ ಸಂಬಂಧಿಸಿದಂತೆ ಸರ್ಕಾರಿ ಅಭಿಯೋಜಕರನ್ನು ನೇಮಿಸಲು ಯಾವುದೇ ಆಯ್ಕೆ ಸಮಿತಿ ಇಲ್ಲ’ ಎಂದು ಅಮಿಕಸ್ ಕ್ಯೂರಿ ಆದಿತ್ಯ ಸೋಂಧಿ ತಿಳಿಸಿದರು.

‘ನ್ಯಾಯಾಲಯದ ಮುಂದಿರುವ ಪ್ರಕರಣಗಳ ಸ್ವರೂಪ ಗಮನಿಸಿದರೆ ಪ್ರಕರಣಗಳನ್ನು ಪರಿಣಾಮಕಾರಿಯಾಗಿ ನಿಭಾಯಿಸಲು ಸಮರ್ಥವಾಗಿರುವ ಸಾರ್ವಜನಿಕ ಅಭಿಯೋಜಕರನ್ನು ನೇಮಕ ಮಾಡಿಕೊಳ್ಳುವುದು ರಾಜ್ಯ ಮತ್ತು ಕೇಂದ್ರ ಸರ್ಕಾರಗಳ ಜವಾಬ್ದಾರಿ’ ಎಂದು ಪೀಠ ಹೇಳಿತು.

ಈ ನಡುವೆ, ಎರಡನೇ ವಿಶೇಷ ನ್ಯಾಯಾಲಯ ರಚಿಸಿ ಅಧಿಸೂಚನೆ ಹೊರಡಿಸಲಾಗಿದೆ ಎಂದು ರಾಜ್ಯ ಸರ್ಕಾರ ವಿವರಣೆ ಸಲ್ಲಿಸಿತು. ಜನಪ್ರತಿನಿಧಿಗಳ ವಿರುದ್ಧ ಬಾಕಿ ಇರುವ ಕ್ರಿಮಿನಲ್ ಮೊಕದ್ದಮೆಗಳನ್ನು ಎದುರಿಸಲು ಶ್ರೀಧರ್ ಗೋಪಾಲಕೃಷ್ಣ ಭಟ್ ಅವರನ್ನು ಎರಡನೇ ನ್ಯಾಯಾಲಯಕ್ಕೆ ಹೆಚ್ಚುವರಿ ನಗರ ಸಿವಿಲ್ ಮತ್ತು ಸೆಷನ್ಸ್ ನ್ಯಾಯಾಧೀಶರನ್ನಾಗಿ ನೇಮಿಸಲಾಗಿದೆ ಎಂದು ವಿವರಿಸಿದೆ.

ಪ್ರಜಾವಾಣಿ ಫೇಸ್‌ಬುಕ್ ಪುಟವನ್ನು ಲೈಕ್ ಮಾಡಿ, ಪ್ರಮುಖ ಸುದ್ದಿಗಳ ಅಪ್‌ಡೇಟ್ಸ್ ಪಡೆಯಿರಿ.

ಪ್ರಜಾವಾಣಿಯನ್ನು ಟ್ವಿಟರ್‌ನಲ್ಲಿ ಇಲ್ಲಿ ಫಾಲೋ ಮಾಡಿ.

ಟೆಲಿಗ್ರಾಂ ಮೂಲಕ ನಮ್ಮ ಸುದ್ದಿಗಳ ಅಪ್‌ಡೇಟ್ಸ್ ಪಡೆಯಲು ಇಲ್ಲಿ ಕ್ಲಿಕ್ ಮಾಡಿ.

ಈ ವಿಭಾಗದಿಂದ ಇನ್ನಷ್ಟು