ಗುರುವಾರ , ಜೂನ್ 24, 2021
27 °C

ಭೂಸುಧಾರಣೆ ತಿದ್ದುಪಡಿ ಸುಗ್ರೀವಾಜ್ಞೆ: ಹೈಕೋರ್ಟ್ ನೋಟಿಸ್

ಪ್ರಜಾವಾಣಿ ವಾರ್ತೆ Updated:

ಅಕ್ಷರ ಗಾತ್ರ : | |

Prajavani

ಬೆಂಗಳೂರು: ಕರ್ನಾಟಕ ಭೂ ಸುಧಾರಣಾ ತಿದ್ದುಪಡಿ ಸುಗ್ರೀವಾಜ್ಞೆ ಪ್ರಶ್ನಿಸಿ ಸಲ್ಲಿಸಿರುವ ಸಾರ್ವಜನಿಕ ಹಿತಾಸಕ್ತಿ ಅರ್ಜಿ ಆಧರಿಸಿ ರಾಜ್ಯ ಸರ್ಕಾರಕ್ಕೆ ಹೈಕೋರ್ಟ್ ನೋಟಿಸ್ ನೀಡಿದೆ. 

ಬಾಗಲಕೋಟೆ ಜಿಲ್ಲೆ ಇಳಕಲ್ ಪಟ್ಟಣದ ಸಾಮಾಜಿಕ ಹೋರಾಟಗಾರ ನಾಗರಾಜ್ ಹೊಂಗಲ್ ಸಲ್ಲಿಸಿದ್ದ ಸಾರ್ವಜನಿಕ ಹಿತಾಸಕ್ತಿ ಅರ್ಜಿಯನ್ನು ಮುಖ್ಯ ನ್ಯಾಯಮೂರ್ತಿ ಎ.ಎಸ್. ಓಕಾ ನೇತೃತ್ವದ ವಿಭಾಗೀಯ ಪೀಠ ವಿಚಾರಣೆ ನಡೆಸಿತು.

‘ರೈತರ ಹಿತಾಸಕ್ತಿ ಕಾಪಾಡುವ ಉತ್ತಮ ಉದ್ದೇಶದಿಂದ 1961ರ ಕಾಯ್ದೆಯಲ್ಲಿ ಹಲವು ನಿರ್ಬಂಧ ವಿಧಿಸಲಾಗಿದೆ. 2020ರ ಜುಲೈ 13ರಂದು ಅಧಿಸೂಚನೆ ಹೊರಡಿಸಿದ ಭೂಸುಧಾರಣಾ ತಿದ್ದುಪಡಿ ಸುಗ್ರೀವಾಜ್ಞೆಯು ಕೃಷಿ ಭೂಮಿಯನ್ನು ಕೃಷಿಯೇತರರು ಖರೀದಿಸಲು ಆದಾಯ ಮಿತಿಯ ಮೇಲಿನ ನಿರ್ಬಂಧ ತೆಗೆದುಹಾಕಿದೆ. ಇದು ರೈತರ ಮೇಲೆ ಗಂಭೀರ ಪರಿಣಾಮ ಬೀರಲಿದೆ’ ಎಂದು ಅರ್ಜಿದಾರರು ತಿಳಿಸಿದ್ದಾರೆ.

‘ಒಬ್ಬ ವ್ಯಕ್ತಿ ಇನ್ನು ಮುಂದೆ 108 ಎಕರೆ, ಒಂದು ಕುಟುಂಬ 432 ಎಕರೆ ಜಮೀನು ಹೊಂದಬಹುದಾಗಿದೆ. ಇದು ಬಂಡವಾಳಶಾಹಿ ವ್ಯವಸ್ಥೆಯನ್ನು ಮತ್ತಷ್ಟು ಬಲಗೊಳಿಸಲಿದೆ. ಸಣ್ಣ, ಅತಿ ಸಣ್ಣ ಮತ್ತು ಮಧ್ಯಮ ರೈತ ವರ್ಗವನ್ನು ನಾಶ ಮಾಡಲಿದೆ. ದೇಶದ ಕೃಷಿ ಉತ್ಪನ್ನದ ಮೇಲೆ ದುಷ್ಪರಿಣಾಮ ಬೀರಲಿದೆ. ಸಂವಿಧಾನದಲ್ಲಿ ಉಲ್ಲೇಖಿತವಾದ ಸಮಾಜವಾದದ ಮೂಲ ಪರಿಕಲ್ಪನೆಗೆ ಕೊಡಲಿ ಪೆಟ್ಟು ಬಿದ್ದಿದೆ’ ಎಂದು ಅರ್ಜಿಯಲ್ಲಿ ವಿವರಿಸಿದ್ದಾರೆ.

ಫಲಿತಾಂಶ 2021 ಪೂರ್ಣ ಮಾಹಿತಿ ಇಲ್ಲಿದೆ

ತಾಜಾ ಸುದ್ದಿಗಳಿಗಾಗಿ ಪ್ರಜಾವಾಣಿ ಆ್ಯಪ್ ಡೌನ್‌ಲೋಡ್ ಮಾಡಿಕೊಳ್ಳಿ: ಆಂಡ್ರಾಯ್ಡ್ ಆ್ಯಪ್ | ಐಒಎಸ್ ಆ್ಯಪ್

ಪ್ರಜಾವಾಣಿ ಫೇಸ್‌ಬುಕ್ ಪುಟವನ್ನುಫಾಲೋ ಮಾಡಿ.

ಈ ವಿಭಾಗದಿಂದ ಇನ್ನಷ್ಟು