ಶುಕ್ರವಾರ, 26 ಏಪ್ರಿಲ್ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ಗಡುವು ನೀಡಿದ ಹೈಕೋರ್ಟ್‌

ಜಿಎನ್‌ಎಂ ಕೋರ್ಸ್‌ ಆರಂಭಕ್ಕೆ ಅನುಮತಿ ಕೋರಿದ ಅರ್ಜಿ
Last Updated 12 ಏಪ್ರಿಲ್ 2022, 19:08 IST
ಅಕ್ಷರ ಗಾತ್ರ

ಬೆಂಗಳೂರು: ‘ಡಿಪ್ಲೊಮಾ ಇನ್ ಜನ ರಲ್ ನರ್ಸಿಂಗ್ ಮತ್ತು ಮಿಡ್‌ವೈಫರಿ (ಜಿಎನ್‌ಎಂ) ಕೋರ್ಸ್ ಆರಂಭಿಸಲು ಅನುಮತಿ ಕೋರಿ 25 ನರ್ಸಿಂಗ್ ಶಿಕ್ಷಣ ಸಂಸ್ಥೆಗಳು 2019ರಲ್ಲಿ ಸಲ್ಲಿಸಿರುವ ಅರ್ಜಿ ಗಳನ್ನು 8 ವಾರಗಳಲ್ಲಿ ಪರಿಗಣಿಸಿ’ ಎಂದು ರಾಜ್ಯ ಸರ್ಕಾರಕ್ಕೆ ಹೈಕೋರ್ಟ್ ಆದೇಶಿಸಿದೆ.

ಈ ಸಂಬಂಧ ಜೆಪಿಐ ದಾಸ್ ಸ್ಕೂಲ್ ಆಫ್ ನರ್ಸಿಂಗ್ ಮತ್ತು ಇತರೆ 24 ಸಂಸ್ಥೆಗಳು ಸಲ್ಲಿಸಿದ್ದ ಅರ್ಜಿಯನ್ನು ನ್ಯಾಯಮೂರ್ತಿ ಪಿ.ಕೃಷ್ಣಭಟ್ ಅವರಿದ್ದ ಏಕಸದಸ್ಯ ನ್ಯಾಯಪೀಠ ವಿಚಾರಣೆ ನಡೆಸಿತು.‌‌

‘2021–22ನೇ ಸಾಲಿನಲ್ಲಿ ಹೊಸ ಕೋರ್ಸ್ ಆರಂಭಕ್ಕೆ ಅನುಮತಿ ನೀಡುವ ಅಥವಾ ನೀಡದೇ ಇರುವ ಬಗ್ಗೆ ಸರ್ಕಾರ ಯಾವುದಾದರೂ ಒಂದು ನಿರ್ಧಾರ ಕೈಗೊಳ್ಳಬೇಕು.

ಒಂದು ವೇಳೆ ಅರ್ಜಿ ತಿರಸ್ಕರಿಸಿದರೆ ಅದಕ್ಕೆ ಸೂಕ್ತ ಕಾರಣ ನೀಡಬೇಕಾಗುತ್ತದೆ’ ಎಂದು ನ್ಯಾಯಪೀಠ ಆದೇಶಿಸಿದೆ.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT