ಶುಕ್ರವಾರ, 10 ಮೇ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ಕೋವಿಡ್ ನಿಯಮ ಸಡಿಲಿಕೆ: ಎಲ್ಲಾ ಆದೇಶ ಮಂಡಿಸಲು ಹೈಕೋರ್ಟ್‌ ಸೂಚನೆ

Last Updated 7 ಏಪ್ರಿಲ್ 2021, 19:34 IST
ಅಕ್ಷರ ಗಾತ್ರ

ಬೆಂಗಳೂರು: ಕೋವಿಡ್‌ ನಿಯಮ ಸಡಿಲಿಕೆ ಸಂಬಂಧ ಪದೇ ಪದೇ ಆದೇಶಗಳನ್ನು ಮಾರ್ಪಡಿಸಲಾಗುತ್ತಿದ್ದು, ಸಂಬಂಧಿಸಿದ ಎಲ್ಲಾ ಆದೇಶಗಳನ್ನು ನ್ಯಾಯಾಲಯದ ಮುಂದೆ ಮಂಡಿಸುವಂತೆ ರಾಜ್ಯ ಸರ್ಕಾರಕ್ಕೆ ಹೈಕೋರ್ಟ್ ನಿರ್ದೇಶನ ನೀಡಿದೆ.

ಸಿನಿಮಾ ಮಂದಿರಗಳಲ್ಲಿ ಶೇ 50ರಷ್ಟು ಪ್ರೇಕ್ಷಕರಿಗೆ (ಆಸನಗಳ ಭರ್ತಿ) ಅವಕಾಶ ನೀಡಿದ್ದ ಆದೇಶವನ್ನು ಮತ್ತೆ ಬದಲಾಯಿಸಿ ಏ.7 ರ ತನಕ ಶೇ 100ರಷ್ಟು ಆಸನಗಳ ಭರ್ತಿಗೆ ಅವಕಾಶ ನೀಡಲಾಯಿತು. ಜಿಮ್‌ಗಳನ್ನು ಮುಚ್ಚಬೇಕು ಎಂಬ ಆದೇಶವನ್ನೂ ಸಡಿಲಿಸಲಾಗಿದೆ. ಎಲ್ಲಾ ಆದೇಶಗಳನ್ನು ನ್ಯಾಯಾಲಯಕ್ಕೆ ಸಲ್ಲಿಸಬೇಕು ಎಂದು ಮುಖ್ಯ ನ್ಯಾಯಮೂರ್ತಿ ಎ.ಎಸ್. ಓಕಾ ನೇತೃತ್ವದ ವಿಭಾಗೀಯ ಪೀಠ ಸರ್ಕಾರಕ್ಕೆ ನಿರ್ದೇಶನ ನೀಡಿತು.

ಅಪಾರ್ಟ್‌ಮೆಂಟ್‌ಗಳು, ಹೋಟೆಲ್, ರೆಸ್ಟೋರೆಂಟ್‌, ಸಿನಿಮಾ ಮಂದಿರ, ಬಾರ್, ಜಿಮ್‌ ಹಾಗೂ ಇನ್ನಿತರ ಸಾರ್ವಜನಿಕ ಪ್ರದೇಶಗಳಲ್ಲಿ ಸರ್ಕಾರದ ಆದೇಶಗಳನ್ನು ಪಾಲಿಸಲಾಗುತ್ತಿದೆಯೇ ಎಂಬುದರ ಕುರಿತು ದಿಢೀರ್ ತಪಾಸಣೆ ನಡೆಸುವಂತೆ ಬಿಬಿಎಂಪಿಗೆ ಪೀಠ ನಿರ್ದೇಶನ ನೀಡಿತು.

‘ರಾಜ್ಯದಲ್ಲಿ ಅದರಲ್ಲೂ ಬೆಂಗಳೂರಿನಲ್ಲಿ ಕೋವಿಡ್ ಪ್ರಕರಣ ಏರಿಕೆಯಾಗುತ್ತಿದೆ. ಒಳಾಂಗಣ ಮತ್ತು ಹೊರಾಂಗಣ ಕಾರ್ಯಕ್ರಮಗಳಿಗೆ ಸರ್ಕಾರ ನಿಗದಿ ಮಾಡಿರುವಷ್ಟೇ ಜನರು ಭಾಗವಹಿಸುತ್ತಿದ್ದಾರೆಯೇ ಪರಿಶೀಲಿಸಬೇಕು. ಅಗತ್ಯ ಇದ್ದರೆ ಜನರ ಸಂಖ್ಯೆಯನ್ನು ಕಡಿಮೆ ಮಾಡುವ ನಿಟ್ಟಿನಲ್ಲಿ ಮಾರ್ಪಡಿಸಿದ ಆದೇಶ ಹೊರಡಿಸಬೇಕು’ ಎಂದು ಸೂಚಿಸಿತು. ವಿಚಾರಣೆಯನ್ನು ಏ.15ಕ್ಕೆ ಮುಂದೂಡಿತು.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT