ಬೆಂಗಳೂರು: ಹೈಕೋರ್ಟ್‌ನಲ್ಲಿ ಸರ್ಕಾರಿ ವಕೀಲರಾಗಿದ್ದ ವಿ.ಶ್ರೀನಿಧಿ (46) ಮಂಗಳವಾರ ಮಧ್ಯಾಹ್ನ 2.25ಕ್ಕೆ ಮಲ್ಲೇಶ್ವರದ ಅಪೊಲೊ ಆಸ್ಪತ್ರೆಯಲ್ಲಿ ಹೃದಯಾಘಾತದಿಂದ ನಿಧನರಾದರು.
ಅವರು ಪತ್ನಿ, ಒಬ್ಬ ಪುತ್ರ ಮತ್ತು ಪುತ್ರಿಯನ್ನು ಅಗಲಿದ್ದಾರೆ. ಹಿರಿಯೂರು ತಾಲ್ಲೂಕಿನ ಐಮಂಗಲ ಹೋಬಳಿಯ ತಾಳವಟ್ಟಿ ಗ್ರಾಮದ ಶ್ರೀನಿಧಿ ಕಳೆದ ಎಂಟು ವರ್ಷಗಳಿಂದ ಸರ್ಕಾರದ ಪರ ಮತ್ತು ಬೃಹತ್ ಬೆಂಗಳೂರು ಮಹಾನಗರ ಪಾಲಿಕೆಯ ಪರ ವಕೀಲರಾಗಿ ಮಹತ್ವದ ಪ್ರಕರಣಗಳನ್ನು ಸಮರ್ಥವಾಗಿ ನಿಭಾಯಿಸಿದ ವಕೀಲರೆನಿಸಿದ್ದರು.
‘ಅಂತ್ಯ ಸಂಸ್ಕಾರದ ಬಗ್ಗೆ ಇನ್ನೂ ನಿರ್ಧರಿಸಿಲ್ಲ’ ಎಂದು ಸಮೀಪದ ಬಂಧುಗಳು ‘ಪ್ರಜಾವಾಣಿ’ಗೆ ತಿಳಿಸಿದ್ದಾರೆ. ಮಾಹಿತಿಗೆ ಕುಟುಂಬದ ಸದಸ್ಯ ಶೇಖರ್ 93420–09191 ಇವರನ್ನು ಸಂಪರ್ಕಿಸಬಹುದು.
ತಾಜಾ ಮಾಹಿತಿ ಪಡೆಯಲು ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ
ತಾಜಾ ಸುದ್ದಿಗಳಿಗಾಗಿ ಪ್ರಜಾವಾಣಿ ಆ್ಯಪ್ ಡೌನ್‌ಲೋಡ್ ಮಾಡಿಕೊಳ್ಳಿ: ಆಂಡ್ರಾಯ್ಡ್ ಆ್ಯಪ್ | ಐಒಎಸ್ ಆ್ಯಪ್
ಪ್ರಜಾವಾಣಿ ಫೇಸ್‌ಬುಕ್ ಪುಟವನ್ನುಫಾಲೋ ಮಾಡಿ.