ಶುಕ್ರವಾರ, ಆಗಸ್ಟ್ 19, 2022
22 °C

ಕೆಪಿಎಸ್‌ಸಿ: ತ್ವರಿತ ವಿಚಾರಣೆಗೆ ಕೆಎಟಿಗೆ ನಿರ್ದೇಶನ

ಪ್ರಜಾವಾಣಿ ವಾರ್ತೆ Updated:

ಅಕ್ಷರ ಗಾತ್ರ : | |

ಬೆಂಗಳೂರು: ಕೆಪಿಎಸ್‌ಸಿ ಗೆಜೆಟೆಡ್ ಪ್ರೊಬೇಷನರಿ ಹುದ್ದೆಗಳಿಗೆ 2011ನೇ ಸಾಲಿನಲ್ಲಿ ನಡೆಸಲಾಗಿದ್ದ ಪರೀಕ್ಷೆಯಲ್ಲಿ ಅಂತಿಮ ಪಟ್ಟಿಯಲ್ಲಿದ್ದ 362 ಅಭ್ಯರ್ಥಿಗಳ ಆಯ್ಕೆಯನ್ನು ಸಿಂಧುಗೊಳಿಸಿ; ಅವರಿಗೆ ನೇಮಕಾತಿ ಆದೇಶ ನೀಡುವ ಸಂಬಂಧದ, ಕಾಯ್ದೆ’ ಜಾರಿಗೆ ತಡೆ ಕೋರಿರುವ ಅರ್ಜಿಗಳನ್ನು ತ್ವರಿತವಾಗಿ ಪರಿಶೀಲಿಸುವಂತೆ ಕರ್ನಾಟಕ ಆಡಳಿತ ನ್ಯಾಯಮಂಡಳಿಗೆ (ಕೆಎಟಿ) ಹೈಕೋರ್ಟ್‌ ನಿರ್ದೇಶಿಸಿದೆ.

ಈ ಸಂಬಂಧ ಎ.ಟಿ.ಶ್ರೀನಿವಾಸ್ ಮತ್ತಿತರರು ಸಲ್ಲಿಸಿದ್ದ ಅರ್ಜಿಯನ್ನು ನ್ಯಾಯಮೂರ್ತಿ ಜಿ.ನರೇಂದರ್ ನೇತೃತ್ವದ ವಿಭಾಗೀಯ ನ್ಯಾಯಪೀಠ ಶುಕ್ರವಾರ ವಿಚಾರಣೆ ನಡೆಸಿತು. ಸರ್ಕಾರದ ಪರ ಹಾಜರಿದ್ದ ಅಡ್ವೊಕೇಟ್ ಜನರಲ್ ಪ್ರಭುಲಿಂಗ ಕೆ. ನಾವದಗಿ, ‘ಇದೇ ವಿಚಾರಕ್ಕೆ ಸಂಬಂಧಿಸಿದ ಅರ್ಜಿ ಗಳು ಕೆಎಟಿ ಮುಂದೆ ಇದೇ 28ರಂದು ವಿಚಾರಣೆಗೆ ಬರಲಿವೆ. ಹಾಗಾಗಿ, ಕೆಎಟಿಯಲ್ಲಿನ ಅರ್ಜಿಗಳು ಮೊದಲು ತೀರ್ಮಾನವಾಗಲಿ. ಆನಂತರ ಹೈಕೋರ್ಟ್ ಆ ಬಗ್ಗೆ ವಿಚಾರಣೆಗೆ ಕೈಗೆತ್ತಿಕೊಳ್ಳುವುದು ಸೂಕ್ತ’ ಎಂದು ಪೀಠಕ್ಕೆ ಕೋರಿದರು. ವಿಚಾರಣೆಯನ್ನು ಏಪ್ರಿಲ್‌ 4ಕ್ಕೆ ಮುಂದೂಡಲಾಯಿತು.

ತಾಜಾ ಮಾಹಿತಿ ಪಡೆಯಲು ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ

ತಾಜಾ ಸುದ್ದಿಗಳಿಗಾಗಿ ಪ್ರಜಾವಾಣಿ ಆ್ಯಪ್ ಡೌನ್‌ಲೋಡ್ ಮಾಡಿಕೊಳ್ಳಿ: ಆಂಡ್ರಾಯ್ಡ್ ಆ್ಯಪ್ | ಐಒಎಸ್ ಆ್ಯಪ್

ಪ್ರಜಾವಾಣಿ ಫೇಸ್‌ಬುಕ್ ಪುಟವನ್ನುಫಾಲೋ ಮಾಡಿ.

ಈ ವಿಭಾಗದಿಂದ ಇನ್ನಷ್ಟು