ಬೆಂಗಳೂರು: ಚಿಕ್ಕಬಳ್ಳಾಪುರ ಜಿಲ್ಲೆಯ ಗೌರಿಬಿದನೂರು ತಾಲ್ಲೂಕಿನ ಕಲಿನಾಯಕನಹಳ್ಳಿಯಲ್ಲಿ 42 ಎಕರೆ ಗೋಮಾಳ ಹೊಂದಿರುವ ಗುಡ್ಡದ ಮೇಲೆ ನಿರ್ಮಿಸಿರುವ ಧಾರ್ಮಿಕ ರಚನೆಗಳನ್ನು ತೆರವುಗೊಳಿಸಬೇಕು ಎಂದು ಕೋರಿ ಸಲ್ಲಿಕೆಯಾಗಿರುವ ಸಾರ್ವಜನಿಕ ಹಿತಾಸಕ್ತಿ ಅರ್ಜಿ ಆಧರಿಸಿ ರಾಜ್ಯ ಸರ್ಕಾರಕ್ಕೆ ಹೈಕೋರ್ಟ್ ನೋಟಿಸ್ ನೋಡಿದೆ.
ಗೌರಿಬಿದನೂರಿನಡಿ.ಎ. ಸ್ವಾಗತ್ ಮತ್ತು ಕೆ.ಎ. ಲೋಕೇಶ್ ಎಂಬುವರು ಅರ್ಜಿ ಸಲ್ಲಿಸಿದ್ದು, ‘ಬೆಟ್ಟದ ಮೇಲೆ ಚರ್ಚ್ ನಿರ್ಮಿಸುವ ಸೋಗಿನಲ್ಲಿ ಕೆಲವರು ಸರ್ಕಾರಿ ಭೂಮಿ ಲಪಟಾಯಿಸಲು ಹೊರಟಿದ್ದಾರೆ. ಪಹಣಿ ಪ್ರಕಾರ, ಕಲಿನಾಯಕನಹಳ್ಳಿ ಸರ್ವೆ ನಂಬರ್ 106ರಲ್ಲಿ 42 ಎಕರೆ 8 ಗುಂಟೆ ಗೋಮಾಳ ಇದೆ’ ಎಂದು ಹೇಳಿದ್ದಾರೆ.
‘ಬೆಂಗಳೂರು-ಹಿಂದೂಪುರ ರಾಜ್ಯ ಹೆದ್ದಾರಿ ಮತ್ತು ರೈಲ್ವೆ ಹಳಿ ಹತ್ತಿರದ ಬೆಟ್ಟದ ಮೇಲೆ ಕೆಲವರು 4-5 ಶಿಲುಬೆಗಳನ್ನು ನಿರ್ಮಿಸಿದ್ದಾರೆ. ಧಾರ್ಮಿಕ ಚಟುವಟಿಕೆ ಕೈಗೊಂಡು ನಂತರ ಭೂಮಿ ಮಂಜೂರಾತಿಗೆ ಸರ್ಕಾರಕ್ಕೆ ಅರ್ಜಿ ಸಲ್ಲಿಸಲು ಮುಂದಾಗಿದ್ದಾರೆ’ ಎಂದು ತಿಳಿಸಿದ್ದಾರೆ.
‘ಈ ವಿಷಯ ಮುಂದೆ ಧಾರ್ಮಿಕ ಬಣ್ಣಗಳನ್ನು ಪಡೆಯುವ ಸಾಧ್ಯತೆ ಇದೆ. ಬೆಟ್ಟದ ಮೇಲೆ ಅಕ್ರಮ ಚಟುವಟಿಕೆಗಳು ಮುಂದುವರಿಯಲು ಅಧಿಕಾರಿಗಳು ನಿಷ್ಕ್ರಿಯರಾಗಿರುವುದೇ ಕಾರಣ’ ಎಂದು ಅರ್ಜಿದಾರರು ಹೇಳಿದ್ದಾರೆ.
‘ಸರ್ಕಾರದ ಜಾಗದಲ್ಲಿ ಧಾರ್ಮಿಕ ಕಟ್ಟಡಗಳನ್ನು ನಿರ್ಮಿಸಬಾರದು ಎಂದು ಸುಪ್ರೀಂ ಕೋರ್ಟ್ 2009ರಲ್ಲಿ ಆದೇಶ ನೀಡಿದೆ’ ಎಂದು ಅರ್ಜಿದಾರರ ಪರ ವಕೀಲರು ವಾದಿಸಿದರು.
ತಾಜಾ ಮಾಹಿತಿ ಪಡೆಯಲು ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ
ತಾಜಾ ಸುದ್ದಿಗಳಿಗಾಗಿ ಪ್ರಜಾವಾಣಿ ಆ್ಯಪ್ ಡೌನ್‌ಲೋಡ್ ಮಾಡಿಕೊಳ್ಳಿ: ಆಂಡ್ರಾಯ್ಡ್ ಆ್ಯಪ್ | ಐಒಎಸ್ ಆ್ಯಪ್
ಪ್ರಜಾವಾಣಿ ಫೇಸ್‌ಬುಕ್ ಪುಟವನ್ನುಫಾಲೋ ಮಾಡಿ.