ಶನಿವಾರ, 27 ಏಪ್ರಿಲ್ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

‘ಆಕ್ಷೇಪಣೆ ಸಲ್ಲಿಸದಿದ್ದರೆ ನ್ಯಾಯಾಲಯಕ್ಕೆ ಹಾಜರಾಗಿ’

Last Updated 8 ಸೆಪ್ಟೆಂಬರ್ 2021, 16:14 IST
ಅಕ್ಷರ ಗಾತ್ರ

ಬೆಂಗಳೂರು: ರಾಜ್ಯದಲ್ಲಿ ವಕ್ಫ್ ಆಸ್ತಿಗಳ ದುರುಪಯೋಗ ಮತ್ತು ಅತಿಕ್ರಮಣ ಕುರಿತು ತನಿಖೆ ನಡೆಸುವಂತೆ ಕೋರಿ ಸಲ್ಲಿಸಲಾಗಿರುವ ಸಾರ್ವಜನಿಕ ಹಿತಾಸಕ್ತಿ ಅರ್ಜಿಗೆ ಪ್ರತಿಕ್ರಿಯೆ ಸಲ್ಲಿಸದಿದ್ದರೆ ನ.12 ರಂದು ನ್ಯಾಯಾಲಯಕ್ಕೆ ಹಾಜರಾಗಬೇಕು ಎಂದು ಅಲ್ಪಸಂಖ್ಯಾತರ ಕಲ್ಯಾಣ ಇಲಾಖೆಯ ಪ್ರಧಾನ ಕಾರ್ಯದರ್ಶಿಗೆ ಹೈಕೋರ್ಟ್ ಸೂಚಿಸಿದೆ.

ಮಾಜಿ ಸಚಿವ ಎಸ್.ಕೆ. ಕಾಂತಾ ಅವರು ಸಲ್ಲಿಸಿದ್ದ ಸಾರ್ವಜನಿಕ ಹಿತಾಸಕ್ತಿ ಅರ್ಜಿ ವಿಚಾರಣೆ ನಡೆಸಿದ ಹಂಗಾಮಿ ಮುಖ್ಯ ನ್ಯಾಯಮುರ್ತಿ ಸತೀಶ್‌ ಚಂದ್ರ ಶರ್ಮಾ ನೇತೃತ್ವದ ವಿಭಾಗೀಯ ಪೀಠ, ‘ಪ್ರತಿಕ್ರಿಯೆ ಸಲ್ಲಿಸಲು ಸಾಕಷ್ಟು ಸಮಯ ನೀಡಿದ್ದರೂ ಪಾಲಿಸಿಲ್ಲ’ ಎಂದು ಅಸಮಾಧಾನ ವ್ಯಕ್ತಪಡಿಸಿತು.

‘ಆಕ್ಷೇಪಣೆ ಸಲ್ಲಿಸಲು ಕೊನೆಯ ಅವಕಾಶ ನೀಡಿದ್ದರೂರಾಜ್ಯ ಸರ್ಕಾರ ಸಲ್ಲಿಸಿಲ್ಲ. ಆದ್ದರಿಂದ ಮುಂದಿನ ವಿಚಾರಣೆ ವೇಳೆ ಪ್ರಧಾನ ಕಾರ್ಯದರ್ಶಿಯೇ ಖುದ್ದು ಹಾಜರಾಗಬೇಕು ಎಂದು ತಿಳಿಸಲಾಗಿದೆ. ಈ ರೀತಿಯ ಆದೇಶದ ಹೊರತಾಗಿ ಬೇರೆ ಆಯ್ಕೆ ಕಾಣಿಸುತ್ತಿಲ್ಲ’ ಎಂದು ಪೀಠ ಹೇಳಿದೆ.

ರಾಜ್ಯ ಅಲ್ಪಸಂಖ್ಯಾತರ ಆಯೋಗದ ಅಧ್ಯಕ್ಷರಾಗಿದ್ದ ಅನ್ವರ್ ಮಾಣಿಪ್ಪಾಡಿ ಅವರು ಆಸ್ತಿ ಅತಿಕ್ರಮದ ಬಗ್ಗೆ 2012ರ ಮಾರ್ಚ್ 26ರಂದೇ ವರದಿ ಸಲ್ಲಿಸಿದ್ದಾರೆ. ಆ ವರದಿ ಆಧರಿಸಿ ಯಾವುದೇ ಕ್ರಮ ಕೈಗೊಂಡಿಲ್ಲ ಎಂದು ಅರ್ಜಿದಾರರು ಆರೋಪಿಸಿದ್ದಾರೆ.

‘ಉಪಲೋಕಾಯುಕ್ತರು ಕೂಡ ತನಿಖೆ ನಡೆಸಿ ಸರ್ಕಾರಕ್ಕೆ ವರದಿ ಸಲ್ಲಿಸಿದ್ದಾರೆ. ವಕ್ಫ್ ಆಸ್ತಿಗಳನ್ನು ಸಾಕಷ್ಟು ರಾಜಕಾರಣಿಗಳೇ ಕಬಳಿಸಿದ್ದಾರೆ ಎಂದು ವರದಿ ಉಲ್ಲೇಖಿಸಿದೆ’ ಎಂದು ಅರ್ಜಿದಾರರು ತಿಳಿಸಿದ್ದಾರೆ.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT