ಮಂಗಳವಾರ, ಡಿಸೆಂಬರ್ 7, 2021
27 °C

ಅತ್ಯಾಚಾರ: ಬಾಲಕಿಯ ಗರ್ಭಪಾತಕ್ಕೆ ಹೈಕೋರ್ಟ್‌ ಅಸ್ತು

ಪ್ರಜಾವಾಣಿ ವಾರ್ತೆ Updated:

ಅಕ್ಷರ ಗಾತ್ರ : | |

ಬೆಂಗಳೂರು: ಅತ್ಯಾಚಾರಕ್ಕೊಳಗಾಗಿ ಗರ್ಭಿಣಿಯಾದ ಹದಿನಾರು ವರ್ಷದ ಬಾಲಕಿಯ ಗರ್ಭಪಾತಕ್ಕೆ ಅಸ್ತು ಎಂದಿರುವ ಹೈಕೋರ್ಟ್‌, ‘ಸಂವಿಧಾನದ 21ನೇ ವಿಧಿಯ ಅಡಿಯಲ್ಲಿ ಸಂತಾನೋತ್ಪತ್ತಿ ಆಯ್ಕೆ ಚಲಾಯಿಸುವ ಹಕ್ಕು ಮಹಿಳೆಯ ವೈಯಕ್ತಿಕ ಸ್ವಾತಂತ್ರ್ಯದ ಭಾಗವಾಗಿದೆ’ ಎಂದು ಅಭಿಪ್ರಾಯಪಟ್ಟಿದೆ.

ಈ ಕುರಿತಂತೆ ಸಂತ್ರಸ್ತೆ ಸಲ್ಲಿಸಿದ್ದ ಅರ್ಜಿಯನ್ನು ಧಾರವಾಡ ಹೈಕೋರ್ಟ್‌ನ ನ್ಯಾಯಮೂರ್ತಿ ಎನ್‌.ಎಸ್‌.ಸಂಜಯಗೌಡ ಅವರಿದ್ದ ಏಕಸದಸ್ಯ ನ್ಯಾಯಪೀಠ ಪುರಸ್ಕರಿಸಿದ್ದು, ‘ವೈದ್ಯಕೀಯ ಗರ್ಭಪಾತ ಕಾಯ್ದೆ–1971ರ ಕಲಂ 3ರ ಅಡಿ ಗರ್ಭಧರಿಸಿ 24 ವಾರ ಪೂರ್ಣಗೊಂಡಿದ್ದರೆ ಗರ್ಭಪಾತ ಮಾಡಲಾಗದು’ ಎಂಬ ವೈದ್ಯಕೀಯ ಅಧಿಕಾರಿಯ ನಿರಾಕರಣೆಯನ್ನು ನ್ಯಾಯಪೀಠ ತಳ್ಳಿ ಹಾಕಿದೆ.

‘ಬಾಲಕಿಯರ ಮೇಲಿನ ಅತ್ಯಾಚಾರ ಪ್ರಕರಣಗಳಲ್ಲಿ ವೈದ್ಯಕೀಯ ಗರ್ಭಪಾತ ಕಾಯ್ದೆಯಲ್ಲಿ ಕೆಲವು ಶಾಸನಬದ್ಧ ಮಿತಿಗಳಿದ್ದರೂ, ಅವು ವೈದ್ಯರಿಗೆ ಮಾತ್ರ ಅನ್ವಯಿಸುತ್ತವೆ. ವೈದ್ಯಕೀಯವಾಗಿ ಗರ್ಭಧಾರಣೆ ಅಂತ್ಯಗೊಳಿಸುವ ಅನಿವಾರ್ಯತೆಯನ್ನು ನ್ಯಾಯಾಲಯಗಳು ಭಿನ್ನ ರೀತಿಯಲ್ಲಿ ಪರಿಗಣಿಸಬೇಕು’ ಎಂದು ನ್ಯಾಯಪೀಠ ಹೇಳಿದೆ.

‘ಅಪ್ರಾಪ್ತೆಯನ್ನು ಬಲವಂತವಾಗಿ ಹೆರುವಂತೆ ಮಾಡಿದರೆ ಅದು ಅಪರಾಧದ ಹೊರೆಯನ್ನು ಹೊರಲು ಬಲವಂತ ಮಾಡಿದಂತಾಗುತ್ತದೆ ಎಂಬುದನ್ನು ಮನಸ್ಸಿನಲ್ಲಿಟ್ಟುಕೊಳ್ಳಬೇಕು. ಮಹಿಳೆ ತನ್ನ ದೈಹಿಕ ಸಮಗ್ರತೆ ರಕ್ಷಿಸಿಕೊಳ್ಳುವ ಪವಿತ್ರ ಹಕ್ಕನ್ನು ಹೊಂದಿರುತ್ತಾಳೆ ಎಂಬುದನ್ನು ಮರೆಯಬಾರದು’ ಎಂದು ನ್ಯಾಯಪೀಠ ಹೇಳಿದೆ.

ತಾಜಾ ಮಾಹಿತಿ ಪಡೆಯಲು ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ

ತಾಜಾ ಸುದ್ದಿಗಳಿಗಾಗಿ ಪ್ರಜಾವಾಣಿ ಆ್ಯಪ್ ಡೌನ್‌ಲೋಡ್ ಮಾಡಿಕೊಳ್ಳಿ: ಆಂಡ್ರಾಯ್ಡ್ ಆ್ಯಪ್ | ಐಒಎಸ್ ಆ್ಯಪ್

ಪ್ರಜಾವಾಣಿ ಫೇಸ್‌ಬುಕ್ ಪುಟವನ್ನುಫಾಲೋ ಮಾಡಿ.

ಈ ವಿಭಾಗದಿಂದ ಇನ್ನಷ್ಟು