ಶುಕ್ರವಾರ, ಸೆಪ್ಟೆಂಬರ್ 24, 2021
27 °C

ಸ್ವಾತಂತ್ರ್ಯ ಹೋರಾಟಗಾರರ ಪಿಂಚಣಿ ಮಂಜೂರು ಮಾಡಲು ಹೈಕೋರ್ಟ್ ಆದೇಶ

ಪ್ರಜಾವಾಣಿ ವಾರ್ತೆ Updated:

ಅಕ್ಷರ ಗಾತ್ರ : | |

Prajavani

ಬೆಂಗಳೂರು: ಸ್ವಾತಂತ್ರ್ಯ ಹೋರಾಟಗಾರ ಬಳ್ಳಾರಿಯ ಗುಂಡುರಾವ್ ದೇಸಾಯಿ ಅವರಿಗೆ ಕೂಡಲೇ ಪಿಂಚಣಿ ಮಂಜೂರು ಮಾಡಬೇಕು ಎಂದು ರಾಜ್ಯ ಸರ್ಕಾರಕ್ಕೆ ಹೈಕೋರ್ಟ್ ನಿರ್ದೇಶನ ನೀಡಿದೆ.

‘ಹೋರಾಟದ ಸಂದರ್ಭದಲ್ಲಿ ಒಂದು ಬಾರಿ ಅವರು ಸಹಕೈದಿ ಆಗಿದ್ದರ ಬಗ್ಗೆ ಪ್ರಮಾಣಪತ್ರ ಸಲ್ಲಿಸಲಾಗಿದೆ. ಎರಡು ಬಾರಿ ಸಹಕೈದಿ ಆಗಿದ್ದರ ಬಗ್ಗೆ ಪ್ರಮಾಣಪತ್ರ ಸಲ್ಲಿಸುವುದು ಕಡ್ಡಾಯ ಎಂದು ಪಟ್ಟು ಹಿಡಿಯಲಾಗಿದೆ. ಎರಡು ದಶಕಗಳಿಂದ ಪಿಂಚಣಿ ಮಂಜೂರು ಮಾಡಿಲ್ಲ’ ಎಂದು ಬಳ್ಳಾರಿ ಜಿಲ್ಲೆಯ ಕಮಲಾಪುರದ 94 ವರ್ಷ ವಯಸ್ಸಿನ ಗುಂಡುರಾವ್ ದೇಸಾಯಿ ಅವರು ಅರ್ಜಿ ಸಲ್ಲಿಸಿದ್ದರು.

ವಿಚಾರಣೆ ನಡೆಸಿದ ನ್ಯಾಯಮೂರ್ತಿ ಕೃಷ್ಣ ಎಸ್. ದೀಕ್ಷಿತ್ ಅವರಿದ್ದ ಪೀಠ, ‘ಎರಡು ಬಾರಿ ಸಹ ಕೈದಿಯಾಗಿದ್ದರ ಬಗ್ಗೆ ಪ್ರಮಾಣಪತ್ರವನ್ನು ಈಗ ಕೇಳಿದರೆ ಅವರು ಸಲ್ಲಿಸಲು ಸಾಧ್ಯವಿಲ್ಲದ ಮಾತು. ಪಿಂಚಣಿ ಮಂಜೂರು ಮಾಡಬೇಕು’ ಎಂದು ಸೂಚಿಸಿತು.

‘ಆರು ವಾರಗಳಲ್ಲಿ ಅವರಿಗೆ ಪಿಂಚಣಿ ಮಂಜೂರು ಮಾಡಬೇಕು. ತಡ ಮಾಡಿದರೆ ಬಳ್ಳಾರಿ ಜಿಲ್ಲಾಧಿಕಾರಿ ಮತ್ತು ಹೊಸಪೇಟೆ ಉಪವಿಭಾಗಾಧಿಕಾರಿ ದಿನಕ್ಕೆ ತಲಾ ₹1 ಸಾವಿರದಂತೆ ಪಾವತಿಸಬೇಕಾಗುತ್ತದೆ’ ಎಂದು ಪೀಠವು ಎಚ್ಚರಿಸಿದೆ.

ತಾಜಾ ಮಾಹಿತಿ ಪಡೆಯಲು ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ

ತಾಜಾ ಸುದ್ದಿಗಳಿಗಾಗಿ ಪ್ರಜಾವಾಣಿ ಆ್ಯಪ್ ಡೌನ್‌ಲೋಡ್ ಮಾಡಿಕೊಳ್ಳಿ: ಆಂಡ್ರಾಯ್ಡ್ ಆ್ಯಪ್ | ಐಒಎಸ್ ಆ್ಯಪ್

ಪ್ರಜಾವಾಣಿ ಫೇಸ್‌ಬುಕ್ ಪುಟವನ್ನುಫಾಲೋ ಮಾಡಿ.

ಈ ವಿಭಾಗದಿಂದ ಇನ್ನಷ್ಟು