ಶುಕ್ರವಾರ, 19 ಏಪ್ರಿಲ್ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ಅಂಗವಿಕಲ ವಿದ್ಯಾರ್ಥಿನಿಗೆ ಹೈಕೋರ್ಟ್ ನ್ಯಾಯ

Last Updated 2 ಜುಲೈ 2022, 21:40 IST
ಅಕ್ಷರ ಗಾತ್ರ

ಬೆಂಗಳೂರು: ಅಂಗವಿಕಲತೆಯ ಪ್ರಮಾಣಪತ್ರ ಸಲ್ಲಿಸಲು ಐದು ನಿಮಿಷ ವಿಳಂಬವಾಗಿದೆ ಎಂಬ ಕಾರಣಕ್ಕೆ ವೈದ್ಯಕೀಯ ಸೀಟು ಪಡೆಯಲು ವಿಫಲವಾಗಿದ್ದ ಬೆಳಗಾವಿಯ ಯುವತಿಗೆ ನ್ಯಾಯ ಒದಗಿಸಿರುವ ಹೈಕೋರ್ಟ್, ಎಂಬಿಬಿಎಸ್ ಸೀಟು ನೀಡುವಂತೆ ಬೆಳಗಾವಿ ವೈದ್ಯಕೀಯ ವಿಜ್ಞಾನಗಳ ಸಂಸ್ಥೆಗೆ ಆದೇಶಿಸಿದೆ.

ಈ ಸಂಬಂಧ ವಿದ್ಯಾರ್ಥಿನಿ ತಜೀನ್ ಇನಾಂದಾರ್ ಸಲ್ಲಿಸಿದ್ದ ಅರ್ಜಿಯನ್ನು ಧಾರವಾಡ ಹೈಕೋರ್ಟ್ ಪೀಠದ, ನ್ಯಾಯಮೂರ್ತಿಗಳಾದ ಕೃಷ್ಣ ಎಸ್.ದೀಕ್ಷಿತ್ ಮತ್ತು ಪಿ.ಕೃಷ್ಣಭಟ್ ಅವರಿದ್ದ ವಿಭಾಗೀಯ ನ್ಯಾಯಪೀಠ ಮಾನ್ಯ ಮಾಡಿದೆ.

'ಕಾಲ ಕೆಲವೊಮ್ಮ ಕೆಲವರ ಜೀವನದಲ್ಲಿ ಏರುಪೇರು ಉಂಟು ಮಾಡುತ್ತದೆ ಮತ್ತು ಅವರು ಆ ಸನ್ನಿವೇಶದಲ್ಲಿ ಸಂತ್ರಸ್ತರಾಗುತ್ತಾರೆ. ಅಲ್ಪ ಸಂಖ್ಯಾತ ಸಮುದಾಯಕ್ಕೆ ಸೇರಿದ ಬಡ ಕುಟುಂಬದಿಂದ ಬುದ್ಧಿವಂತ ಹುಡುಗಿಗೆ ತೊಂದರೆ ಆಗಬಾರದು. ಆಕೆ ತನ್ನ ಜ್ಯೇಷ್ಠತೆ ಆಧಾರದಲ್ಲಿ ಪಡೆದಿರುವ ಸೀಟನ್ನು ಅಕೆಗೆ ನೀಡಬೇಕು’ ಎಂದು ನ್ಯಾಯಪೀಠ ಆದೇಶಿಸಿದೆ.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT