ಗುರುವಾರ, 25 ಏಪ್ರಿಲ್ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ವಸತಿ ಸಚಿವ ಸೋಮಣ್ಣ ವಿರುದ್ಧದ ಸಮನ್ಸ್‌ ರದ್ದುಪಡಿಸಿದ ಹೈಕೋರ್ಟ್

Last Updated 5 ಸೆಪ್ಟೆಂಬರ್ 2022, 22:45 IST
ಅಕ್ಷರ ಗಾತ್ರ

ಬೆಂಗಳೂರು:ಆದಾಯ ಮೀರಿ ಆಸ್ತಿ ಗಳಿಕೆ ಆರೋಪಕ್ಕೆ ಸಂಬಂಧಿಸಿದಂತೆ ವಸತಿ ಸಚಿವ ವಿ.ಸೋಮಣ್ಣ ವಿರುದ್ಧ ಜನಪ್ರತಿನಿಧಿಗಳ ವಿಶೇಷ ನ್ಯಾಯಾಲಯ ಜಾರಿಗೊಳಿಸಿದ್ದ ಸಮನ್ಸ್ ಅನ್ನು ಹೈಕೋರ್ಟ್ ರದ್ದುಪಡಿಸಿದೆ.

ಈ ಸಂಬಂಧ, ‘ಶಾಸಕರು–ಸಂಸದರ ವಿರುದ್ಧದ ಕ್ರಿಮಿನಲ್ ಪ್ರಕರಣಗಳ ವಿಚಾರಣೆಯ ವಿಶೇಷ ನ್ಯಾಯಾಲಯ’ ಹೊರಡಿಸಿದ್ದ ಸಮನ್ಸ್ ರದ್ದುಗೊಳಿಸುವಂತೆ ಕೋರಿ ಸೋಮಣ್ಣ ಸಲ್ಲಿಸಿದ್ದ ಅರ್ಜಿಯನ್ನುನ್ಯಾಯಮೂರ್ತಿ ಎಸ್.ಸುನಿಲ್ ದತ್ತ ಯಾದವ್ ಅವರಿದ್ದ ಏಕಸದಸ್ಯ ನ್ಯಾಯಪೀಠ ಸೋಮವಾರ ವಿಚಾರಣೆ ನಡೆಸಿತು.

ಪ್ರಕರಣವನ್ನು ಪುನಃ ವಿಶೇಷ ನ್ಯಾಯಾಲಯಕ್ಕೆ ವರ್ಗಾಯಿಸಿದ ನ್ಯಾಯಪೀಠ ಹೊಸದಾಗಿ ವಿಚಾರಣೆ ನಡೆಸಿ ಕಾನೂನು ಪ್ರಕಾರ ನಿರ್ಣಯ ಕೈಗೊಳ್ಳುವಂತೆ ನಿರ್ದೇಶಿಸಿದೆ.

ಪ್ರಕರಣವೇನು?:ಸೋಮಣ್ಣ ಆದಾಯ ಮೀರಿ ಆಸ್ತಿ ಗಳಿಸಿದ್ದಾರೆ ಎಂದು ಆರೋಪಿಸಿ ನಗರದ ರಾಮಕೃಷ್ಣ ಎಂಬುವರು 2013ರಲ್ಲಿ ಲೋಕಾಯುಕ್ತ ನ್ಯಾಯಾಲಯದಲ್ಲಿ ಖಾಸಗಿ ದೂರು ದಾಖಲಿಸಿದ್ದರು. ದೂರಿನ ವಿಚಾರಣೆ ನಡೆಸಿದ ನ್ಯಾಯಾಲಯ ತನಿಖೆಗೆ ಆದೇಶಿಸಿತ್ತು. ಆರೋಪದಲ್ಲಿ ಯಾವುದೇ ಹುರಳಿಲ್ಲ ಎಂದು ಪೊಲೀಸರು ರಿಪೋರ್ಟ್ ಸಲ್ಲಿಸಿದ್ದರು. ’ಬಿ‘ ರಿಪೋರ್ಟ್‌ ರದ್ದುಗೊಳಿಸಿದ್ದ ನ್ಯಾಯಾಲಯ ವಿಚಾರಣೆಗೆ ಹಾಜರಾಗುವಂತೆ ಸಮನ್ಸ್ ಜಾರಿಗೊಳಿಸಿತ್ತು.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT