ಮಂಗಳವಾರ, ಜನವರಿ 25, 2022
24 °C

ಸೂರಜ್ ರೇವಣ್ಣ ಸ್ಪರ್ಧೆ ಪ್ರಶ್ನಿಸಿದ್ದ ಅರ್ಜಿ ವಜಾ

ಪ್ರಜಾವಾಣಿ ವಾರ್ತೆ Updated:

ಅಕ್ಷರ ಗಾತ್ರ : | |

Prajavani

ಬೆಂಗಳೂರು:‘ಹಾಸನ ಸ್ಥಳೀಯ ಸಂಸ್ಥೆಗಳ ಪ್ರತಿನಿಧಿಗಳಿಂದ ವಿಧಾನ ಪರಿಷತ್‌ಗೆ ಜೆಡಿಎಸ್ ಅಭ್ಯರ್ಥಿಯಾಗಿ ಸ್ಪರ್ಧಿಸಿರುವ ಆರ್.ಸೂರಜ್ (ಸೂರಜ್‌ ರೇವಣ್ಣ) ಅವರ ನಾಮಪತ್ರ ಕಾನೂನು ಬಾಹಿರವಾಗಿದೆ’ ಎಂದು ಆಕ್ಷೇಪಿಸಿ ಸಲ್ಲಿಸಲಾಗಿದ್ದ ರಿಟ್ ಅರ್ಜಿಯನ್ನು ಹೈಕೋರ್ಟ್ ವಜಾಗೊಳಿಸಿದೆ.

ಈ ಸಂಬಂಧ ಹಾಸನ ಜಿಲ್ಲೆ ದಂಡಿಗಾನ ಹೋಬಳಿಯ ಕುಂದೂರು ಗ್ರಾಮದ ಕೆ.ಎಲ್.ಹರೀಶ್‌ ಸಲ್ಲಿಸಿದ್ದ ರಿಟ್ ಅರ್ಜಿಯನ್ನು ನ್ಯಾಯಮೂರ್ತಿ ಎಂ.ನಾಗಪ್ರಸನ್ನ ಅವರಿದ್ದ ಏಕಸದಸ್ಯ ನ್ಯಾಯಪೀಠ ಸೋಮವಾರ ವಜಾಗೊಳಿಸಿತು.

‘ಚುನಾವಣಾ ವೇಳಾಪಟ್ಟಿ ಘೋಷಣೆ
ಯಾದ ನಂತರ ಹಸ್ತಕ್ಷೇಪ ಮಾಡಲು ಸಾಧ್ಯವಿಲ್ಲ. ನಿಮ್ಮ ಆಕ್ಷೇಪಣೆ ಏನಾದರೂ ಇದ್ದರೆ ಅದನ್ನು ಚುನಾವಣಾ ತಕರಾರು ಅರ್ಜಿ ಸಲ್ಲಿಸಿ ಪರಿಹಾರ ಪಡೆಯಿರಿ’ ಎಂದು ನ್ಯಾಯಪೀಠ ಆದೇಶಿಸಿದೆ.

ಆಕ್ಷೇಪಣೆ ಏನಿತ್ತು?: ‘ಆರ್.ಸೂರಜ್‌ ಅವರು ತಮ್ಮ ನಾಮಪತ್ರದೊಂದಿಗೆ ಸಲ್ಲಿಸಿರುವ ನಮೂನೆ 26ರ ಅಡಿಯಲ್ಲಿನ ಪ್ರಮಾಣ ಪತ್ರದಲ್ಲಿ ಅನೇಕ ಮಾಹಿತಿಗಳನ್ನು ಉದ್ದೇಶಪೂರ್ವಕವಾಗಿ ಮರೆಮಾಚಿದ್ದಾರೆ. ತಮ್ಮ ಹಾಗೂ ಕುಟುಂಬದ ಸದಸ್ಯರ ಆಸ್ತಿ ವಿವರ, ನಗದು, ಸಾಲ ಹಾಗೂ ಆರ್ಥಿಕ ವಿವರಗಳನ್ನು ಸಂಪೂರ್ಣವಾಗಿ ಬಹಿರಂಗ
ಪಡಿಸಿಲ್ಲ. ಆದ್ದರಿಂದ, ಇವರ ನಾಮಪತ್ರ ತಿರಸ್ಕರಿಸಬೇಕು ಅಥವಾ ಆಯುಕ್ತರಿಗೆ ಸೂಕ್ತ ನಿರ್ದೇಶನ ನೀಡಬೇಕು’ ಎಂದು ಅರ್ಜಿದಾರರು ಕೋರಿದ್ದರು.

ತಾಜಾ ಮಾಹಿತಿ ಪಡೆಯಲು ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ

ತಾಜಾ ಸುದ್ದಿಗಳಿಗಾಗಿ ಪ್ರಜಾವಾಣಿ ಆ್ಯಪ್ ಡೌನ್‌ಲೋಡ್ ಮಾಡಿಕೊಳ್ಳಿ: ಆಂಡ್ರಾಯ್ಡ್ ಆ್ಯಪ್ | ಐಒಎಸ್ ಆ್ಯಪ್

ಪ್ರಜಾವಾಣಿ ಫೇಸ್‌ಬುಕ್ ಪುಟವನ್ನುಫಾಲೋ ಮಾಡಿ.

ಈ ವಿಭಾಗದಿಂದ ಇನ್ನಷ್ಟು