ಬೆಂಗಳೂರು: ಬಿಜೆಪಿ ಶಾಸಕ ರಮೇಶ ಜಾರಕಿಹೊಳಿ ಸಿ.ಡಿ ಪ್ರಕರಣದ ವಿಚಾರಣೆಯನ್ನು ಸಂತ್ರಸ್ತ ಯುವತಿ ಪರ ವಕೀಲರ ಕೋರಿಕೆ ಮೇರೆಗೆ ಹೈಕೋರ್ಟ್ ಬುಧವಾರಕ್ಕೆ ಮುಂದೂಡಿತು.
ಸಿಬಿಐ ತನಿಖೆಗೆ ವಹಿಸುವಂತೆ ಕೋರಿ ಸಲ್ಲಿಕೆಯಾಗಿದ್ದ ಅರ್ಜಿಗಳನ್ನು ಹಂಗಾಮಿ ಮುಖ್ಯ ನ್ಯಾಯಮೂರ್ತಿ ಸತೀಶ್ ಚಂದ್ರ ಶರ್ಮ ನೇತೃತ್ವದ ವಿಭಾಗೀಯ ಪೀಠ ವಿಚಾರಣೆ ನಡೆಸಿತು.
ಯುವತಿ ಪರ ಹಿರಿಯ ವಕೀಲೆ ಇಂದಿರಾ ಜೈಸಿಂಗ್ ಹಾಜರಾಗಿ, ಅರ್ಜಿ ವಿಚಾರಣೆಯನ್ನು ಒಂದು ದಿನ ಮುಂದೂಡಬೇಕು ಎಂದು ಕೋರಿದರು.
ತನಿಖೆ ಆರಂಭವಾದ ಬಳಿಕ ಸಿಆರ್‌ಪಿಸಿ ನಿಯಮ ಪಾಲಿಸಬೇಕಾಗುತ್ತದೆ. ಅದರಂತೆ ತನಿಖಾ ಅಂತಿಮ ವರದಿ ಸಲ್ಲಿಸಲು ಅನುಮತಿ ನೀಡಬೇಕು ಎಂದು ಅಡ್ವೊಕೇಟ್ ಜನರಲ್ ಪ್ರಭುಲಿಂಗ ನಾವದಗಿ ವಾದಿಸಿದರು.
ಎಸ್‌ಐಟಿ ತನಿಖೆಯನ್ನೇ ಯುವತಿ ಪ್ರಶ್ನಿಸಿದ್ದಾರೆ. ಅವರ ವಾದವನ್ನೂ ಆಲಿಸಬೇಕಾಗುತ್ತದೆ ಎಂದು ತಿಳಿಸಿದ ಪೀಠ, ವಿಚಾರಣೆಯನ್ನು ಬುಧವಾರಕ್ಕೆ ಮುಂದೂಡಿತು.
ತಾಜಾ ಮಾಹಿತಿ ಪಡೆಯಲು ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ
ತಾಜಾ ಸುದ್ದಿಗಳಿಗಾಗಿ ಪ್ರಜಾವಾಣಿ ಆ್ಯಪ್ ಡೌನ್‌ಲೋಡ್ ಮಾಡಿಕೊಳ್ಳಿ: ಆಂಡ್ರಾಯ್ಡ್ ಆ್ಯಪ್ | ಐಒಎಸ್ ಆ್ಯಪ್
ಪ್ರಜಾವಾಣಿ ಫೇಸ್‌ಬುಕ್ ಪುಟವನ್ನುಫಾಲೋ ಮಾಡಿ.