ಶುಕ್ರವಾರ, 19 ಏಪ್ರಿಲ್ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ರುದ್ರೇಶ್‌ ಹತ್ಯೆ ಆರೋಪಿಗಳ ಜಾಮೀನು ಅರ್ಜಿ: ಆದೇಶ ಕಾಯ್ದಿರಿಸಿದ ಹೈಕೋರ್ಟ್‌

Last Updated 7 ಜೂನ್ 2022, 19:32 IST
ಅಕ್ಷರ ಗಾತ್ರ

ಬೆಂಗಳೂರು:ರಾಷ್ಟ್ರೀಯ ಸ್ವಯಂ ಸೇವಕ ಸಂಘದ (ಆರ್‌ಎಸ್‌ಎಸ್) ಸ್ವಯಂ ಸೇವಕ ರುದ್ರೇಶ್ ಕೊಲೆ ಪ್ರಕರಣದ ಪ್ರಮುಖ ಆರೋಪಿಗಳಾದ ಇರ್ಫಾನ್‌ ಪಾಷ ಮತ್ತು ಮೊಹಮದ್ ಮುಜೀಬುಲ್ಲಾ ಅವರ ಜಾಮೀನು ಕೋರಿದ ಅರ್ಜಿ ವಿಚಾರಣೆ ಮಂಗಳವಾರ ಮುಕ್ತಾಯವಾಗಿದ್ದು, ಆದೇಶ ಕಾಯ್ದಿರಿಸಲಾಗಿದೆ.

ಇರ್ಫಾನ್‌ ಪಾಷ ಮತ್ತು ಮಹಮ್ಮದ್ ಮುಜೀಬುಲ್ಲಾ ಸಲ್ಲಿಸಿದ್ದ ಜಾಮೀನು ಅರ್ಜಿಗಳನ್ನು ನ್ಯಾಯಮೂರ್ತಿ ಕೆ.ಸೋಮಶೇಖರ್ ಮತ್ತು ಶಿವಶಂಕರ ಅಮರಣ್ಣವರ ಅವರಿದ್ದ ವಿಭಾಗೀಯ ನ್ಯಾಯಪೀಠ ವಿಚಾರಣೆ ಆಲಿಸಿತು.

ಆರೋಪಿಗಳ ಪರ ಎಸ್‌.ಬಾಲಕೃಷ್ಣನ್‌ ಮತ್ತು ಎನ್‌ಐಎ ಪರ ವಿಶೇಷ ಪ್ರಾಸಿಕ್ಯೂಟರ್ ಪಿ.ಪ್ರಸನ್ನ ಕುಮಾರ್ ವಾದ ಮಂಡಿಸಿದರು.ಪ್ರಕರಣದ ಐವರು ಆರೋಪಿಗಳು 2016ರ ಅ.27ರಿಂದ ನ್ಯಾಯಾಂಗ ಬಂಧನದಲ್ಲಿದ್ದಾರೆ.

2016ರ ಅ.16ರಂದು ಗಣವೇಶಧಾರಿಯಾಗಿದ್ದ ಶ್ರೀನಿವಾಸ್ ಅವರನ್ನು ಮಚ್ಚಿನಿಂದ ಕೊಚ್ಚಿ ಕೊಲ್ಲಲಾಗಿತ್ತು.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT