ಭಾನುವಾರ, ಆಗಸ್ಟ್ 14, 2022
23 °C

ಸ್ಮಾರ್ಟ್‌ ಬದಲು ಕಲುಷಿತ ನಗರವಾದ ಮಂಗಳೂರು: ಹೈಕೋರ್ಟ್ ತರಾಟೆ

ಪ್ರಜಾವಾಣಿ ವಾರ್ತೆ Updated:

ಅಕ್ಷರ ಗಾತ್ರ : | |

ಬೆಂಗಳೂರು: ‘ಸ್ಮಾರ್ಟ್‌ಸಿಟಿ ಯೋಜನೆಯು ಮಂಗಳೂರನ್ನು ಸ್ಮಾರ್ಟ್‌ ನಗರ ಮಾಡುವ ಬದಲು ಕಲುಷಿತ ನಗರವನ್ನಾಗಿ ಮಾಡುತ್ತಿದೆ’ ಎಂದು ಹೈಕೋರ್ಟ್ ತೀವ್ರ ತರಾಟೆಗೆ ತೆಗೆದುಕೊಂಡಿದೆ.

ಘನ ತಾಜ್ಯಕ್ಕಿಂತ ಸ್ಮಾರ್ಟ್‌ಸಿಟಿ ಯೋಜನೆ ಕಾಮಗಾರಿಯಿಂದ ಹರಡುತ್ತಿರುವ ತ್ಯಾಜ್ಯ ಹೆಚ್ಚಾಗಿದೆ ಎಂದು ಆರೋಪಿಸಿ ಸಲ್ಲಿಕೆಯಾಗಿರುವ ಸಾರ್ವಜನಿಕ ಹಿತಾಸಕ್ತಿ ಅರ್ಜಿಯನ್ನು ಮುಖ್ಯ ನ್ಯಾಯಮೂರ್ತಿ ಎ.ಎಸ್. ಓಕಾ ನೇತೃತ್ವದ ವಿಭಾಗೀಯ ಪೀಠ ವಿಚಾರಣೆ ನಡೆಸಿತು.

ತೃಪ್ತಿದಾಯಕ ವಿವರಣೆ ಸಲ್ಲಿಸದಿದ್ದರೆ ಯೋಜನೆಯ ಎಲ್ಲ ಕಾಮಗಾರಿಗಳನ್ನು ನಿಲ್ಲಿಸುವಂತೆ ಆದೇಶಿಸಲಾಗುವುದು ಎಂದು ಮಹಾನಗರ ಪಾಲಿಕೆ ಮತ್ತು ಸ್ಮಾರ್ಟ್‌ಸಿಟಿ ಲಿಮಿಟೆಡ್‌ಗೆ ಪೀಠ ಎಚ್ಚರಿಕೆ ನೀಡಿತು.

‘ಮಂಗಳೂರಿನ ಪಚ್ಚನಾಡಿಯಲ್ಲಿ ಸಂಭವಿಸಿದ ಭೂಕುಸಿತ ದುರಂತದಿಂದ ಹಾನಿಗೊಳದ ವ್ಯಕ್ತಿಗಳಿಗೆ ಗೃಹ ಮಂಡಳಿ ಕಟ್ಟಡದಲ್ಲಿ ವಸತಿ ಕಲ್ಪಿಸಲಾಗಿದೆ’ ಎಂದು ಸರ್ಕಾರ ಮತ್ತು ಪಾಲಿಕೆ ವರದಿ ಸಲ್ಲಿಸಿತು. ‘ಅಪಘಾತ ಪ್ರದೇಶದಲ್ಲಿ ಕುಡಿಯುವ ನೀರಿನ ಸೌಕರ್ಯ ಇಲ್ಲ. ಆದ್ದರಿಂದ ಟ್ಯಾಂಕರ್ ಮೂಲಕ ನೀರು ಸರಬರಾಜು ಮಾಡುತ್ತಿರುವುದನ್ನು  ಖಚಿತಪಡಿಸಬೇಕು’ ಎಂದು ‍‍ಪೀಠ ತಿಳಿಸಿತು.

ಪರಿಸರ ಕಲುಷಿತಗೊಳ್ಳುವುದನ್ನು ತಡೆಯದ ಕಾರಣಕ್ಕೆ ಸಂಬಂಧಿಸಿದ ಅಧಿಕಾರಿ ವಿರುದ್ಧ ಪರಿಸರ ಸಂರಕ್ಷಣೆ ಕಾಯ್ದೆ ಅಡಿಯಲ್ಲಿ ವಿಚಾರಣೆ ನಡೆಸುವಂತೆ ಮಂಗಳೂರು ಪಾಲಿಕೆಗೆ ಪೀಠ ನಿರ್ದೇಶನ ನೀಡಿತು.

ತಾಜಾ ಮಾಹಿತಿ ಪಡೆಯಲು ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ

ತಾಜಾ ಸುದ್ದಿಗಳಿಗಾಗಿ ಪ್ರಜಾವಾಣಿ ಆ್ಯಪ್ ಡೌನ್‌ಲೋಡ್ ಮಾಡಿಕೊಳ್ಳಿ: ಆಂಡ್ರಾಯ್ಡ್ ಆ್ಯಪ್ | ಐಒಎಸ್ ಆ್ಯಪ್

ಪ್ರಜಾವಾಣಿ ಫೇಸ್‌ಬುಕ್ ಪುಟವನ್ನುಫಾಲೋ ಮಾಡಿ.

ಈ ವಿಭಾಗದಿಂದ ಇನ್ನಷ್ಟು