ಭಾನುವಾರ, ನವೆಂಬರ್ 1, 2020
20 °C
ಇದೇ 28ರಿಂದ 55 ತಾಲ್ಲೂಕು ನ್ಯಾಯಾಲಯಗಳಲ್ಲಿ ವಿಚಾರಣೆ ಆರಂಭ

ನ್ಯಾಯಾಲಯ ಕಲಾಪ ಹಂತ–ಹಂತವಾಗಿ ಆರಂಭ

ಪ್ರಜಾವಾಣಿ ವಾರ್ತೆ Updated:

ಅಕ್ಷರ ಗಾತ್ರ : | |

ಬೆಂಗಳೂರು: ರಾಜ್ಯದ ನ್ಯಾಯಾಲಯಗಳ ಕಲಾಪಗಳು ಹಂತ–ಹಂತವಾಗಿ ಪುನರಾರಂಭವಾಗಲಿವೆ. ಹೈಕೋರ್ಟ್‌ ಹೊರಡಿಸಿರುವ ವಿಶೇಷ ಮಾರ್ಗದರ್ಶಿ ಸೂತ್ರಗಳ(ಎಸ್‌ಒಪಿ) ಪ್ರಕಾರ, 55 ತಾಲ್ಲೂಕು ನ್ಯಾಯಾಲಯಗಳಲ್ಲಿ ಇದೇ 28ರಿಂದ ಸಾಕ್ಷಿಗಳ ವಿಚಾರಣೆಯೂ ಆರಂಭವಾಗಲಿದೆ.

‘ನ್ಯಾಯಾಲಯಕ್ಕೆ ಹಾಜರಾಗುವ ಸಾಕ್ಷಿದಾರರು ಅಂದೇ ಕೋವಿಡ್ ಪರೀಕ್ಷೆ ನಡೆಸಿದ ವರದಿ(ನೆಗೆಟಿವ್) ಮತ್ತು ನ್ಯಾಯಾಲಯ ಹೊರಡಿಸಿರುವ ಸಮನ್ಸ್‌ನೊಂದಿಗೆ ಹಾಜರಾಗಬೇಕು’ ಎಂದು ಮುಖ್ಯ ನ್ಯಾಯಮೂರ್ತಿ ಎ.ಎಸ್. ಓಕಾ ಅವರು ಹೊರಡಿಸಿರುವ ಎಸ್‌ಒಪಿಯಲ್ಲಿ ದಾಖಲಿಸಲಾಗಿದೆ.

ಆರೋಪಿಗಳು ಮತ್ತು ಸಾಕ್ಷ್ಯದಾರರು ಮಾತ್ರ ಹಾಜರಾಗಲು ಅವಕಾಶ ಇದೆ. ಅನಗತ್ಯವಾಗಿ ದೂರದಾರರ ಹಾಜರಾತಿಯನ್ನು ಎಸ್‌ಒಪಿಯಲ್ಲಿ ನಿರ್ಬಂಧಿಸಲಾಗಿದೆ.

‘ದಾವಣಗೆರೆ, ಹಾವೇರಿ, ಚಿತ್ರದುರ್ಗ, ಚಿಕ್ಕಬಳ್ಳಾಪುರ, ರಾಯಚೂರು, ಬೀದರ್, ರಾಮನಗರ, ಉಡುಪಿ, ಗದಗ, ಕೊಡಗು, ಕೊಪ್ಪಳ, ಚಾಮರಾಜನಗರ ಮತ್ತು ಯಾದಗಿರಿ ಸೇರಿ 13 ಜಿಲ್ಲಾ ನ್ಯಾಯಾಲಯಗಳು ಅಕ್ಟೋಬರ್ 5ರಂದು ಮತ್ತು ಉಳಿದ ಎಲ್ಲಾ ಜಿಲ್ಲಾ ನ್ಯಾಯಾಲಯಗಳು ಅ.12ರಂದು ಆರಂಭವಾಗಲಿವೆ. ಪ್ರತಿ ನ್ಯಾಯಾಲಯಗಳಲ್ಲಿ ಬೆಳಿಗ್ಗೆ ಮತ್ತು ಮಧ್ಯಾಹ್ನ ತಲಾ 15 ಪ್ರಕರಣಗಳ ವಿಚಾರಣೆ ನಡೆಸಬೇಕು’ ಎಂದು ಎಸ್‌ಒಪಿ ಹೇಳಿದೆ.

ಪ್ರಜಾವಾಣಿ ಫೇಸ್‌ಬುಕ್ ಪುಟವನ್ನು ಲೈಕ್ ಮಾಡಿ, ಪ್ರಮುಖ ಸುದ್ದಿಗಳ ಅಪ್‌ಡೇಟ್ಸ್ ಪಡೆಯಿರಿ.

ಪ್ರಜಾವಾಣಿಯನ್ನು ಟ್ವಿಟರ್‌ನಲ್ಲಿ ಇಲ್ಲಿ ಫಾಲೋ ಮಾಡಿ.

ಟೆಲಿಗ್ರಾಂ ಮೂಲಕ ನಮ್ಮ ಸುದ್ದಿಗಳ ಅಪ್‌ಡೇಟ್ಸ್ ಪಡೆಯಲು ಇಲ್ಲಿ ಕ್ಲಿಕ್ ಮಾಡಿ.

ಈ ವಿಭಾಗದಿಂದ ಇನ್ನಷ್ಟು