ಶನಿವಾರ, ಅಕ್ಟೋಬರ್ 31, 2020
22 °C

ಕಾರಾಗೃಹಗಳ ಎಸ್‌ಒಪಿ ಮಾರ್ಪಡಿಸಿ: ಹೈಕೋರ್ಟ್‌

ಪ್ರಜಾವಾಣಿ ವಾರ್ತೆ Updated:

ಅಕ್ಷರ ಗಾತ್ರ : | |

ಬೆಂಗಳೂರು: ಕೋವಿಡ್ ತಡೆಗಟ್ಟುವ ನಿಟ್ಟಿನಲ್ಲಿ ರಾಜ್ಯದಾದ್ಯಂತ ಕಾರಾಗೃಹಗಳಿಗೆ ನೀಡಿರುವ ಮಾರ್ಗದರ್ಶಿ ಸೂತ್ರಗಳನ್ನು (ಎಸ್‌ಒಪಿ) ಮಾರ್ಪಡಿಸುವಂತೆ ರಾಜ್ಯ ಸರ್ಕಾರಕ್ಕೆ ಹೈಕೋರ್ಟ್‌ ನಿರ್ದೇಶನ ನೀಡಿದೆ.

ಗೌರಿ ಲಂಕೇಶ್ ಹತ್ಯೆ ಪ್ರಕರಣದ ಆರೋಪಿ ಮೈಸೂರು ಜೈಲಿನಲ್ಲಿರುವ ಅಮೋಲ್ ಕಾಳೆ ಸಲ್ಲಿಸಿರುವ ಅರ್ಜಿಯನ್ನು ಮುಖ್ಯ ನ್ಯಾಯಮೂರ್ತಿ ಎ.ಎಸ್. ಓಕಾ ನೇತೃತ್ವದ ವಿಭಾಗೀಯ ಪೀಠ ವಿಚಾರಣೆ ನಡೆಸಿತು.

‘ರೋಗ ಲಕ್ಷಣ ಹೊಂದಿರುವ ಕೈದಿಗಳಿಗೆ ಕಾರಾಗೃಹಗಳಲ್ಲಿ ಪ್ರತ್ಯೇಕ ಕೊಠಡಿಗಳಿಲ್ಲ. ಎಲ್ಲರನ್ನು ಒಂದೇ ಕೊಠಡಿಯಲ್ಲಿ ಇರಿಸಲಾಗುತ್ತಿದೆ’ ಎಂದು ಅರ್ಜಿದಾರರು ದೂರಿದ್ದಾರೆ.

‘ನ್ಯಾಯಾಲಯಕ್ಕೆ ಹೋಗಿ ವಾಪಸ್ ಜೈಲಿಗೆ ಕಳುಹಿಸುವಾಗ ಕೋವಿಡ್ ಪರೀಕ್ಷೆ ನಡೆಸಬೇಕು ಎಂಬುದನ್ನು ಸೇರಿಸಿ ಎಸ್‌ಒಪಿ ಮಾರ್ಪಡಿಸಬೇಕು’ ಎಂದು ಪೀಠ ತಿಳಿಸಿತು. ಅರ್ಜಿದಾರರ ಆರೋಗ್ಯ ತಪಾಸಣೆ ನಡೆಸಿ ಪ್ರಮಾಣ ಪತ್ರ ಸಲ್ಲಿಸುವಂತೆ ನಿರ್ದೇಶನ ನೀಡಿತು.

ಪ್ರಜಾವಾಣಿ ಫೇಸ್‌ಬುಕ್ ಪುಟವನ್ನು ಲೈಕ್ ಮಾಡಿ, ಪ್ರಮುಖ ಸುದ್ದಿಗಳ ಅಪ್‌ಡೇಟ್ಸ್ ಪಡೆಯಿರಿ.

ಪ್ರಜಾವಾಣಿಯನ್ನು ಟ್ವಿಟರ್‌ನಲ್ಲಿ ಇಲ್ಲಿ ಫಾಲೋ ಮಾಡಿ.

ಟೆಲಿಗ್ರಾಂ ಮೂಲಕ ನಮ್ಮ ಸುದ್ದಿಗಳ ಅಪ್‌ಡೇಟ್ಸ್ ಪಡೆಯಲು ಇಲ್ಲಿ ಕ್ಲಿಕ್ ಮಾಡಿ.

ಈ ವಿಭಾಗದಿಂದ ಇನ್ನಷ್ಟು