ಶನಿವಾರ, 11 ಮೇ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ಸರ್ಕಾರಿ ಕಾಲೇಜುಗಳಲ್ಲಿ ಕನಿಷ್ಠ 1,500 ವಿದ್ಯಾರ್ಥಿಗಳು ಇರಬೇಕು: ಅಶ್ವತ್ಥ ನಾರಾಯಣ

Last Updated 16 ಜುಲೈ 2022, 4:09 IST
ಅಕ್ಷರ ಗಾತ್ರ

ಬೆಂಗಳೂರು: ಸರ್ಕಾರಿ ಕಾಲೇಜುಗಳು ಸುಸಜ್ಜಿತವಾಗಿದ್ದು, ಪ್ರತಿ ಕಾಲೇಜಿ ನಲ್ಲೂ ಕನಿಷ್ಠ 1,500ದಿಂದ 2 ಸಾವಿರ ವಿದ್ಯಾರ್ಥಿಗಳು ಇರುವಂತೆ ನೋಡಿಕೊಳ್ಳುವುದು ಪ್ರಾಂಶುಪಾಲರ ಹೊಣೆ ಎಂದು ಉನ್ನತ ಶಿಕ್ಷಣ ಸಚಿವ ಡಾ.ಸಿ ಎನ್ ಅಶ್ವತ್ಥ ನಾರಾಯಣ ಹೇಳಿದರು.

ರಾಜ್ಯದ ಸರ್ಕಾರಿ ಪ್ರಥಮ ದರ್ಜೆ, ಎಂಜಿನಿಯರಿಂಗ್ ಮತ್ತು ಪಾಲಿಟೆಕ್ನಿಕ್ ಕಾಲೇಜುಗಳ ಪ್ರಾಂಶುಪಾಲರಿಗೆ ಶುಕ್ರವಾರ ಹಮ್ಮಿಕೊಂಡಿದ್ದ ಕಾರ್ಯಾಗಾರದಲ್ಲಿ ಅವರು ಮಾತನಾಡಿದರು.

84 ಸರ್ಕಾರಿ ಕಾಲೇಜುಗಳಲ್ಲಷ್ಟೆ ಶೇ 100ರಷ್ಟು ವಿದ್ಯಾರ್ಥಿಗಳು ಇದ್ದಾರೆ. 105 ಕಾಲೇಜುಗಳಲ್ಲಿ ಶೇ 40ರಷ್ಟು ವಿದ್ಯಾರ್ಥಿಗಳು ಮಾತ್ರ ಇದ್ದಾರೆ. ರಾಜ್ಯದ ಉನ್ನತ ಶಿಕ್ಷಣ ವಲಯದಲ್ಲಿ ಈಗಾಗಲೇ ಎನ್ಇಪಿ ಜಾರಿಯಾಗಿದೆ. ಇದಕ್ಕೆ ತಕ್ಕಂತೆ ಗುಣಮಟ್ಟದ ಕಲಿಕೆಗೆ ಸಿದ್ಧರಾಗಬೇಕು. ಈಗಾಗಲೇ ಅಭಿವೃದ್ಧಿ ಪಡಿಸಿರುವ 2,500 ಸ್ಮಾರ್ಟ್ ಕ್ಲಾಸ್-ರೂಂಗಳಲ್ಲಿ ಪಿಪಿಟಿ, ಆಡಿಯೊ ಮತ್ತು ವಿಡಿಯೊಗಳನ್ನು ಬೋಧನೆಯಲ್ಲಿ ಅಳವಡಿಸಿ‌ಕೊಳ್ಳಬೇಕು. ಉಳಿದಿರುವ 6,500 ತರಗತಿಗಳನ್ನು ಆರು ತಿಂಗಳಲ್ಲಿ ಮೇಲ್ದರ್ಜೆಗೆ ಏರಿಸಲಾಗುವುದು ಎಂದು ಭರವಸೆ
ನೀಡಿದರು.

ಉನ್ನತ ಶಿಕ್ಷಣ ಇಲಾಖೆ ಪ್ರಧಾನ ಕಾರ್ಯದರ್ಶಿ ರಶ್ಮಿ ಮಹೇಶ್, ಕಾಲೇಜು ಮತ್ತು ತಾಂತ್ರಿಕ ಶಿಕ್ಷಣ ಇಲಾಖೆಯ ಆಯುಕ್ತ ಪಿ.ಪ್ರದೀಪ್
ಮಾತನಾಡಿದರು.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT