ಗುರುವಾರ, 28 ಮಾರ್ಚ್ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ಜೂನ್ 16, 17, 18ರಂದು ಸಿಇಟಿ ಪರೀಕ್ಷೆ

Last Updated 28 ಮಾರ್ಚ್ 2022, 18:14 IST
ಅಕ್ಷರ ಗಾತ್ರ

ಬೆಂಗಳೂರು: ‘ವೃತ್ತಿಪರ ಕೋರ್ಸ್‌ಗಳ ಪ್ರವೇಶಕ್ಕೆ ಸಾಮಾನ್ಯ ಪ್ರವೇಶ ಪರೀಕ್ಷೆಯನ್ನು (ಸಿಇಟಿ) ಈ ಬಾರಿ ಜೂನ್ 16, 17 ಮತ್ತು 18ರಂದು ನಡೆಸಲು ಉದ್ದೇಶಿಸಲಾಗಿದೆ’ ಎಂದು ಉನ್ನತ ಶಿಕ್ಷಣ ಸಚಿವ ಡಾ.ಸಿ.ಎನ್. ಅಶ್ವತ್ಥನಾರಾಯಣ ತಿಳಿಸಿದರು.

ಸುದ್ದಿಗಾರರ ಜೊತೆ ಸೋಮವಾರ ಮಾತನಾಡಿದ ಅವರು, ‘ಬೇರೆ ಬೇರೆ ರಾಜ್ಯಗಳಲ್ಲಿ ಇಂಥ ಪರೀಕ್ಷೆಗೆ ಗೊತ್ತುಪಡಿಸಿಕೊಂಡಿರುವ ಸಂಭವನೀಯ ದಿನಾಂಕಗಳ ಬಗ್ಗೆ ತಿಳಿದುಕೊಂಡು ಈ ತೀರ್ಮಾನ ಕೈಗೊಳ್ಳಲಾಗಿದೆ’ ಎಂದರು.

‘ಜೂನ್ 16ರಂದು ಬೆಳಿಗ್ಗೆ ಜೀವವಿಜ್ಞಾನ, ಮಧ್ಯಾಹ್ನ ಗಣಿತ, 17ರಂದು ಬೆಳಿಗ್ಗೆ ಭೌತವಿಜ್ಞಾನ ಮತ್ತು ಮಧ್ಯಾಹ್ನ ರಸಾಯನವಿಜ್ಞಾನ ಪರೀಕ್ಷೆಗಳು ನಡೆಯಲಿವೆ’ ಎಂದು ಹೇಳಿದರು.

‘ಹೊರನಾಡು ಹಾಗೂ ಗಡಿಭಾಗದ ವಿದ್ಯಾರ್ಥಿಗಳಿಗೆ ಕನ್ನಡ ಪರೀಕ್ಷೆಯನ್ನು 18ರಂದು ನಡೆಸಲು ಉದ್ದೇಶಿಸಲಾಗಿದೆ’ ಎಂದು ಅವರು ತಿಳಿಸಿದರು.

ಆಸಕ್ತ ಅಭ್ಯರ್ಥಿಗಳು ಏಪ್ರಿಲ್ 5ರಿಂದ 20ರವರೆಗೆ ತಮ್ಮ ಹೆಸರು ನೋಂದಾಯಿಸಿ, ಆನ್‌ಲೈನ್‌ ಮೂಲಕ ಅರ್ಜಿ ಸಲ್ಲಿಸಬಹುದು. ಆನ್‌ಲೈನ್‌ ಮೂಲಕವೇ ನಿಗದಿತ ಶುಲ್ಕ ಸಲ್ಲಿಸಲು ಏ. 22ರವರೆಗೆ ಅವಕಾಶವಿದೆ.

‘ಶುಲ್ಕ ಪಾವತಿಸಿದ ಬಳಿಕ, ಸಲ್ಲಿಸಿದ ಅರ್ಜಿಯಲ್ಲಿರುವ ಮಾಹಿತಿ ಪರಿಷ್ಕರಿಸುವುದಿದ್ದರೆ ಅಂಥವರಿಗೆ ಮೇ 2ರಿಂದ 6ವರೆಗೆ ಕಾಲಾವಕಾಶ ಇರಲಿದೆ. ಮೇ 30ರಿಂದ ಪ್ರವೇಶಪತ್ರಗಳನ್ನು ಡೌನ್‌ಲೋಡ್‌ ಮಾಡಿಕೊಳ್ಳಬಹುದು’ ಎಂದೂ ಅವರು ವಿವರಿಸಿದರು.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT